ಮುನಿಯಾಲು ಪೇಟೆ ಬಂದ್‌

Team Udayavani, Nov 20, 2018, 2:45 AM IST

ajekar-19-11.jpg

ಅಜೆಕಾರು: ಸರಕಾರಿ ಪದವಿ ಪೂರ್ವ ಕಾಲೇಜು ಮುನಿಯಾಲು ಇದರ ಪ್ರೌಢ ಶಾಲಾ ವಿಭಾಗದ ಮೂವರು ಶಿಕ್ಷಕರ ಮೇಲೆ ಸುಳ್ಳು ಕೇಸು ದಾಖಲಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಪೋಷಕರು ಹಾಗೂ ಸ್ಥಳೀಯರು ಸೇರಿ ಬೃಹತ್‌ ಪ್ರತಿಭಟನೆ ನ. 19ರಂದು ಮುನಿಯಾಲು ಪೇಟೆಯಲ್ಲಿ ನಡೆಸಿದರು. ಈ ಸಂದರ್ಭ ಮುನಿಯಾಲು ಪೇಟೆಯ ವರ್ತಕರು ಹಾಗೂ ರಿಕ್ಷಾ ಚಾಲಕ ಮಾಲಕರು ಪ್ರತಿಭಟನೆ ಬೆಂಬಲಿಸಿ ಸ್ವಇಚ್ಛೆಯಿಂದ ಬಂದ್‌ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮುಟ್ಲುಪಾಡಿ ಸತೀಶ್‌ ಶೆಟ್ಟಿ ಮಾತನಾಡಿದರು. ಶಿಕ್ಷಕರ ಮೇಲೆ ಸುಳ್ಳು ಕೇಸು ದಾಖಲಿಸಿರುವುದರಿಂದ ಮನನೊಂದು ಕಾಲೇಜು ಅಭಿವೃದ್ಧಿ ಸಮಿತಿಗೆ ತತ್‌ಕ್ಷಣದಿಂದಲೇ ರಾಜೀನಾಮೆ ನೀಡುತ್ತಿರುವುದಾಗಿ ಮುಟ್ಲುಪಾಡಿ ಸತೀಶ್‌ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಹೇಳಿದರು. ಸದಸ್ಯ ಆನಂದ ಪೂಜಾರಿ ಸಹ ಸಮಿತಿಗೆ ರಾಜೀನಾಮೆ ಸಲ್ಲಿಸಿದರು.

ಉದ್ಯಮಿ ಉದಯಕುಮಾರ್‌ ಶೆಟ್ಟಿ, ವಿದ್ಯಾರ್ಥಿಗಳ ಪರವಾಗಿ ವಿದ್ಯಾರ್ಥಿನಿ ಶ್ವೇತಾ, ಉದ್ಯಮಿ ದಿನೇಶ್‌ ಪೈ, ದಲಿತ ಸಂಘಟನೆಯ ಮಾಜಿ ಸಂಚಾಲಕರಾದ ಗೋಪಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶಂಕರ್‌ ಶೆಟ್ಟಿ ಅಂಡಾರು, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಆನಂದ ಪೂಜಾರಿ, ಉದ್ಯಮಿ ಉಮೇಶ್‌ ಹೆಗ್ಡೆ, ಮುನಿಯಾಲು ಶಂಕರ್‌ ಶೆಟ್ಟಿ, ಉದ್ಯಮಿ ಸುದೀಪ್‌ ಅಜಿಲ ಸುಳ್ಳು ಕೇಸು ದಾಖಲಿಸಿರುವುದನ್ನು ವಿರೋಧಿಸಿ ಮಾತನಾಡಿದರು.

ವರಂಗ ಗ್ರಾ.ಪಂ. ಅಧ್ಯಕ್ಷ ಸುರೇಂದ್ರ ಶೆಟ್ಟಿ, ಹಿರಿಯರಾದ ಶ್ರೀಧರ ಪೈ, ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌, ತಾ.ಪಂ. ಸದಸ್ಯೆ ಸುಲತಾ ರಾಮಕೃಷ್ಣ, ಹಳೆವಿದ್ಯಾರ್ಥಿ ಸಂಘದ ಪ್ರಸನ್ನ ಶೆಟ್ಟಿ ಉಪಸ್ಥಿತರಿದ್ದರು. ಪ್ರತಿಭಟನಾ ಸಭೆಗೂ ಮುನ್ನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲೇಜಿನಿಂದ ಮುನಿಯಾಲು ಕೆಳಪೇಟೆವರೆಗೆ ಮೌನ ಜಾಥಾ ನಡೆಯಿತು. ಪ್ರತಿಭಟನಾ ಸಭೆಯ ಅನಂತರ ಹೆಬ್ರಿ ತಾಲೂಕು ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಹಳೆವಿದ್ಯಾರ್ಥಿ ಸಂಘದ ರಾಮಚಂದ್ರ ನಾಯಕ್‌ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಲೇಜು ಅಭಿವೃದ್ಧಿ ಸಮಿತಿಯ ಶಂಕರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿಗಳಾದ ಸಮೃದ್ಧಿ ಪ್ರಕಾಶ್‌ ಶೆಟ್ಟಿ, ರತ್ನಾಕರ ಪೂಜಾರಿ, ಹರೀಶ್‌ ಪೂಜಾರಿ, ಕೃಷ್ಣ ನಾಯ್ಕ ಸಹಕರಿಸಿದರು.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.