MUDA Scam; ಉಡುಪಿಯಲ್ಲಿ ರಾಜ್ಯಪಾಲರ ವಿರುದ್ಧಕಾಂಗ್ರೆಸ್ ಪ್ರತಿಭಟನೆ
Team Udayavani, Aug 19, 2024, 12:08 PM IST
ಉಡುಪಿ: ರಾಜ್ಯಪಾಲರ ನಡೆಯನ್ನು ಖಂಡಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿ ರಾಜ್ಯಪಾಲರ ನಡೆ ಮತ್ತು ಬಿಜೆಪಿ, ಜೆಡಿಎಸ್ ವಿರುದ್ಧ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅನಂತರ ವಾಹನ ಜಾಥಾದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಎಡಿಸಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.
ಬ್ರಹ್ಮಗಿರಿ ವೃತ್ತದಲ್ಲಿ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜನಪರ ಕಾಂಗ್ರೆಸ್ ಸರಕಾರದ ಯಶಸ್ಸನ್ನು ಸಹಿಸದ ಬಿಜೆಪಿ ಅಡ್ಡದಾರಿಯಲ್ಲಿ ಸರಕಾರವನ್ನು ಕೆಡವಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಜನರ ಸಂಕಷ್ಟಗಳನ್ನು ಅರಿತು ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿ ಬಡ ಜನರ ಮನೆಗಳನ್ನು ಬೆಳಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಆದರೆ ಬಿಜೆಪಿ ಸ್ವಾರ್ಥ ರಾಜಕಾರಣಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಂಡು ಸಿಎಂ ಅವರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜು ನಾಥ್ ಭಂಡಾರಿ ಮಾತನಾಡಿ, ಬಿಜೆಪಿ ಸರಕಾರ ಬೀಳಿಸಲು ಎಲ್ಲ ರೀತಿ ಯ ಪ್ರಯತ್ನ ನಡೆಸುತ್ತಿದೆ. ಆದರೆ ನ್ಯಾಯ ಕಾಂಗ್ರೆಸ್ ಪರವಾಗಿದೆ. ನಾವು ರಾಜಕೀಯ ಹೋರಾಟ ಮುಂದುವರಿಸಲಿದ್ದೇವೆ ಎಂದರು.
ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ರಾಜ್ಯಪಾಲರ ನಡೆ ಖಂಡನೀಯ. ಬಿಜೆಪಿ ಸ್ವಾರ್ಥದ ತಂತ್ರಕ್ಕೆ ಕಾಂಗ್ರೆಸ್ ಸರಕಾರ ತಕ್ಕ ಉತ್ತರ ನೀಡಲಿದೆ ಎಂದರು.
ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಸಹಿತ ಜನ ವಿರೋಧಿ ನೀತಿಗಳಿಂದ ಬೇಸತ್ತಿದ್ದ ಜನರು ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದು ಮುಖಂಡ ರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಗೋಪಾಲ ಪೂಜಾರಿ ಹೇಳಿದರು.
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ದಿನೇಶ್ ಪುತ್ರನ್, ಹರೀಶ್ ಕಿಣಿ, ರಮೇಶ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.