Nejar Case: ನಾಲ್ವರ ಬರ್ಬರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿಯ ಸುಳಿವು?
Team Udayavani, Nov 14, 2023, 5:38 PM IST
ಉಡುಪಿ: ನೇಜಾರಿನಲ್ಲಿ ರವಿವಾರ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದಲ್ಲಿ ಬೀಡು ಬಿಟ್ಟಿದ್ದಾನೆ ಎಂಬ ಮಾಹಿತಿ ಇದ್ದು, ಆ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರ ತಂಡ ಮಂಗಳವಾರ(ನ.14 ರಂದು) ಕೇರಳದ ಕೊಟ್ಟಾಯಂಗೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಉಡುಪಿ ಡಿವೈಎಸ್‌ಪಿ ದಿನಕರ್ ಪಿ, ನೇತೃತ್ವದ ತಂಡ ಅಲ್ಲಿಗೆ ತೆರಳಿದ್ದು, ಆರೋಪಿಯನ್ನು ಬಂಧಿಸಿ ಕರೆತರುವ ಸಾಧ್ಯತೆಗಳಿವೆ.
ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೂಡಲೇ 5 ತಂಡಗಳನ್ನು ರಚಿಸಿದ್ದು, ಸಿಸಿಟಿವಿ ಜಾಡು ಹಿಡಿದು ತನಿಖೆಯನ್ನು ಚುರುಕುಗೊಳಿಸಿದ್ದರು.
ಕೊಲೆಗೈದ ಬಳಿಕ ಹಂತಕ ಸಾಗಿರುವ ವಿವಿಧ ಪ್ರದೇಶಗಳ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದರು. ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್, ಅಲ್ಲಿಂದ ಅಂಬಲಪಾಡಿ, ಕಿನ್ನಿಮುಲ್ಕಿ, ಬಲಾಯಿಪಾದೆ ಹಾಗೂ ಉದ್ಯಾವರದ ಮೂಲಕ ಕಟಪಾಡಿವರೆಗೆ ಸಾಗಿರುವ ಸಿಸಿಟಿವಿ ದ್ರಶ್ಯಾವಳಿಗಳ ಜಾಡು ಹಿಡಿದ ಪೊಲೀಸರ ತಂಡವು ಕಾಸರಗೋಡು, ಕೇರಳ ಕಡೆ ತೆರಳಿ ವ್ಯಾಪಕ ಶೋಧ ನಡೆಸಿದ್ದರು. ಆರೋಪಿಯ ಬಂಧನದ ಬಳಿಕವಷ್ಟೇ ಹೆಚ್ಚಿನ ವಿವರಗಳು ತಿಳಿದುಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.