ಹೆದ್ದಾರಿ ಬಳಿಯ ಗೂಡಂಗಡಿ ತೆರವಿಗೆ ಗಣ್ಯರ ಅಸಮಾಧಾನ
Team Udayavani, Feb 23, 2017, 12:33 PM IST
ಕೋಟ: ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಸಂದರ್ಭದಲ್ಲಿ ಅತಿಕ್ರಮಣಗೊಂಡ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಗೂಡಂಗಡಿಗಳನ್ನು ಫೆ. 21ರಂದು ಕುಂದಾಪುರ ಸಹಾಯಕ ಕಮಿಷನರ್ ಅವರ ಆದೇಶದ ಮೇರೆಗೆ, ಬ್ರಹ್ಮಾವರ ವಿಶೇಷ ತಹಶೀಲ್ದಾರರು ತೆರವುಗೊಳಿಸಿದ ಸ್ಥಳಕ್ಕೆ ಬುಧವಾರ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ಕಾರ್ಮಿಕ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ರವಿ ಶೆಟ್ಟಿ, ರಾಮ ಸೇನೆಯ ರಾಜ್ಯ ಉಪಾಧ್ಯಕ್ಷ ಶಿವ ಕುಮಾರ್ ಕರ್ಜೆ ಸಹಿತ ಹಲವು ಗಣ್ಯರು ಭೇಟಿ ನೀಡಿದರು ಹಾಗೂ ಸೂಕ್ತ ಕ್ರಮಕೈಗೊಳ್ಳದೆ ಅಂಗಡಿಗಳನ್ನು ತೆರವುಗೊಳಿಸಿದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಬದಲಿ ವ್ಯವಸ್ಥೆ ಮಾಡಿಕೊಳ್ಳುವ ತನಕ ಅವಕಾಶ ನೀಡಿ
ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ನಡೆಸುವವರಿಗೆ ಯಾವುದೇ ಸೂಚನೆ ನೀಡದೆ ತೆರವುಗೊಳಿಸಿದ್ದು ಸರಿಯಲ್ಲ. ಈ ಕುರಿತು ಸಹಾಯಕ ಕಮಿಷನರ್, ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸುತ್ತೇನೆ ಹಾಗೂ ಬದಲಿ ವ್ಯವಸ್ಥೆ ಮಾಡಿಕೊಳ್ಳುವ ತನಕ ಸಮಸ್ಯೆ ಮಾಡದಂತೆ ಮನವಿ ಮಾಡುವುದಾಗಿ ಸ್ಥಳಕ್ಕಾಗಮಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಸಕಾರಣವಿಲ್ಲದೆ ತೆರವು ಸರಿಯಲ್ಲ
ರಾಷ್ಟ್ರೀಯ ಹೆದ್ದಾರಿಗಾಗಿ ವಶಪಡಿಸಿಕೊಂಡ ಜಾಗದಲ್ಲಿ ಸರ್ವೀಸ್ ರಸ್ತೆ ಅಥವಾ ಬೇರೆ ಯಾವುದೇ ಅಭಿವೃದ್ಧಿ ನಡೆಯುವ ಕಾರಣಕ್ಕಾಗಿ ಗೂಡಂಗಡಿ ತೆರವುಗೊಳಿಸಿದರೆ ತೊಂದರೆ ಇರಲಿಲ್ಲ. ಆದರೆ ಯಾವುದೇ ಸಕಾರಣವಿಲ್ಲದೆ ಅಂಗಡಿ ಹಿಂದಿನ ಜಾಗದ ಮಾಲೀಕರ ಮನವಿಗಾಗಿ ಸುಮಾರು ಇಪ್ಪತ್ತು ವರ್ಷಕ್ಕೂ ಹೆಚ್ಚು ಸಮಯದಿಂದ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದವರ ಮೇಲೆ ಯಾವುದೇ ಸೂಚನೆ ನೀಡದೆ ಕ್ರಮಕೈಗೊಂಡಿದ್ದು ಸರಿಯಲ್ಲ.
ರಾಷ್ಟ್ರೀಯ ಹೆದ್ದಾರಿಗೆ ಅತಿಕ್ರಮಣವಾದ ಜಾಗ ಎನ್ನುವ ಕಾರಣಕ್ಕೆ ಕ್ರಮಕೈಗೊಳ್ಳುವುದಾದರೆ ಹೆದ್ದಾರಿ ಪಕ್ಕದಲ್ಲಿರುವ ಎಲ್ಲ ಕಟ್ಟಡಗಳ ಮೇಲೂ ಕ್ರಮಕೈಗೊಳ್ಳಬೇಕು. ಈ ಸಮಸ್ಯೆಯನ್ನು ಸಂಸದರ ಗಮನಕ್ಕೆ ತರಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ ಉಡುಪಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ಪತ್ರಿಕೆಗೆ ತಿಳಿಸಿದ್ದಾರೆ.
ಬಡ ಕಾರ್ಮಿಕನಿಗೆ ಅನ್ಯಾಯ ವಾದರೆ ಜಿಲ್ಲಾ ವ್ಯಾಪ್ತಿ ಹೋರಾಟ ಕೋಟ್ಯಂತರ ಖರ್ಚು ಮಾಡಿ ಹೆದ್ದಾರಿಗೆ ಅತಿಕ್ರಮಣವಾದ ಜಾಗದಲ್ಲಿ ನಿರ್ಮಿಸಿದ ಕಟ್ಟಡಗಳ ಮೇಲೆ ಯಾವುದೇ ಕ್ರಮಕೈಗೊಳ್ಳದ ಸಹಾಯಕ ಕಮಿಷನರ್ ಅವರು ಹೊಟ್ಟಪಾಡಿಗಾಗಿ ಕೆಲಸ ಮಾಡುವ ಮೂರು ಮಂದಿ ಬಡ ಕಾರ್ಮಿಕರ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವುದು ಸರಿಯಲ್ಲ.
ಸಕಾರಣವಿಲ್ಲದೆ ಯಾವುದೇ ಕಾರಣಕ್ಕೂ ಅಂಗಡಿ ತೆರವಿಗೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ನಮ್ಮ ಮನವಿಯನ್ನು ಧಿಕ್ಕರಿಸಿ ಕ್ರಮಕೈಗೊಂಡಲ್ಲಿ ಜಿಲ್ಲೆಯಾದ್ಯಂತ ಕಾರ್ಮಿಕ ವೇದಿಕೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಕಾರ್ಮಿಕ ವೇದಿಕೆಯ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಪತ್ರಿಕೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.