ಪ್ರಥಮನ ಏಕಾದಶಿ: ವಿವಿಧೆಡೆ ಮುದ್ರಾಧಾರಣೆ
Team Udayavani, Jul 24, 2018, 9:42 AM IST
ಉಡುಪಿ/ಮಂಗಳೂರು: ಉಡುಪಿ ಶ್ರೀಕೃಷ್ಣ ಮಠವೂ ಸೇರಿದಂತೆ ನಾಡಿನ ವಿವಿಧೆಡೆ ವಿವಿಧ ಮಠಾಧೀಶರು ಸೋಮವಾರ ಪ್ರಥಮನ ಏಕಾದಶಿಯಂದು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು. ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಬೇಗ ಮಹಾಪೂಜೆಯನ್ನು ಪೂರೈಸಿದ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅಪರಾಹ್ನದ ವರೆಗೆ ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು. ಮುದ್ರಾಧಾರಣೆಗಾಗಿ ಬಂದವರ ಸರತಿ ಸಾಲು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಸರೋವರದ ಹಿಂಬದಿವರೆಗೂ ಇತ್ತು. ಬೆಳಗ್ಗೆ ಬಾರದವರಿಗೆ ಸಂಜೆ ಮತ್ತು ರಾತ್ರಿ ಪೂಜೆಯಾದ ಬಳಿಕವೂ ಮುದ್ರಾಧಾರಣೆ ನಡೆಸಲಾಯಿತು.
ಶ್ರೀ ಕೃಷ್ಣಾಪುರ ಮಠಾಧೀಶರು ಕೃಷ್ಣಾಪುರ ಮಠದಲ್ಲಿ, ಮಂಗಳೂರು, ಕಾರ್ಕಳ, ಪಾವಂಜೆ ಮೊದಲಾದೆಡೆ ಶ್ರೀ ಬಾಳೆಗಾರು ಮಠಾಧೀಶರು, ಉಜಿರೆ, ಸುಬ್ರಹ್ಮಣ್ಯ ಮೊದಲಾದೆಡೆ ಸುಬ್ರಹ್ಮಣ್ಯ ಮಠಾಧೀಶರು ಮುದ್ರಾಧಾರಣೆ ನಡೆಸಿದರು. ಮುದ್ರಾಧಾರಣೆ ಮಾಡುವ ಮುನ್ನ ವೈದಿಕರು ಸುದರ್ಶನ ಹೋಮ ನಡೆಸಿದರು. ಅದರಲ್ಲಿ ಬಿಸಿ ಮಾಡಿದ ಶಂಖ, ಚಕ್ರಗಳ ಚಿಹ್ನೆಗಳನ್ನು ಮಠಾಧೀಶರು ಭಕ್ತರ ತೋಳಿನಲ್ಲಿ ಮುದ್ರಿಸಿದರು. ಬೆಂಗಳೂರು, ಮೈಸೂರು, ಚೆನ್ನೈ ಮೊದಲಾದೆಡೆ ಮಠಾಧೀಶರು ವಿವಿಧೆಡೆ ಮುದ್ರಾಧಾರಣೆ ನಡೆಸಿದರು. ಹಲವು ದೇವಸ್ಥಾನಗಳಲ್ಲಿ ನಿರಂತರ ಭಜನೆ, ಪೂಜಾದಿಗಳು ನಡೆದವು.
ಗೃಹಸ್ಥರ ಮುದ್ರಾಧಾರಣೆ
ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ವೆಂಕಟರಮಣ ಉಪಾಧ್ಯಾಯರು ಮುದ್ರಾಧಾರಣೆ ನಡೆಸಿದರು. ಗೃಹಸ್ಥರು ಮುದ್ರಾಧಾರಣೆ ನಡೆಸುವ ಏಕೈಕ ಸ್ಥಳ ಇದಾಗಿದೆ. ಮಧ್ವಾಚಾರ್ಯರು ಕೊಟ್ಟ ಮುದ್ರಾಧಾರಣೆಯ ಉಪಕರಣ ಶಿಥಿಲವಾದ ಕಾರಣ ಕಳೆದ ವರ್ಷ ಪೇಜಾವರ ಶ್ರೀಗಳ ಪರ್ಯಾಯದಲ್ಲಿ ಹೊಸ ಮುದ್ರೆಗಳನ್ನು ಪಡೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.