ಪ್ರಕೃತಿ ವಿಕೋಪ ಮುಂಜಾಗ್ರತಾ ಸಭೆ


Team Udayavani, Jun 20, 2019, 6:02 AM IST

1906KDPP7

ಕುಂದಾಪುರ: ಅಪಾಯಕಾರಿ ವಿದ್ಯುತ್‌ ಕಂಬ, ತಂತಿ ಬದಲಾಯಿಸಬೇಕು. ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ವಿದ್ಯುತ್‌ ಕಂಬಕ್ಕೆ ತಗುಲಿ ಕೊಂಡಿರುವ ಮರ ತೆರವು ಮಾಡಬೇಕು. ರಸ್ತೆ ಬದಿ ನೀರು ಹರಿದು ಹೋಗಲು ಕ್ರಮ, ಪಾದಚಾರಿಗಳಿಗೆ, ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಕ್ತ ಸೂಚನಾ ಫಲಕ, ಹೆದ್ದಾರಿ ಬದಿಯಲ್ಲಿ ಚರಂಡಿ ಕಾಮಗಾರಿ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಗುತ್ತಿಗೆದಾರರಿಗೆ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಎಸ್‌.ಎಸ್‌.ಮಧುಕೇಶ್ವರ ಸೂಚನೆ ನೀಡಿದರು.

ಇಲ್ಲಿನ ತಾ.ಪಂ.ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ಮುಂಜಾಗ್ರತೆ ಸಲುವಾಗಿ ಅಧಿಕಾರಿಗಳು ಕೈಗೊಳ್ಳಬೇಕಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾವಿ ನೀರು ಕಲುಷಿತಗೊಂಡಿದ್ದರೆ ಶುದ್ದೀಕರಿಸುವ ವ್ಯವಸ್ಥೆ ಮಾಡಬೇಕು. ಹೊಟೇಲ್‌ಗ‌ಳಲ್ಲಿ ಬಿಸಿ ನೀರು ಸೌಲಭ್ಯ ನೀಡುವಂತೆ ಎಲ್ಲ ಹೊಟೇಲ್‌ ಮಾಲಕರಿಗೆ ಆರೋಗ್ಯ ಇಲಾಖೆ ಸೂಚನೆ ನೀಡಬೇಕು. ಮರವಂತೆ, ತ್ರಾಸಿ, ಕೋಡಿ, ಕಡಲ ತೀರ ಪ್ರದೇಶಗಳಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಮಳೆಗಾಲದಲ್ಲಿ ಗೊತ್ತಿಲ್ಲದೆ ಸಮುದ್ರಕ್ಕಿಳಿಯದಂತೆ ಎಚ್ಚರ ವಹಿಸುವ ಕುರಿತು ಕ್ರಮ ಕೈಗೊಳ್ಳಬೇಕು. ನೆರೆ ಸಂಭವಿಸಿದರೆ, ತುರ್ತು ಸಂದರ್ಭ ಶಾಲಾ ಶಿಕ್ಷಕರನ್ನು ನೆರೆ ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಳಲು ಸೂಚಿಸಲಾಯಿತು. ಗಂಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಬಗ್ಗೆ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಹಾಗೂ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಬೇಕು ಎಂದರು.

ಕುಂದಾಪುರ ತಹಶೀಲ್ದಾರ್‌ ಎಚ್‌.ಕೆ. ತಿಪ್ಪೇಸ್ವಾಮಿ, ಬೈಂದೂರು ತಹಶೀಲ್ದಾರ್‌ ಬಿ.ಪಿ. ಪೂಜಾರ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕಿರಣ್‌ ಪೆಡೆ°àಕರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು.

ಕಾಲುಸಂಕ: ವರದಿ ನೀಡಿ
ಕಾಲು ಸಂಕ ದಾಟಿ ಶಾಲೆಗೆ ಬರುವ ಮಕ್ಕಳಿದ್ದರೆ ಆ ಬಗ್ಗೆ ವರದಿ ನೀಡಿ. ತೀರ ಅಪಾಯವುಂಟಾಗುವ ಸಾಧ್ಯತೆಯಿರುವ ಶಾಲಾ ಕಟ್ಟಡಗಳನ್ನು ಪರಿಶೀಲಿಸಿ ದುರಸ್ತಿಗಾಗಿ ಜಿ.ಪಂ.ಗೆ ಪ್ರಸ್ತಾವನೆ ಸಲ್ಲಿಸಿ, ಸರಕಾರಿ ಸ್ಥಳದಲ್ಲಿರುವ ತೆರೆದ ಕೊಳವೆ ಬಾವಿ ಹಾಗೂ ಇಂಗುಗುಂಡಿ, ಕೊಚ್ಚೆಹೊಂಡ, ಕಲ್ಲುಕೋರೆ ಹೊಂಡ ಇರುವಲ್ಲಿ ರೇಡಿಯಂನಿಂದ ಕೂಡಿರುವ ಫಲಕಗಳನ್ನು ಅಳವಡಿಸಬೇಕು. ಖಾಸಗಿ ಸ್ಥಳಗಳಲ್ಲಿರುವ ಅಪಾಯಕಾರಿ ಹೊಂಡಗಳನ್ನು ಸಂಬಂಧಪಟ್ಟ ಜಾಗದ ಮಾಲಕರಿಂದ ಮುಚ್ಚುವ ಅಥವಾ ಸುರಕ್ಷಾ ಕ್ರಮ ಕೈಗೊಳ್ಳುವ ಕುರಿತು ಎಲ್ಲ ಪಿಡಿಒಗಳು ಗಮನಹರಿಸಬೇಕು ಎಂದು ಎಸಿಯವರು ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.