“ವಾರಾಹಿ ನೀರನ್ನು ಕೆರೆಗಳಿಗೆ ಸಂಪರ್ಕಿಸುವ ಯೋಜನೆ ಅಗತ್ಯ’
Team Udayavani, Oct 22, 2019, 5:15 AM IST
ಕೊಟ: ವಾರಾಹಿ ನೀರನ್ನು ಊರಿನ ಪ್ರಮುಖ ಕೆರೆಗಳಿಗೆ ಸಂಪರ್ಕಿಸುವ ಕಾರ್ಯವಾಗಬೇಕು. ಇದರಿಂದಾಗಿ ನೀರಿನ ಮಟ್ಟದ ಏರಿಕೆಯಾಗಿ, ಕೃಷಿ ಚಟುವಟಿಕೆಗೆ ಪೂರಕವಾಗಲಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಅವರು ಬಿಲ್ಲಾಡಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಆಶ್ರಯದಲ್ಲಿ, ಕೊಡಗಾರಕೆರೆ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಅಭಿವೃದ್ಧಿಗೊಂಡ ಕೊಡಗಾರಕೆರೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ವಾರಾಹಿ ಕಾಲುವೆಗಳನ್ನು ಕೆರೆ, ಮದಗಗಳಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಯೋಜನೆ ರೂಪಿಸಬೇಕಿದೆ. ಇಂದು ಸರಕಾರದ ಬೊಕ್ಕಸ ನೆರೆ, ಬರ ಪರಿಹಾರ ನೀಡುವುದರಲ್ಲೇ ಖಾಲಿಯಾಗುತ್ತಿದೆ. ಅಂತಹ ಪರಿಸ್ಥಿತಿ ಕರಾವಳಿಗರಿಗೆ ಬರಬಾರದು ಎನ್ನುವ ನಿಟ್ಟಿನಲ್ಲಿ ನೀರಿನ ಕುರಿತು ನಾವು ಎಚ್ಚರಿಕೆ ವಹಿಸಬೇಕು ಎಂದರು.
ರಾಜ್ಯದಲ್ಲಿ 187 ಕೆರೆ ಅಭಿವೃದ್ಧಿ
ಪೂಜ್ಯ ವಿರೇಂದ್ರ ಹೆಗ್ಗಡೆಯವರು ಕೆರೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದಾರೆ. ಹೀಗಾಗಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಮ್ಮ ಗ್ರಾಮ-ನಮ್ಮ ಕೆರೆ ಯೋಜನೆಯಡಿ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 14.43ಕೋಟಿ ವೆಚ್ಚದ್ಲಲಿ 187 ಕೆರೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಅಭಿವೃದ್ಧಿಗೊಂಡ ಕೆರೆಗಳನ್ನು ಕೃಷಿ ಇನ್ನಿತರ ಚಟುವಟಿಕೆಗೆ ಬಳಸಿಕೊಳ್ಳಬೇಕು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ತಿಳಿಸಿದರು.
ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಜೀರ್ಣೋದ್ಧಾರಗೊಂಡ ಕೆರೆಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಲಾಯಿತು. ಜಿ.ಪಂ. ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಕೆರೆ ಅಭಿವೃದ್ಧಿ ಸಮಿತಿ ಮುಖ್ಯಸ್ಥ ರಾಘವೇಂದ್ರ ಉಪಸ್ಥಿತರಿದ್ದರು.
ಯೋಜನೆಯ ಮಂದಾರ್ತಿ ವಲಯದ ಮೇಲ್ವಿಚಾರಕ ರವೀಂದ್ರ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ನಿರೂಪಿಸಿ, ತಾಲೂಕು ಯೋಜನಾಧಿಕಾರಿ ದಿನೇಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.