ಗ್ರಾಮೀಣ ಪರಿಸರದಲ್ಲಿ ಶೈಕ್ಷಣಿಕ ಸಾಧನೆಗೈದ ಮುದರಂಗಡಿ ಸರಕಾರಿ ಪ.ಪೂ.ಕಾಲೇಜು
Team Udayavani, May 12, 2019, 6:00 AM IST
ಶಿರ್ವ: ಗ್ರಾಮೀಣ ಪ್ರದೇಶದ ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಿ ಸದೃಢ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ಸದುದ್ದೇಶದಿಂದ ಮುದರಂಗಡಿ ಸರಕಾರಿ ಪ್ರೌಢ ಶಾಲೆಯು 1978ರಲ್ಲಿ ಪ್ರಾರಂಭಗೊಂಡು ಗ್ರಾಮೀಣ ಪರಿಸರದಲ್ಲಿ ಶೈಕ್ಷಣಿಕ ಸಾಧನೆಗೈದಿದೆ.
1994ರಲ್ಲಿ ಸರಕಾರಿ ಪದವಿಪೂರ್ವ ಕಾಲೇಜಾಗಿ ಮೇಲ್ದರ್ಜೇ ಗೇರಿಸಲ್ಪಟ್ಟು ಗ್ರಾಮೀಣ ಪ್ರದೇಶಗಳಾದ ಪಿಲಾರು, ಸಾಂತೂರು, ಕುತ್ಯಾರು, ಅಡ್ವೆ, ನಂದಿಕೂರು, ಕಂಚಿನಡ್ಕ, ಪಾದೆಬೆಟ್ಟು, ಎಲ್ಲೂರು, ಪಣಿಯೂರು, ಅದಮಾರು, ಬೆಳಪು,ಕಳತ್ತೂರು ಪರಿಸರದ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ.
ಶಿರ್ವ- ಮುದರಂಗಡಿ ಮುಖ್ಯರಸ್ತೆಯ ಬದಿಯಲ್ಲಿ 6.77 ಎಕ್ರೆ ವಿಶಾಲ ಮತ್ತು ಪ್ರಶಾಂತ ವಾತಾವರಣದಲ್ಲಿ ಸ್ಥಾಪಿಸಲ್ಪಟ್ಟ ವಿದ್ಯಾಸಂಸ್ಥೆಯು ಯಾವುದೇ ಡೊನೇಶನ್ ಇಲ್ಲದೆ ಸರಕಾರಿ ಶುಲ್ಕದೊಂದಿಗೆ ಗುಣಮಟ್ಟದ, ಶಿಸ್ತುಬದ್ಧ ಶಿಕ್ಷಣ ನೀಡುತ್ತಿದೆ.
ವಾಣಿಜ್ಯ ಮತ್ತು ಕಲಾ ವಿಭಾಗ
ಸಂಸ್ಥೆಯ ಪದವಿಪೂರ್ವ ವಿಭಾಗದಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದಾಗಿದೆ. ಕನ್ನಡ ಮತ್ತು ಆಂಗ್ಲ ಭಾಷೆಯೊಂದಿಗೆ ಕಲಾ ವಿಭಾಗದಲ್ಲಿ ಇತಿಹಾಸ,ಅರ್ಥಶಾಸ್ತ್ರ,ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ಪಠ್ಯ ವಿಷಯಗಳಿದ್ದು ವಾಣಿಜ್ಯ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ ಪಠ್ಯ ವಿಷಯಗಳಿರುತ್ತವೆ.
ಉತ್ತಮ ಫಲಿತಾಂಶ
2019 ಮಾರ್ಚ್‌ನಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. 1ವಿಶಿಷ್ಟ ಶ್ರೇಣಿ, 18 ಪ್ರಥಮ ಶ್ರೇಣಿ, 6 ದ್ವಿತೀಯ ಮತ್ತು 2 ತೃತೀಯ ಶ್ರೇಣಿಯಲ್ಲಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಸಂಸ್ಥೆಯು ಗುಣಾತ್ಮಕ ಫಲಿತಾಂಶ ಪಡೆದಿದೆ. ಕಳೆದ 5 ವರ್ಷಗಳಲ್ಲಿ ಸರಾಸರಿ ಶೇ. 95.2 ಫಲಿತಾಂಶ ಪಡೆದಿದ್ದು ದಾಖಲೆಯಾಗಿದೆ.
ಉಪನ್ಯಾಸಕ ವೃಂದ
ವಾಣಿಜ್ಯ ಶಾಸ್ತ್ರದಲ್ಲಿ 25 ವರ್ಷಗಳ ಬೋಧನ ಅನುಭವದ ಜತೆಗೆ 3 ವರ್ಷ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಂಶು ಪಾಲ ರಘುರಾಮ ನಾಯಕ್ ಅವರ ಜತೆಗೆ ಸರಾಸರಿ 20 ವರ್ಷಗಳ ಬೋಧನ ಅನುಭವವಿರುವ ಉಪನ್ಯಾಸಕ ವೃಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇತಿಹಾಸ ಉಪನ್ಯಾಸಕರ ಹುದ್ದೆ ತೆರವಾಗಿದ್ದರೂ ಸರಕಾರದಿಂದ ನೇಮಿಸಲ್ಪಟ್ಟ ಅತಿಥಿ ಉಪನ್ಯಾಸಕರು ಇತಿಹಾಸ ವಿಷಯವನ್ನು ಬೋಧಿಸುತ್ತಿದ್ದಾರೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಸಂಸ್ಥೆಯು ರಾಜ್ಯಮಟ್ಟದಲ್ಲಿ ಸಂಸ್ಥೆಯು 3ನೇ ಸ್ಥಾನವನ್ನು ಪಡೆದಿದೆ.
ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳು
ಡೊನೇಶನ್ ಇಲ್ಲದೆ ಸರಕಾರ ನಿಗದಿಪಡಿಸಿದ ಶುಲ್ಕದೊಂದಿಗೆ ಅನುಭವಿ ವಿಷಯ ತಜ್ಞ ಮತ್ತು ಪರಿಣತಿ ಹೊಂದಿದ ಉಪನ್ಯಾಸಕರಿಂದ ಪಠ್ಯಬೋಧನೆ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಶಾಲಾ ಶೈಕ್ಷಣಿಕ ಪ್ರವಾಸ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳಿದ್ದು , ಅದಾನಿ ಪವರ್ ಕಾರ್ಪೋರೇಶನ್‌ನಿಂದ ವಿದ್ಯಾರ್ಥಿಗಳಿಗಾಗಿ ಉಚಿತ ನೋಟ್ಬುಕ್, ಕೊಡೆ, ಉಪಾಹಾರ ಇತ್ಯಾದಿಗಳನ್ನು ನೀಡಲಾಗುತ್ತಿದೆ.
ಕಾಲೇಜು ಅಭಿವೃದ್ಧಿ ಸಮಿತಿ
ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಆವರ ನೇತೃತ್ವದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯು ಕಾಲೇಜಿನ ಅಭಿವೃದ್ಧಿಗಾಗಿ ಹಲವಾರು ಕ್ರಿಯಾ ಯೋಜನೆಗಳನ್ನು ಹಮ್ಮಿಕೊಂಡಿದೆ. ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ರವೀಂದ್ರ ಪ್ರಭು,ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾ.ಪಂ. ಸದಸ್ಯ ಮೈಕಲ್ ರಮೇಶ್ ಡಿ‡ ಸೋಜಾ, ಮುದರಂಗಡಿ ಗ್ರಾ.ಪಂ.ಅಧ್ಯಕ್ಷ ಡೇವಿಡ್ ಡಿ‡ಸೋಜಾ ಸಂಸ್ಥೆಯ ಅಭಿವೃದ್ಧಿಯಲ್ಲಿ ಕೈಜೋಡಿಸಿದ್ದಾರೆ.
ಸಂಸ್ಥೆಯ ಹಳೆವಿದ್ಯಾರ್ಥಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಸರಕಾರದ ಅನುದಾನ ನೀಡಿ ಸಂಸ್ಥೆಯ ಅಭಿವೃದ್ಧಿಯಲ್ಲಿ ವಿಶೇಷ ಮುತುವರ್ಜಿ ವಹಿಸುತ್ತಿದ್ದಾರೆ.
ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನದ ಸುಧೆಯನ್ನು ಹರಿಸುವ ಮೂಲಕ ಶಾಲೆಯು ಸರ್ವರ ಪ್ರೋತ್ಸಾಹ ಹಾಗೂ ಬೆಂಬಲದೊಂದಿಗೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ನೀಡಿ ಮುದರಂಗಡಿ ಪೇಟೆಯ ಹೃದಯ ಭಾಗದಲ್ಲಿ ಜನಪ್ರಿಯ ಸರಕಾರಿ ಶಿಕ್ಷಣ ಸಂಸ್ಥೆಯಾಗಿ ಮೂಡಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.