Udupi; 7-8 ತಿಂಗಳಲ್ಲಿ ಕೆಎಫ್‌ಡಿಗೆ ಹೊಸ ಔಷಧ: ಸಚಿವ ದಿನೇಶ್‌ ಗುಂಡೂರಾವ್‌


Team Udayavani, Feb 10, 2024, 11:27 PM IST

7-8 ತಿಂಗಳಲ್ಲಿ ಕೆಎಫ್‌ಡಿಗೆ ಹೊಸ ಔಷಧ: ಸಚಿವ ದಿನೇಶ್‌ ಗುಂಡೂರಾವ್‌

ಉಡುಪಿ/ಕುಂದಾಪುರ: ಕರಾವಳಿ, ಮಲೆನಾಡು ಭಾಗಗಳಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಈ ಸಮಯದಲ್ಲಿ ಹೆಚ್ಚಳ ಆಗುವುದು ಸಾಮಾನ್ಯ. ಅದಕ್ಕೆ ಏನು ಪರಿಹಾರ, ಶೀಘ್ರ ಚಿಕಿತ್ಸೆ ಹೇಗೆ ಅನ್ನುವುದನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಈ ಹಿಂದೆ ಇದ್ದ ಔಷಧ ನಿಷ್ಪ್ರಯೋಜಕವಾಗಿದ್ದು, ಐಸಿ ಎಂಆರ್‌ ಹಾಗೂ ಹೈದರಾಬಾದಿನ ಸಂಸ್ಥೆ ಯೊಂದಿಗೆ ಒಡಂಬಡಿಕೆ ಮಾಡಿ ಹೊಸ ಔಷಧ ತಯಾರಿಗೆ ಸೂಚಿಸ ಲಾಗಿದ್ದು, ಅದಕ್ಕೆ 7-8 ತಿಂಗಳು ಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಉಡುಪಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಳೆಗಾಲದ ಅನಂತರ ಕೆಎಫ್ಡಿ ಹೆಚ್ಚಾಗುತ್ತದೆ. ಜನವರಿಯಿಂದ ಮಾರ್ಚ್‌ವರೆಗೆ ಹೆಚ್ಚು ಎಚ್ಚರ ಇರಬೇಕು. ಈಗಾಗಲೇ ಇಬ್ಬರು ಮೃತಪಟ್ಟಿದ್ದು, ಇಬ್ಬರು ಐಸಿಯು ನಲ್ಲಿ ದ್ದಾರೆ. ಶಿವಮೊಗ್ಗದಲ್ಲಿ 25, ಉತ್ತರ ಕನ್ನಡದಲ್ಲಿ 38 ಪಾಸಿಟಿವ್‌ ಬಂದಿದ್ದು ಸದ್ಯ 20 ಸಕ್ರಿಯ ಪ್ರಕರಣವಿದೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಕೆಎಫ್ಡಿಯಿಂದ ಸಾವನ್ನಪ್ಪಿದವರ ಕುಟುಂ ಬಕ್ಕೆ ಪರಿಹಾರ ನೀಡುವ ಬಗೆ ಕುರಿತೂ ಚರ್ಚಿಸುತ್ತೇವೆ ಎಂದರು.

ಲಸಿಕೆ ಕಾರಣ ಎನ್ನಲಾಗದು
ಇತ್ತೀಚಿನ ದಿನಗಳಲ್ಲಿ ಹೃದಯಾ ಘಾತ ಹೆಚ್ಚುತ್ತಿರುವುದಕ್ಕೆ ಕೋವಿಡ್‌ ಲಸಿಕೆ ಕಾರಣ ಎನ್ನಲಾಗದು. ಈ ಬಗ್ಗೆ ಯಾವುದೇ ಸಂಶೋಧನ ವರದಿ ಇಲ್ಲ. ಹೃದಯಾಘಾತ ಮಾತ್ರ ವಲ್ಲದೆ ಕಿಡ್ನಿ ವೈಫ‌ಲ್ಯ, ಕ್ಯಾನ್ಸರ್‌, ಮಧುಮೇಹ, ರಕ್ತದೊತ್ತಡ ಇತ್ಯಾದಿ ಯುವ ಜನತೆಯಲ್ಲೂ ಹೆಚ್ಚಾಗಿದೆ. ಆಹಾರ ಪದ್ಧತಿಯಲ್ಲಿ ಆಗಿರುವ ಬದಲಾವಣೆಯೂ ಕಾರಣ ಇರಬ ಹುದು. ಸದ್ಯ ಕೋವಿಡ್‌ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.

ಸಚಿವರ ಸಭೆ
ಸಚಿವರು ಅಜ್ಜರಕಾಡಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಕೆಎಫ್‌ಡಿ ಬಾಧಿತ ಜಿಲ್ಲೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ನಿಯಂತ್ರಣ ಹಾಗೂ ಮುನ್ನೆಚ್ಚರಿಕೆಗೆ ಸಂಬಂಧಿಸಿದಂತೆಸೂಚಿ ಸಿದರು. ಕೆಎಫ್‌ಡಿ ಯಿಂದ ಸಾವನ್ನ ಪ್ಪದಂತೆ ನೋಡಿ ಕೊಳ್ಳಬೇಕು. ಕಾಯಿಲೆ ಹಬ್ಬಿರುವಲ್ಲಿ ಜನಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಮೇ ವರೆಗೂ ಹರಡುವ ಸಾಧ್ಯತೆಯಿದೆ. 3 ವಾರಗಳ ಬಳಿಕ ಶಿವಮೊಗ್ಗದಲ್ಲಿ ಪ್ರಗತಿ ಪರಿಶೀ ಲನೆ ನಡೆಸಲಾಗುವುದು ಎಂದರು.

48 ತಾಲೂಕು ಆಸ್ಪತ್ರೆ ಸುಧಾರಣೆ
ಆರೋಗ್ಯ ಸಚಿವರು ಕುಂದಾಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, 48 ಹೊಸ ತಾಲೂಕು ಆಸ್ಪತ್ರೆಗಳನ್ನು ಸುಧಾರಣೆ ಮಾಡ ಲಾಗುತ್ತಿದೆ. 25 ವರ್ಷ ಹಿಂದೆ ಆದ ತಾಲೂಕುಗಳ ಆಸ್ಪತ್ರೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ಆ ಬಳಿಕ ಬೈಂದೂರು, ಬ್ರಹ್ಮಾವರದಂತಹ ಹೊಸ ತಾಲೂಕುಗಳ ಸಮುದಾಯ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲಾಗುವುದು. ಹೆರಿಗೆ ತಜ್ಞರಿಲ್ಲದ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಬೇಡಿಕೆ ಬಗ್ಗೆ ಪೂರ್ಣ ಮಾಹಿತಿಯಿಲ್ಲ. ಕರಾವಳಿಯಲ್ಲಿ ಖಾಸಗಿ ಕಾಲೇಜುಗಳಿವೆ. ಈಗ ಇರುವಂತಹ ಕಡೆಗಳಲ್ಲಿನ ಮೆಡಿಕಲ್‌ ಕಾಲೇಜುಗಳ ಸಮರ್ಪಕ ಬಳಕೆಗೆ ಒತ್ತು ನೀಡಲಾಗುವುದು ಎಂದ ಅವರು, ಆದ್ಯತೆ ಮೇರೆಗೆ ಜಿಲ್ಲಾಸ್ಪತ್ರೆಯಲ್ಲಿ ಎಪಿಎಲ್‌ನವರಿಗೆ ಶೇ. 30ರಷ್ಟು ಮಾತ್ರ ಉಚಿತವಿದ್ದು, ಬಾಕಿ ಪಾವತಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಸಹಿತ ಸಿಬಂದಿ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಗುತ್ತಿಗೆ ಆಧಾರದ ಲ್ಲಿಯೂ ಭರ್ತಿಗೆ ಸೂಚನೆ ನೀಡಲಾಗಿದೆ. 800 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಕೊಲ್ಲೂರಿನಂತಹ ಆಸ್ಪತ್ರೆ ಸಹಿತ ಕೆಲ ಪಿಎಚ್‌ಸಿಗಳಲ್ಲಿ 24 ಗಂಟೆ ಸೇವೆಗೆ ಎಲ್ಲ ಅಗತ್ಯ ಸೌಕರ್ಯ ಒದಗಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದರು.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.