ಉಡುಪಿಗೆ 10,689 ಕೋ.ರೂ. ಸಾಲ ಯೋಜನೆ

Team Udayavani, Dec 28, 2022, 12:39 AM IST

ಉಡುಪಿಗೆ 10,689 ಕೋ.ರೂ. ಸಾಲ ಯೋಜನೆ

ಮಣಿಪಾಲ: ನಬಾರ್ಡ್‌ ನಿಂದ ಉಡುಪಿ ಜಿಲ್ಲೆಗೆ 2023-24ನೇ ಸಾಲಿಗೆ 10,689.27 ಕೋ.ರೂ. ಸಾಲವನ್ನು ವಿವಿಧ ವಲಯಗಳಿಗೆ ಮೀಸಲಿಡಲಾಗಿದೆ. 2022-23ನೇ ಸಾಲಿನಲ್ಲಿ 12,659.26 ಕೋ.ರೂ. ಮೀಸಲಿಡಲಾಗಿತ್ತು.

ಜಿ.ಪಂ. ಸಭಾಂಗಣದಲ್ಲಿ ಮಂಗಳ ವಾರ ಜಿಲ್ಲೆಯ ಬ್ಯಾಂಕ್‌ಗಳ ತ್ತೈಮಾಸಿಕ ಪ್ರಗತಿಪರಿಶೀಲನೆ ಸಭೆಯಲ್ಲಿ 2023- 24ನೇ ಸಾಲಿನ ಸಾಲ ಯೋಜನೆಯನ್ನು ಜಿ.ಪಂ. ಸಿಇಒ ಪ್ರಸನ್ನ ಎಚ್‌. ಬಿಡುಗಡೆ ಮಾಡಿದರು.

ಈ ಬಗ್ಗೆ ಮಾಹಿತಿ ನೀಡಿದ ನಬಾರ್ಡ್‌ ಡಿಡಿಎಂ ಸಂಗೀತಾ ಕರ್ತಾ ಅವರು, ಬೆಳೆ ಉತ್ಪತ್ತಿ, ನಿರ್ವಹಣೆ ಮತ್ತು ಮಾರುಕಟ್ಟೆ, ಕೃಷಿ ಸಾಲ ಮತ್ತು ಸಂಬಂಧಿತ ಚಟುವಟಿಕೆ, ಕೃಷಿ ಮೂಲಸೌಕರ್ಯ, ಪೂರಕ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಲಕ್ಕಾಗಿ 5,759 ಕೋಟಿ ರೂ. ನಿಗದಿಪಡಿಸಲಾಗಿದೆ. ಇದರಲ್ಲಿ 1,355 ಕೋ.ರೂ. ಬೆಳೆ ಉತ್ಪಾದನೆ, ನಿರ್ವಹಣೆ ಮತ್ತು ಮಾರುಕಟ್ಟೆ ಮೀಸಲಿಟ್ಟರೆ, 1,635 ಕೋ.ರೂ.ಗಳನ್ನು ಕೃಷಿ ಸಾಲ ಮತ್ತು ಇತರ ಚಟುವರಿಕೆಗೆ, 465 ಕೋ.ರೂ.ಗಳನ್ನು ಕೃಷಿ ಮೂಲಸೌಕರ್ಯಕ್ಕೆ ಹಾಗೂ ಕೃಷಿ ಪೂರಕ ಚಟುವಟಿಕೆ ಪ್ರೋತ್ಸಾಹಿಸಲು 2,302 ಕೋ.ರೂ. ಮೀಸಲಿಡಲಾಗಿದೆ. ಕಿರು ಸಣ್ಣ ಮತ್ತು ಮಧ್ಯಮ ಉದ್ಯಮಕ್ಕಾಗಿ 3,559 ಕೋಟಿ ರೂ., ರಫ್ತು ವಿಭಾಗಕ್ಕೆ ಸಂಬಂಧಿಸಿದ ಕೈಗಾರಿಕೆ, ಸ್ಥಾವರ ಇತ್ಯಾದಿ ನಿರ್ಮಾಣದ ಸಾಲಸೌಲಭ್ಯಕ್ಕೆ 304 ಕೋಟಿ ರೂ., ಶೈಕ್ಷಣಿಕ ಸಾಲಕ್ಕಾಗಿ 126 ಕೋಟಿ ರೂ., ಗೃಹ ನಿರ್ಮಾಣ ಸಾಲಕ್ಕಾಗಿ 832 ಕೋಟಿ ರೂ., ನವೀಕೃತ ಇಂಧನಕ್ಕೆ ಸಂಬಂಧಿಸಿದಂತೆ (ಸೋಲಾರ್‌ ಪ್ಲಾಂಟ್‌ ಇತ್ಯಾದಿ) ಸಾಲಕ್ಕಾಗಿ 39 ಕೋಟಿ ರೂ. ಸಾಮಾಜಿಕ ಮೂಲಸೌಲಭ್ಯಕ್ಕೆ 68 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಮುಂದಿನ ಸಾಲಿನಲ್ಲಿ ಪಶು ಸಂಗೋಪನೆ, ಮೀನುಗಾರಿಕ ಚಟು ವಟಿಕೆ, ಕೃಷಿ ಮೂಲಸೌಕರ್ಯ, ಆಹಾರ ಸಂಸ್ಕರಣೆ ಮತ್ತು ಎಂಎಸ್‌ಎಂಇ ಘಟಕಗಳಿಗೆ ಸಾಲ ನೀಡುವ ವ್ಯವಸ್ಥೆಯನ್ನು ಶೇ. 23ರಷ್ಟು ಹೆಚ್ಚಿಸಲಾಗಿದೆ ಎಂದರು.

ಆರ್‌ಬಿಐ ಕಾರ್ಯನಿರ್ವಾಹಕ ಮುರಲಿ ಮೋಹನ್‌ ಪಾಠಕ್‌, ಯುಬಿಐ ಆರ್‌ಎಂ ಡಾ| ವಾಸಪ್ಪ, ಕೆನರಾ ಬ್ಯಾಂಕ್‌ ಪ್ರಾದೇಶಿಕ ಕಚೇರಿ-1ರ ಎಜಿಎಂ ಸಂಜೀವ್‌ ಕುಮಾರ್‌, ಲೀಡ್‌ ಬ್ಯಾಂಕ್‌ ಮುಖ್ಯ ಪ್ರಬಂಧಕ ಪಿ.ಎಂ. ಪಿಂಜಾರ, ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.