ಉಡುಪಿಗೆ ವಿಶ್ವದ ಭೂಪಟದಲ್ಲೇ ವಿಶೇಷ ಸ್ಥಾನ ಒದಗಿಸುವುದೇ ನನ್ನ ಗುರಿ: Prasad Raj Kanchan

Team Udayavani, Apr 28, 2023, 12:44 PM IST

ಉಡುಪಿಗೆ ವಿಶ್ವದ ಭೂಪಟದಲ್ಲೇ ವಿಶೇಷ ಸ್ಥಾನ ಒದಗಿಸುವುದೇ ನನ್ನ ಗುರಿ: Prasad Raj Kanchan

ಉಡುಪಿ: ಉಡುಪಿಯಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಿ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಟ್ಟರೆ ಹೆತ್ತವರೂ ಬಹಳ ಸಂತೋಷದಿಂದ ಮಕ್ಕಳ ಜತೆಗೇನೆ ಬದುಕುತ್ತಾರೆ, ಈ ನಿಟ್ಟಿನಲ್ಲಿ ತಾನು ಶಾಸಕನಾದ ಬಳಿಕ ತೀವ್ರವಾಗಿ ಪ್ರಯತ್ನ ಮಾಡುವೆನು. ಉದ್ಯಮಗಳು ಬರಬೇಕಾದರೆ ಸುಸಜ್ಜಿತ ಮೂಲಭೂತ ಸೌಕರ್ಯಗಳೂ ಇರಬೇಕು ಅದಲ್ಲದೇ ಸಮಾಜದಲ್ಲಿ ಶಾಂತಿ ಸೌಹಾರ್ದತೆಯೂ ನೆಲೆಸಿರಬೇಕು, ಇವೆಲ್ಲವೂ ಸಾಧ್ಯ ಆಗಬೇಕಾದರೆ ಉಡುಪಿಯ ಜನ ತನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿದರು.

ಅವರು ಉಡುಪಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಹಳ ಮುಖ್ಯವಾಗಿ ಕುಡಿಯವ ನೀರಿನ ಸಮಸ್ಯೆ ಹಾಗೂ ಒಳ ಚರಂಡಿ ಸಮಸ್ಯೆ ಉಡುಪಿ ನಗರದಲ್ಲಿ ಮತದಾರರು ಎತ್ತುತ್ತಿದ್ದ ಸಮಸ್ಯೆ ಆಗಿದ್ದು ಇವುಗಳಿಗೆ ಒಂದು ವೈಜ್ಞಾನಿಕ ಪರಿಹಾರವನ್ನೂ ಹುಡುಕಿ ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು.

ಶೋಭಕ್ಕ ಕ್ಷೇತ್ರದಲ್ಲಿ ಕಣ್ಮರೆ:
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ರವರು ಮಾತನಾಡಿ, ಬಿಜೆಪಿಯ ಮುಖಂಡರುಗಳಾದ ಶೋಭಾ ಹಿಂದೆ ಗ್ಯಾಸ್‌ ಸಿಲಿಂಡರ್‌ಗೆ ಹತ್ತು ರೂ. ಜಾಸ್ತಿ ಮಾಡಿದಾಗಲೆಲ್ಲಾ ಬೀದಿಗಿಳಿದು ಸರಕಾರಕ್ಕೆ ಹಿಗ್ಗಾ ಮುಗ್ಗಾ ನಿಂದಿಸುತ್ತಿದ್ದರು, ಈಗ ಶೋಭಕ್ಕ ಕ್ಷೇತ್ರದಿಂದಲೇ ಕಣ್ಮರೆ ಆಗಿದ್ದಾರೆ, ಉಡುಪಿಯ ಎಲ್ಲಾ ಸರಕಾರಿ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಇನ್ನೊಮ್ಮೆ ಬಿಜೆಪಿ ಬಂದರೆ ದೇವರೇ ಬಂದರೂ ಪರಿಸ್ಥಿತಿ ಸರಿ ಪಡಿಸಲು ಸಾಧ್ಯವೇ ಇಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

ಭಾವನಾತ್ಮಕ ವಿಚಾರಕ್ಕೆ ತಡೆ:

ಜಿಲ್ಲಾ ಕಾಂಗ್ರೆಸ್‌ ಮುಖಂಡ ಕುಶಲ್‌ ಶೆಟ್ಟಿ ಕಾಂಗ್ರೆಸ್‌ ಸರಕಾರಗಳ ಕೊಡುಗೆಯಿಂದ ಜನರ ಜೀವನ ಮಟ್ಟ ಸುಧಾರಣೆ ಆಗಿದೆ, ಆದರೂ ಜನರು ಭಾವನಾತ್ಮಕ ವಿಚಾರಗಳಿಗೆ ಬಲಿಯಾಗಿ ಕೆಲವೊಮ್ಮೆ ಬಿಜೆಪಿಯ ಕಡೆ ವಾಲುವುದು ದುರದೃಷ್ಟಕರ. ಇದನ್ನು ತಡೆಯಲು ಕಾಂಗ್ರೆಸ್‌ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸುರೇಶ್‌ ಶೆಟ್ಟಿ ಬನ್ನಂಜೆ ಮಾತನಾಡಿ ಪ್ರಧಾನಿ ಮೋದಿಯವರು ದೇಶವನ್ನೇ ಮಾರಲಿದ್ದಾರೆ, ಈಗಾಗಲೇ ವಿಮಾನ ನಿಲ್ದಾಣ, ಸಾರ್ವಜನಿಕ ಬ್ಯಾಂಕ್‌ ಗಳಲ್ಲಿನ ಶೇರುಗಳು, ಎಲ್‌ಐಸಿ ಯ ಶೇರುಗಳು, ಸ್ಟೇಡಿಯಮ್‌ಗಳು, ಇನ್ನೂ ಅನೇಕ ಸರಕಾರಿ ಸಂಸ್ಥೆಗಳನ್ನು ತನ್ನ ಕೆಲವೇ ಕೆಲವು ಮಿತ್ರರಿಗೆ ಖಾಸಗೀಕರಣ ಮಾಡಿ ನೀಡಿ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರುಗಳಾದ ಮಹಾಬಲ ಕುಂದರ್‌, ದಿವಾಕರ ಕುಂದರ್‌, ಗಣೇಶ್‌ ನೆರ್ಗಿ, ಸುಕೇಶ್‌ ಕುಂದರ್‌, ಕೀರ್ತಿ ಶೆಟ್ಟಿ, ಪ್ರಶಾಂತ ಪೂಜಾರಿ, ಮಿಥುನ್‌ ಅಮೀನ್‌, ಯತೀಶ್‌ ಕರ್ಕೆರ, ನಾಸೀರ್‌, ರವಿರಾಜ್‌, ಹಮ್ಮದ್‌, ಸದಾಶಿವ ಅಮೀನ್‌ ಕಟ್ಟೆಗುಡ್ಡೆ, ಶರತ್‌ ಶೆಟ್ಟಿ, ಶಬರೀಶ್‌, ಮಮತಾ ಶೆಟ್ಟಿ, ವಿಶ್ವಾಸ್‌ ಅಮೀನ್‌, ಶ್ರೀನಿವಾಸ ಹೆಬ್ಟಾರ್‌, ಹಬೀಬ್‌ ಅಲಿ, ನಾಗೇಶ್‌ ಉದ್ಯಾವರ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

ಅಜ್ಞಾನದ ಪರಮಾವಧಿ
ಕಾಂಗ್ರೆಸ್‌ ಸರಕಾರಗಳು ಕಟ್ಟಿದ ಆಸ್ಪತ್ರೆಯಲ್ಲಿ ಜನ್ಮ ತಾಳಿ ,ಕಾಂಗ್ರೆಸ್‌ ಸರಕಾರವೇ ನೀಡಿದ ನಿವೇಶನದಲ್ಲಿ ಕಟ್ಟಿದ ಮನೆಯಲ್ಲಿ ಬೆಳೆದು ಅದೇ ರೀತಿ ಕಾಂಗ್ರೆಸ್‌ ಅವಧಿಯಲ್ಲೇ ಆದ ಶಾಲೆ ಕಾಲೇಜುಗಳಲ್ಲಿ ಓದಿ, ಕಾಂಗ್ರೆಸ್‌ ಸರಕಾರಗಳು ನಿರ್ಮಾಣ ಮಾಡಿದ ರಸ್ತೆ ಸೇತುವೆಗಳಲ್ಲಿ ದಿನಾ ಸಂಚಾರ ಮಾಡುತ್ತಾ ಈಗಿನ ಪೀಳಿಗೆಯ ಕೆಲ ಯುವಕರು ಬಹಳ ತಾತ್ಸಾರವಾಗಿ ಕಾಂಗ್ರೆಸ್‌ ಅರವತ್ತು ವರ್ಷಗಳಲ್ಲಿ ಏನು ಮಾಡಿದೆ ಎಂದು ಕೇಳುವುದು ಅವರಲ್ಲಿದ್ದ ಅಜ್ಞಾನದ ಪರಮಾವಧಿ.
-ಅಮೃತ್‌ ಶೆಣೈ,
ಕೆಪಿಸಿಸಿ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.