ನೀರಿಂಗಿಸಲು ಸೂಕ್ತ ವ್ಯವಸ್ಥೆ ಅಗತ್ಯ
Team Udayavani, Mar 30, 2019, 6:30 AM IST
ಉಡುಪಿ: ದುಡ್ಡಿನ ಶೋಕಿಗೆ ಬಿದ್ದು ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ ಅಲ್ಲಿಗೆ ಬರುವ ನೀರಿನ ಮೂಲ ತಿಳಿಯುವ ಗೋಜಿಗೆ ಹೋಗುವುದಿಲ್ಲ. ಭೂಮಿಯಿಂದ ನೀರು ತೆಗೆಯುವ ಹಲವಾರು ತಂತ್ರಜ್ಞಾನಗಳಿದ್ದರೂ ನೀರಿಂಗಿಸುವಂತೆ ಮಾಡಲು ನಾವು ಯಾವುದೇ ವ್ಯವಸ್ಥೆ ಮಾಡದಿರುವುದೇ ನೀರಿನ ಅಭಾವಕ್ಕೆ ಮೂಲ ಕಾರಣ ಎಂದು ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು.
ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಆಶ್ರಯದಲ್ಲಿ ಕಾಲೇಜಿನಲ್ಲಿ ಗುರುವಾರ ನಡೆದ ಜಲಸಂರಕ್ಷಣೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು.
ಜಲಕ್ಷಾಮ ತಡೆಯಿರಿ
ಸಂಪನ್ಮೂಲ ವ್ಯಕ್ತಿ ಜೋಸೆಫ್ ಜಿ.ಎಂ. ರೆಬೆಲ್ಲೊ ಮಾತನಾಡಿ, “ಸಮುದ್ರಕ್ಕೆ ಹರಿಯುವ ನೀರನ್ನು ಹಿಡಿದಿಟ್ಟು ಇಂಗಿಸಿ ದರೆ ಜಲಕ್ಷಾಮ ವನ್ನು ತಡೆಗಟ್ಟಬಹುದು. ನಳ್ಳಿ, ಕೊಳವೆಬಾವಿಯಲ್ಲಿ ನೀರು ಸಿಗುತ್ತದೆ ಎಂದರೆ ಆ ಊರಿನಲ್ಲಿ ಜಲಕ್ಷಾಮ ಇದೆ ಎಂದರ್ಥ’ ಎಂದರು.
ಶುದ್ಧ ನೀರಿನ ಅಭಾವ
ಇಂದು ಭೂಮಿಯಲ್ಲಿ ಶುದ್ಧ ನೀರಿಲ್ಲ. ನದಿಯಿಂದ ಬರುವ ನೀರು ಕಲುಷಿತವಾಗುತ್ತಿದೆ. ಅದನ್ನು ಶುದ್ಧೀಕರಿಸಿ ನಾವು ಕುಡಿಯುತ್ತಿದ್ದೇವೆ. ಆಧುನಿಕತೆಯ ಭರದಲ್ಲಿ ಕೆರೆಗಳಲ್ಲೂ ಶುದ್ಧ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಬಿ.ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಗೌರವ ಕೋಶಾಧಿಕಾರಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕ ಡಾ| ಶ್ರೀಕಾಂತ ರಾವ್ ಸಿದ್ಧಾಪುರ ಸ್ವಾಗತಿಸಿದರು. ಶಿವಕುಮಾರ್ ಅಳಗೋಡು ವಂದಿಸಿ, ಮಂಜುನಾಥ ಕರಬ ನಿರೂಪಿಸಿದರು.
ಕಾರ್ಯಕ್ರಮದ ಬಳಿಕ ವಿದ್ಯಾರ್ಥಿ ಗಳಿಂದ ಹನಿಧ್ವನಿ ಕಿರು ಪ್ರಹಸನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.