ಸಗ್ರಿ ವಾರ್ಡ್‌ಗೆ ಹೆಚ್ಚಿನ ಅನುದಾನ: ಪ್ರಮೋದ್ ಭರವಸೆ
Team Udayavani, Mar 26, 2017, 1:18 PM IST
ಉಡುಪಿ: ಪ್ರಾಮಾಣಿಕ ಸೇವೆಯ 1,708 ಕೋ.ರೂ. ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದ್ದರೂ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿವೆ. ಇದಕ್ಕಾಗಿ ಸರಕಾರದಿಂದ ವಿವಿಧ ಯೋಜನೆಗಳ ಮುಖಾಂತರ ಅನುದಾನ ಒದಗಿಸುವಂತೆ ಬೇಡಿಕೆ ಇಟ್ಟಿದ್ದೇನೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಭರವಸೆ ನೀಡಿದರು.
ಸಗ್ರಿ ಚಕ್ರತೀರ್ಥ ರಸ್ತೆಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ “ಸಗ್ರಿ ವಾರ್ಡ್ ಮಟ್ಟದ ಜನಸಂಪರ್ಕ ಸಭೆ’ ಅಧ್ಯಕ್ಷತೆ ವಹಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಗ್ರಿ ವಾರ್ಡ್ ನಗರಸಭೆ ವ್ಯಾಪ್ತಿಯಲ್ಲಿದ್ದರೂ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೇಡಿಕೆಯಿದೆ. ನಗರಸಭೆ ವ್ಯಾಪ್ತಿಯ ಅಭಿವೃದ್ಧಿಗಾಗಿ ಈಗಾಗಲೇ 50 ಕೋ.ರೂ. ಅನುದಾನದ ಬೇಡಿಕೆ ಸಲ್ಲಿಸಿದ್ದು, ಆ ಅನುದಾನದಲ್ಲಿ ಸಗ್ರಿ ವಾರ್ಡ್‌ಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದರು.
ಪ್ರಜೆಗಳೇ ಪ್ರಭುಗಳು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಪ್ರಜೆಗಳೇ ಪ್ರಭುಗಳು’ ಈ ನೆಲೆಯಲ್ಲಿ ಪ್ರಜೆಗಳ ಕಷ್ಟ-ಕಾರ್ಪಣ್ಯ ಆಲಿಸಬೇಕು, ಬಗೆಹರಿಸಬೇಕೆಂಬ ಸದುದ್ದೇಶದಿಂದ ಸರಕಾರದ ಎಲ್ಲ ಅಧಿಕಾರಿಗಳೊಂದಿಗೆ ಜನರಿದ್ದೆಡೆಗೆ ತೆರಳಿ ಅಹವಾಲು ಸ್ವೀಕರಿಸಿ ಪರಿಹಾರ ನೀಡುವ “ಜನಸಂಪರ್ಕ ಸಭೆ’ಯನ್ನು ಆರಿಸಿಕೊಂಡಿದ್ದೇನೆ ಎಂದರು.
ಸಿದ್ದರಾಮಯ್ಯ ನೇತೃತ್ವದ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ರಾಜ್ಯದ ಜನರ ವಿಶ್ವಾಸಕ್ಕೆ ಪಾತ್ರವಾಗಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ವಿವಿಧ ಇಲಾಖೆಗಳ ಅನುದಾನದಿಂದ 1,708 ಕೋ.ರೂ. ಅಭಿವೃದ್ಧಿಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆಗೆ ಉಡುಪಿ
ವಿಧಾನಸಭಾ ಕ್ಷೇತ್ರಕ್ಕೆ 320 ಕೋ.ರೂ., ನಗರೋತ್ಥಾನ ಕಾರ್ಯಕ್ಕೆ 35 ಕೋ.ರೂ. ಮಂಜೂ ರಾಗಿದೆ ಎಂದು ಅವರು ಹೇಳಿದರು.
ಸವಲತ್ತು ವಿತರಣೆ: ಇದೇ ಸಂದರ್ಭ ಸಚಿವರು ಅರ್ಹ ಫಲಾನುಭವಿಗಳಿಗೆ ವಿವಿಧ ಪಿಂಚಣಿ, ಸವಲತ್ತು, ಸೌಲಭ್ಯಗಳನ್ನು ವಿತರಿಸಿದರು. ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ವಿವಿಧ ಇಲಾಖಾಧಿಕಾರಿಗಳ ಮುಖಾಂತರ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಸಗ್ರಿ ವಾರ್ಡ್ ಸದಸ್ಯೆ ಲತಾ ಆನಂದ ಶೇರಿಗಾರ್, ನಗರಸಭೆ ಸದಸ್ಯರಾದ ಪಿ. ಯುವರಾಜ್, ಗಣೇಶ್ ನೇರ್ಗಿ, ಜನಾರ್ದನ್ ಭಂಡಾರ್ಕರ್, ಹಸನ್ ಸಾಹೇಬ್, ರಮೇಶ್ ಪೂಜಾರಿ, ಸುಕೇಶ್ ಕುಂದರ್, ಸತೀಶ್ ಪುತ್ರನ್, ಹೇಮಲತಾ ಹಿಲರಿ ಜತ್ತನ್ನ, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್, ಸರ್ಕಲ್ ಇನ್ಸ್‌ಪೆಕ್ಟರ್ ನವೀನ್ ಚಂದ್ರ ಜೋಗಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ ಪ್ರಸ್ತಾವನೆಗೈದರು. ಸುಧಾಕರ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.