ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ : ಆಟಿ ಕಷಾಯ ವಿತರಣೆ
1200ಕ್ಕೂ ಅಧಿಕ ಮಂದಿಗೆ 80 ಲೀಟರ್ ಕಷಾಯ ವಿತರಣೆ
Team Udayavani, Aug 1, 2019, 5:26 PM IST
ಕಾಪು: ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಆ. 1ರಂದು ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.
ಹಿಂದು ರಕ್ಷಾ ವೆಲ್‌ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಅತ್ಯಂತ ಮಹತ್ವವನ್ನು ಪಡೆದಿದೆ. ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಆಯುರ್ವೇದ ಕಾಲೇಜಿನ ಜನಪದ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಆಟಿ ಅಮಾವಾಸ್ಯೆಯ ದಿನ ಹಾಲೆ ಮರದ ತೊಗಟೆಯಲ್ಲಿ ಔಷಧೀಯ ಗುಣಧರ್ಮ ಹೆಚ್ಚಾಗಿರುವದನ್ನು ಸಂಶೋಧನೆಯ ಮೂಲಕ ಧೃಢಪಡಿಸಿದೆ. ಈ ಧಾರ್ಮಿಕ ಆಚರಣೆಯನ್ನು ನಿರಂತರವಾಗಿರಿಸುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳಿಂದ ಆಟಿ ಕಷಾಯ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು.
ಮೂಳೂರು ಪಡು ಹಳೆ ಭಜನಾ ಮಂದಿರ ಮತ್ತು ಮಹಾಲಕ್ಷ್ಮೀ ನಗರದ ಬಳಿ ಬೆಳಿಗ್ಗೆ 6.00ರಿಂದ ಕಷಾಯದ ವಿತರಣೆ ಮಾಡಲಾಗಿದ್ದು, ಸರ್ವಧರ್ಮೀಯರ ಸಹಿತ ಸುಮಾರು 1,200ಕ್ಕೂ ಅಧಿಕ ಮಂದಿ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಮದ್ದನ್ನು ಸ್ವೀಕರಿಸಿದರು. ಕೈಪುಂಜಾಲು, ಕಾಪು, ಪೊಲಿಪು, ಎರ್ಮಾಳು, ಉಚ್ಚಿಲ, ಪಣಿಯೂರು, ಮೂಳೂರು ಮತ್ತಿತರ ಪ್ರದೇಶಗಳಿಂದ ಆಗಮಿಸಿ ಮದ್ದು ಪಡೆದುಕೊಂಡಿದ್ದಾರೆ.
ಸ್ಥಳೀಯರಾದ ಸಂಜೀವ ಅಮೀನ್ ಸಹಕಾರದೊಂದಿಗೆ ಟ್ರಸ್ಟ್ ನ ಸದಸ್ಯರು ಜೊತೆ ಸೇರಿ ಹಾಲೆ ಮರದ ಕೆತ್ತೆಯಿಂದ ಕಷಾಯವನ್ನು ಸಿದ್ಧಪಡಿಸಿದ್ದರು.
ಮೂಳೂರು ಹಿಂದು ರಕ್ಷಾ ವೆಲ್‌ಫೇರ್ ಟ್ರಸ್ಟ್ ನ ಅಧ್ಯಕ್ಷ ಚಂದ್ರಕಾಂತ್ ಕೆ. ಮೆಂಡನ್, ಗೌರವ ಸಲಹೆಗಾರ ಅಶೋಕ್ ಪುತ್ರನ್, ಉಪಾಧ್ಯಕ್ಷ ಪ್ರದೀಪ್ ಎಸ್. ಪುತ್ರನ್, ದಿನೇಶ್ ಪಾಣಾರ, ಸಂಜೀವ ಅಮೀನ್, ಸುಖೇಶ್ ಡಿ,. ಪ್ರತೀಕ್ ಸುವರ್ಣ, ನಾಗೇಶ್, ಮಧುಕಿರಣ್ ಶ್ರೀಯಾನ್, ಅರುಣ್ ಕುಲಾಲ್, ಸುನಿಲ್ ಕರ್ಕೇರ, ಜಿತೇಶ್ ಕುಮಾರ್, ಪತ್ರಕರ್ತರಾದ ಬಾಲಕೃಷ್ಣ ಪೂಜಾರಿ, ವಾದಿರಾಜ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಸಾಮಾನ್ಯವಾಗಿ ಹಾಲೆ ಮರವು ಹೂ ಬಿಡುವ ಒಂದು ತಿಂಗಳ ಮೊದಲೇ ಆಟಿ ಅಮಾವಾಸ್ಯೆ ಬರುವುದರಿಂದ ಮರದ ತೊಗಟೆಯಲ್ಲಿ ಔಷಧೀಯ ಗುಣಧರ್ಮ ಹೆಚ್ಚಿರುತ್ತದೆ. ಈ ಸಂದರ್ಭರ್ದಲ್ಲಿ ತಯಾರಿಸಿದ ಕಷಾಯ ಕುಡಿಯುವುದರಿಂದ ಮನುಷ್ಯನನ್ನು ಕಾಡುವ ಅನೇಕ ರೋಗ ರುಜಿನಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಈ ನಂಬಿಕೆಯನ್ನು ಪುರಾಣ ಕಥೆಗಳು ಮತ್ತು ವೈಜ್ಞಾನಿಕ ಸಂಶೋಧಕರು ಕೂಡ ‘ಧೃಢಪಡಿಸಿರುವುದರಿಂದ ಹಾಲೆ ಮರದ ಕಷಾಯಕ್ಕೆ ಜನರು ಹೆಚ್ಚು ಮಹತ್ವ ನೀಡುತ್ತಾರೆ.
– ಧೀರೇಶ್ ಡಿ. ಪಿ., ಪ್ರಧಾನ ಕಾರ್ಯದರ್ಶಿ, ಹಿಂದೂ ರಕ್ಷಾ ವೆಲ್ ಫೇರ್ ಟ್ರಸ್ಟ್, ಮೂಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.