ಸಚಿವರು, ಅಧಿಕಾರಿಗಳ ಪರಿಶೀಲನೆಯ ಬಳಿಕ ಮೀನುಗಾರರಲ್ಲಿ ಹೊಸ ಭರವಸೆ
ಮೂರು ಜೆಟ್ಟಿಗಳ ಸಂಪರ್ಕ ಕೊಂಡಿ ಹಂಗಾರಕಟ್ಟೆ ಅಳಿವೆ ಸಮಸ್ಯೆಗೆ ಸಿಗುವುದೇ ಮುಕ್ತಿ?
Team Udayavani, Nov 17, 2019, 5:26 AM IST
ಕೋಟ: ಹಂಗಾರಕಟ್ಟೆ, ಕೋಡಿಕನ್ಯಾಣ ಹಾಗೂ ಕೋಡಿಬೆಂಗ್ರೆ ಈ ಮೂರು ಮೀನುಗಾರಿಕೆ ಜೆಟ್ಟಿಗಳಿಗೆ ಸಂಪರ್ಕ ಬೆಸೆಯುವ ಹಂಗಾರಕಟ್ಟೆ ಅಳಿವೆಗೆ ತಡೆಗೋಡೆ ಇಲ್ಲದೆ ಬೋಟ್‌ಗಳ ಸಂಚಾರಕ್ಕೆ ಹಲವು ವರ್ಷದಿಂದ ಸಮಸ್ಯೆಯಾಗುತ್ತಿದೆ. ಹೀಗಾಗಿ ಇಲ್ಲಿಗೆ ಬ್ರೇಕ್ ವಾಟರ್ ನಿರ್ಮಿಸಬೇಕು ಎನ್ನುವುದು ಮೀನುಗಾರರ ಹತ್ತಾರು ವರ್ಷದ ಬೇಡಿಕೆಯಾಗಿದೆ. ಇದೀಗ ಇವರ ಮನವಿಯನ್ನು ಪುರಸ್ಕೃರಿಸಿ ಮೀನುಗಾರಿಕೆ ಸಚಿವರು ಮತ್ತು ಬಂದರು, ಮೀನುಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಕುರಿತು ಪರಿಶೀಲನೆ ನಡೆಸಿ ವರದಿ ತಯಾರಿಸಿದ್ದಾರೆ. ಹೀಗಾಗಿ ತಮ್ಮ ಬಹುಕಾಲದ ಬೇಡಿಕೆ ಈಡೇರಬಹುದು ಎನ್ನುವ ಭರವಸೆಯಲ್ಲಿ ಮೀನುಗಾರರಿದ್ದಾರೆ.
ಹಂಗಾರಕಟ್ಟೆ ಬ್ರೇಕ್ ವಾಟರ್‌ಗೆ
ಒಕ್ಕೊರಳ ಆಗ್ರಹ
ಹಂಗಾರಕಟ್ಟೆ ಅಳಿವೆಯಲ್ಲಿ ಬ್ರೇಕ್ ವಾಟರ್‌ಗೆ ಇಲ್ಲದಿರುವುದರಿಂದ ಮೀನುಗಾರಿಕೆ ಚಟುವಟಿಕೆಗೆ ಹಿನ್ನಡೆಯಾಗಿದ್ದು ದೊಡ್ಡ ಬೋಟ್‌ಗಳ ಸಂಚಾರ ಕಷ್ಟಸಾಧ್ಯವಾಗಿದೆ. ಹೀಗಾಗಿ ಪ್ರತಿವರ್ಷ ಒಂದೆರಡು ತಿಂಗಳು ತಡವಾಗಿ ಇಲ್ಲಿ ಮೀನುಗಾರಿಕೆ ಆರಂಭವಾಗುತ್ತದೆ. ಆದ್ದರಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸುವ ಮೊದಲು ಬ್ರೇಕ್ ವಾಟರ್ ನಿರ್ಮಿಸಬೇಕು ಎಂದು ಮೂರು ಜೆಟ್ಟಿಗಳ ಮೀನುಗಾರ ಪ್ರಮುಖರ ಒಕ್ಕೊರಳ ಬೇಡಿಕೆ ಸಲ್ಲಿಸಿದ್ದಾರೆ.
ಕೋಡಿಕನ್ಯಾಣದ ಬೇಡಿಕೆ
ಕೋಡಿಕನ್ಯಾಣ ಜೆಟ್ಟಿಯ ಹೂಳೆತ್ತುವ ಕಾಮಗಾರಿಗೆ 2017ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಸುಮಾರು 6ಕೋಟಿ ರೂ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಚಾಲನೆ ನೀಡಿತ್ತು. ಆದರೆ ಹಲವು ಕಾರಣಗಳನ್ನು ನೀಡಿ ಗುತ್ತಿಗೆ ವಹಿಸಿಕೊಂಡ ಕಂಪೆನಿ ಕಾಮಗಾರಿಯನ್ನು ವರ್ಷಗಟ್ಟಲೆ ಸ್ಥಗಿತಗೊಳಿಸಿತ್ತು. ಜತೆಗೆ ಸಿ.ಆರ್.ಝಡ್ ಸಮಸ್ಯೆ ಕೂಡ ಕಾಮಗಾರಿಗೆ ಹಿನ್ನಡೆಯಾಗಿತ್ತು. ಹೀಗಾಗಿ ಈ ಕಾಮಗಾರಿ ಮತ್ತೆ ಆರಂಭಿಸಬೇಕು ಎನ್ನುವುದು ಮೀನುಗಾರರ ಬೇಡಿಕೆಯಾಗಿದೆ ಮತ್ತು ಕೋಡಿ-ಸಾಸ್ತಾನ ಸಂಪರ್ಕ ರಸ್ತೆಯ ಬಳಿ ಇರುವ ಸರಕಾರಿ ಜಾಗವನ್ನು ಮೀನುಗಾರಿಕೆ ಇಲಾಖೆಗೆ ಹಸ್ತಾಂತರ ಮಾಡಬೇಕು. ಜಟ್ಟಿಯನ್ನು 300ಮೀಟರ್ ವಿಸ್ತರಣೆ ಮತ್ತು ಈಗಾಗಲೇ ಮಂಜೂರಾಗಿರುವ 60ಮೀಟರ್ ವಿಸ್ತರಣೆ ಕಾಮಗಾರಿಯನ್ನು ಬಲಭಾಗದಲ್ಲಿ ನಡೆಸಬೇಕು ಎನ್ನುವುದು ಇಲ್ಲಿನ ಮೀನುಗಾರರ ಬೇಡಿಕೆಯಾಗಿದೆ.
ಕೋಡಿಬೆಂಗ್ರೆಯ ಮೀನುಗಾರರ ಮನವಿ
ಜೆಟ್ಟಿ ಅಭಿವೃದ್ಧಿ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕೋಡಿಬೆಂಗ್ರೆಯಲ್ಲಿ ಮೀನುಗಾರಿಕೆ ಚಟುವಟಿಕೆಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಇಲ್ಲಿನ ಮೀನುಗಾರರ ಬೇಡಿಕೆಯಾಗಿದೆ.
ಸಚಿವರು, ಅಧಿಕಾರಿಗಳ ಭರವಸೆ
ಇತ್ತೀಚೆಗೆ ಕೋಡಿಕನ್ಯಾಣ ಜೆಟ್ಟಿಗೆ ಭೇಟಿ ನೀಡಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮೀನುಗಾರರ ಮನವಿ ಸ್ವೀಕರಿಸಿ ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಾನೂನಾತ್ಮಕ ತೊಡಕಿನಿಂದಾಗಿ ಸ್ಥಗಿತಗೊಂಡ ಹೂಳೆತ್ತುವ ಕಾಮಗಾರಿಯನ್ನು ಸಿ.ಆರ್.ಝಡ್. ಅನುಮತಿ ಪಡೆದು ಪುನರಾರಂಭಿಸುವುದಾಗಿ ಹಾಗೂ ಡಿಸೆಂಬರ್ ಅಂತ್ಯದಲ್ಲಿ ಬ್ರೇಕ್ ವಾಟರ್ ಕಾಮಗಾರಿಗೆ ಅಂದಾಜುಪಟ್ಟಿ ಸಿದ್ಧಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಸೂಕ್ತ ಕ್ರಮಕೈಗೊಳ್ಳಲಾಗುವುದು
ಹಂಗಾರಕಟ್ಟೆ ಬ್ರೇಕ್ ವಾಟರ್ ಕಾಮಗಾರಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೂಳೆತ್ತುವ ಕಾಮಗಾರಿಯ ಕಾನೂನು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುತ್ತಿದೆ. ಜೆಟ್ಟಿ ಬಳಿ ಇರುವ ಸರಕಾರಿ ಜಾಗವನ್ನು ಮೀನುಗಾರಿಕೆ ಇಲಾಖೆಗೆ ಹಸ್ತಾಂತರಿಸುವ ಕಡತ ಪರಿಶೀಲನೆ ಹಂತದಲ್ಲಿದ್ದು ಈ ಕುರಿತು ಕ್ರಮಕೈಗೊಳ್ಳಲಾಗುವುದು, ಮಂಜೂರಾಗಿರುವ 60ಮೀಟರ್ ವಿಸ್ತರಣೆಗೆ ಈಗಾಗಲೇ ಸೂಚನೆ ನೀಡಲಾಗಿದೆ.
-ಕೋಟ ಶ್ರೀನಿವಾಸ ಪೂಜಾರಿ,
ಮೀನುಗಾರಿಕೆ ಸಚಿವರು
-ರಾಜೇಶ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.