BSNL ನೆಟ್‌ವರ್ಕ್ ಸಮಸ್ಯೆ ಪರಿಹಾರಕ್ಕೆ ಸಂಸದರ ಸೂಚನೆ
Team Udayavani, Jul 16, 2024, 12:32 AM IST
ಮಣಿಪಾಲ: ಜಿಲ್ಲೆಯ ಗ್ರಾಮೀಣ ಭಾಗದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಮತ್ತು ಕಡಿಯಾಳಿಯಲ್ಲಿ ಖಾಲಿ ಇರುವ ಬಿಎಸ್‌ಎನ್‌ಎಲ್ ಕಟ್ಟಡವನ್ನು ಕೌಶಲ ಕೇಂದ್ರವಾಗಿ ಪರಿವರ್ತಿ ಸಲು ಯೋಚಿಸುವಂತೆ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಎಸ್‌ಎನ್‌ಎಲ್ ಅಧಿಕಾರಿಗಳ ಸಭೆ ನಡೆಸಿ, 196 ಟವರ್‌ಗಳು ಕಾರ್ಯನಿರ್ವಹಿಸುತ್ತಿದ್ದರೂ ಅನೇಕ ಕಡೆಗಳಲ್ಲಿ ಸಮಸ್ಯೆಯಿದೆ. ಗ್ರಾಹಕರಿಗೆ 4ಜಿ, 5ಜಿ ಸೇವೆಯನ್ನು ಆದಷ್ಟು ಬೇಗ ನೀಡುವ ನಿಟ್ಟಿನಲ್ಲಿ ಯೋಚಿಸಬೇಕು ಎಂದರು.
ಜಿಲ್ಲೆಯ ವಂಡ್ಸೆ, ಕೊಡ್ಲಾಡಿ, ಕೆರಾಡಿ ಹಾಗೂ ಯಳಜಿತ್‌ನಲ್ಲಿ ತಹಶೀಲ್ದಾರ್ ಮೂಲಕ ನಿವೇಶನ ಪಡೆದು ಟವರ್ ನಿರ್ಮಾಣ ಕಾಮಗಾರಿ ಆರಂಭಿಸಬೇಕು. ಸಿದ್ದಾಪುರ ಹಾಗೂ ನಾಡಾ³ಲ್‌ನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಂಡು ಟವರ್ ನಿರ್ಮಾಣ ಮಾಡಬೇಕು. ನಿರ್ಮಾಣ ಹಂತದಲ್ಲಿರುವ 41 ಟವರ್‌ಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂಬ ಸೂಚನೆ ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಟವರ್ ನಿರ್ವಹಣೆಗೆ ಸಿಬಂದಿ ಕೊರತೆ ಇರುವುದರಿಂದ ಗ್ರಾ.ಪಂ. ಮೂಲಕ ಟವರ್ ನಿರ್ವಹಣೆ ಯೋಚನೆ ನಡೆಸ ಬಹುದು ಎಂಬ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹಾಗೂ ಬಿಎಸ್‌ಎನ್‌ಎಲ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.