ಗುತ್ತಿಗೆದಾರರಿಂದ ನಿರ್ಲಕ್ಷ್ಯ: ದೊರೆಯದ ಪರಿಹಾರ


Team Udayavani, Jan 10, 2018, 12:27 PM IST

10-27.jpg

ಉಡುಪಿ: ಪಡುಬಿದ್ರಿ ಕಂಚಿನಡ್ಕದ ಕಟ್ಟಡ ಕಾರ್ಮಿಕನೊಬ್ಬ ಕೆಲಸ ಮಾಡುವ ಸಂದರ್ಭ ಅವಘಡ ನಡೆದು ಮೃತಪಟ್ಟ ಘಟನೆ ಸಂಭವಿಸಿ ನಾಲ್ಕು ವರ್ಷಗಳು ಕಳೆದರೂ ಯಾವುದೇ ಪರಿಹಾರ ದೊರೆತಿಲ್ಲ. ಈ ಬಗ್ಗೆ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನವು ನ್ಯಾಯಾಲಯದಲ್ಲಿ ಹೋರಾಟ ನಡೆಸಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ| ರವೀಂದ್ರನಾಥ ಶ್ಯಾನುಭಾಗ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಮೃತ ಶ್ರೀಕಾಂತ್‌ ಅವರದು ತೀರಾ ಬಡ ಕುಟುಂಬ. ಕಂಗಾಲಾದ ಕುಟುಂಬ ಗುತ್ತಿಗೆದಾರ ರಿಂದ ಪರಿಹಾರ ಪಡೆಯಲು ಪ್ರಯತ್ನಿಸಿತು. ವಕೀಲರೊಬ್ಬರ ನೆರವು ಪಡೆಯಿತು. ನ್ಯಾಯಾಲಯದಲ್ಲಿ ದಾವೆ ದಾಖಲಾದರೂ ಕಾರ್ಮಿಕರ ಇಲಾಖೆಯಿಂದ ಪರಿಹಾರ ದೊರೆಯಲಿಲ್ಲ. ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣದ ಬಗ್ಗೆಯೂ ಮಾಹಿತಿ ಸಿಗಲಿಲ್ಲ. ಆ ಬಳಿಕ ಕುಟುಂಬವು ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನವನ್ನು ಸಂಪರ್ಕಿಸಿತ್ತು.

ಪ್ರತಿಷ್ಠಾನದ ಪ್ರಯತ್ನ
ರಕ್ಷಣಾ ಪ್ರತಿಷ್ಠಾನವು ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಅರ್ಜಿ ಸಲ್ಲಿಸಿದಾಗ ಗುತ್ತಿಗೆದಾರರ ವಿರುದ್ಧ ಕಾರ್ಮಿಕ ನಷ್ಟ ಪರಿಹಾರ ಕಾಯಿದೆಯ ಅಡಿ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂತು. ಗುತ್ತಿಗೆದಾರರು ಕಾರ್ಮಿಕ ಇಲಾಖೆಯೊಂದಿಗೆ ತಮ್ಮ ಹೆಸರು ನೋಂದಣಿ ಮಾಡಿಕೊಂಡಿಲ್ಲ ಎಂಬುದು ಕೂಡ ತಿಳಿಯಿತು. ಪ್ರಾಸಿಕ್ಯೂಶನ್‌ ವೈಫ‌ಲ್ಯದಿಂದ ಪ್ರಕರಣದಲ್ಲಿ ಅಪಾದಿತರು ಖುಲಾಸೆಗೊಂಡಿದ್ದರು ಎಂದು ರವೀಂದ್ರನಾಥ ಶ್ಯಾನುಭಾಗ್‌ ತಿಳಿಸಿದರು. ಶ್ರೀಕಾಂತ್‌ ತಾಯಿ ಅಪ್ಪಿ, ಪತ್ನಿ ಮೊನಿಕಾ, ಸಹೋದರಿ ಮಾಲತಿ, ಪ್ರತಿಷ್ಠಾನದ ಕಾರ್ಯಕರ್ತ ರಾದ ನ್ಯಾಯವಾದಿ ವಿಜಯಲಕ್ಷ್ಮೀ, ಕೆ. ಮುರಲೀಧರ್‌ ಉಪಸ್ಥಿತರಿದ್ದರು.

ಜಾಗೃತಿ ಉಂಟಾಗಲಿ
ಕಟ್ಟಡ ಕಾರ್ಮಿಕರ ಹೆಸರನ್ನು ಗುತ್ತಿಗೆದಾರರು ಅಥವಾ ಕಾರ್ಮಿಕರೇ ವೈಯಕ್ತಿಕವಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡರೆ ಅವಘಡ ನಡೆದ ಸಂದರ್ಭದಲ್ಲಿ ಪರಿಹಾರ ದೊರೆಯುತ್ತದೆ. ಆದರೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಅನೇಕ ಕಾರ್ಮಿಕರಿಗೆ ಈ ಬಗ್ಗೆ ಮಾಹಿತಿಯೂ ಇಲ್ಲ. ಇಲಾಖೆಯಲ್ಲಿ ನೋಂದಣಿ ಪ್ರಕ್ರಿಯೆ ಬಹಳ ಸರಳವಾಗಿದೆ. ಇದೇ ರೀತಿ ಕಟ್ಟಡದಿಂದ ಬಿದ್ದು ಮೃತಪಟ್ಟು ಯಾವುದೇ ಪರಿಹಾರ ದೊರೆಯದ ಪಣಂಬೂರು ಮತ್ತು ಬಂಟ್ವಾಳದ ಇಬ್ಬರು ಕಾರ್ಮಿಕರ ಪ್ರಕರಣ ಕೂಡಪ್ರತಿಷ್ಠಾನದ ಬಳಿ ಇದೆ. ಇಂತಹ ಘಟನೆಗಳು ಹೆಚ್ಚುತ್ತಿದ್ದು, ಬಡ ಕುಟುಂಬಗಳು ಕಂಗಾಲಾಗುತ್ತಿವೆ. ಈ ಬಗ್ಗೆ ಜಾಗೃತಿ ಮಾಡಿಸುವ ಅನಿವಾರ್ಯತೆ ಇದೆ ಎಂದು ಡಾ| ಶ್ಯಾನುಭಾಗ್‌ ಹೇಳಿದರು.

ಟಾಪ್ ನ್ಯೂಸ್

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.