Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Team Udayavani, Jan 9, 2025, 4:34 AM IST
ಹೆಬ್ರಿ: ತಾಲೂಕಿನ ನಾಡ್ಪಾಲು ಗ್ರಾಮದ ಪೀತುಬೈಲಲ್ಲಿ ನ. 18ರಂದು ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ಕೌಂಟರ್ ಬಳಿಕ ಸರಕಾರ ನಕ್ಸಲರ ಶರಣಾಗತಿ ಪ್ಯಾಕೇಜ್ ಘೋಷಿಸಿದ್ದು, ಈ ಪ್ರಕ್ರಿಯೆ ಮೊದಲೇ ಮಾಡಿದ್ದರೆ ನನ್ನ ಸಹೋದರನ ಪ್ರಾಣ ಉಳಿಯುತ್ತಿತ್ತು ಎಂದು ವಿಕ್ರಂ ಗೌಡನ ಸಹೋದರ ಸುರೇಶ್ ಗೌಡ ತಿಳಿಸಿದ್ದಾರೆ.
ಶರಣಾಗತಿಗೆ ಸಮಿತಿಯವರು ಮೊದಲೇ ಪ್ರಯತ್ನಿಸಿದ್ದರೆ ನನ್ನ ಅಣ್ಣ ಜೈಲಿನಲ್ಲಾದರೂ ಇರುತ್ತಿದ್ದ. ನಮ್ಮಿಂದ ಸುಮಾರು 20 ವರ್ಷಗಳ ಕಾಲ ದೂರವಾಗಿದ್ದ ಸಹೋದರ ಮಾಡಿದ ತಪ್ಪಿಗೆ ಶಿಕ್ಷೆಯನ್ನು ಅನುಭವಿಸಿದ ಬಳಿಕವಾದರೂ ನಮ್ಮೊಂದಿಗೆ ಇರುತ್ತಿದ್ದ ಎಂದು ಅವರು ಬೇಸರ ತೋಡಿಕೊಂಡಿದ್ದಾರೆ.
20 ವರ್ಷಗಳಿಂದ ಬಾಡಿಗೆ ಮನೆಯಲ್ಲಿ:
ಸಹೋದರನ ಈ ಪ್ರಕರಣ ಆಗುತ್ತಿದ್ದಂತೆ ಮುಂದೆ ಸಮಸ್ಯೆಯಾಗಬಹುದೆಂದು ತಿಳಿದು ಊರು ಬಿಟ್ಟು ಮುದ್ರಾಡಿಗೆ ಬಂದು ಸುಮಾರು 20 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇವೆ. ಮಕ್ಕಳನ್ನು ಶಾಲೆಗೆ ಕಳಿಸಲು ತುಂಬಾ ಕಷ್ಟವಾಗುತ್ತಿದೆ. ದಿನಗೂಲಿ ಮಾಡಿಕೊಂಡು ಬದುಕುತ್ತಿದ್ದೇವೆ. ನಮ್ಮನ್ನು ಯಾವ ಸಮಿತಿಯೂ ಬಂದು ಭೇಟಿ ಮಾಡಿಲ್ಲ. ತೀರಾ ಬಡತನದಲ್ಲಿ ಜೀವನ ಸಾಗಿಸುವ ನಮಗೂ ನಕ್ಸಲ್ ಶರಣಾಗತಿಯ ಪ್ಯಾಕೇಜ್ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.