Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Team Udayavani, Nov 24, 2024, 10:08 AM IST
ಉಡುಪಿ/ ಮುಂಬೈ: ಮುಂಬೈ ನಗರದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ ವಿಟ್ಠಲ ಪ್ರಭು ಅವರು ದೈಸರ್ ನಲ್ಲಿ ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಕೆಲವೇ ಕ್ಷಣಗಳಲ್ಲೇ ಅಸುನೀಗಿದ್ದಾರೆ.
ಮುಂಬೈ ದೈಸರ್ ಕಾಶಿಮಠದಲ್ಲಿ ಶನಿವಾರ (ನ. 23) ದಂದು ಕುಕ್ಕೆಹಳ್ಳಿ ವಿಟ್ಠಲ ಪ್ರಭು ಅವರ ನಿರ್ದೇಶನದಲ್ಲಿ ಯಕ್ಷಗಾನ ನಡೆಯುತ್ತಿತ್ತು. ಭಾಗವತಿಕೆ ನಡೆಸುತ್ತಿದ್ದ ವೇಳೆ ಎದೆ ನೋವು ಬಂದು ಭಾಗವತಿಕೆಯನ್ನು ಬೇರೊಬ್ಬ ಭಾಗವತನಿಗೆ ಒಪ್ಪಿಸಿ ಇಲ್ಲವೇ ಕ್ಷಣಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ.
ವಿಟ್ಠಲ್ ಪ್ರಭು ಅವರು ಯಕ್ಷಗಾನವನ್ನು ಮುಂಬೈಯಲ್ಲಿ ಪರಿಚಯಿಸಲು ತನ್ನದೇ ಒಂದು ತಂಡವನ್ನು ಕಟ್ಟಿಕೊಂಡು ಮುಂಬೈ ನಗರದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಯಕ್ಷಗಾನವನ್ನು ಕಲಿಸಿ ಯಕ್ಷಗಾನ ಭಾಗವತಿಗೆ, ಪಾತ್ರಧಾರಿ, ಯಕ್ಷಗಾನ ತಾಳಮದ್ದಲೆ, ಯಕ್ಷಗಾನ ನಿರ್ದೇಶನ, ಮರಾಠಿ ಹಾಗೂ ಕೊಂಕಣಿ ಭಾಷೆಯಲ್ಲಿ ಯಕ್ಷಗಾನ, ಮುಂತಾದ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.