ದೇಶದಲ್ಲೇ ವಿನೂತನ ಜನಸಂಪರ್ಕ ಸಭೆ ಯಶಸ್ವಿ: ಪ್ರಮೋದ್
Team Udayavani, Oct 22, 2017, 12:23 PM IST
ಬ್ರಹ್ಮಾವರ, ಅ. 21: ಗ್ರಾಮದ ಪ್ರತಿ ಮನೆಗೆ ಮಾಹಿತಿ ನೀಡಿ, ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಯಿಸಿ ಆಯೋಜಿಸಲಾದ ಜನಸಂಪರ್ಕ ಸಭೆಯ ಅಭಿಯಾನ ಜನಸ್ಪಂದನೆ ಪಡೆವಲ್ಲಿ ಯಶಸ್ವಿ ಯಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶನಿವಾರ ಕೊಳಲಗಿರಿ ಚರ್ಚ್‌ನ ಸೌಹಾರ್ದ ಸಭಾಭವನದಲ್ಲಿ ಉಪ್ಪೂರು ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭು ಗಳು. ಜನಪ್ರತಿನಿಧಿಗಳು, ಅಧಿಕಾರಿಗಳು ಅವರ ಸೇವೆಗಾಗಿ ಇರುವವರು ಎಂದರು.
ಬಿಪಿಎಲ್ ಸೌಲಭ್ಯ: ಸಿದ್ದರಾಮಯ್ಯ ನೇತೃತ್ವದ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತತ್‌ಕ್ಷಣ ಬಿಪಿಎಲ್ ಕಾರ್ಡ್ ವಿತರಣೆಗೆ ಪ್ರಾಶಸ್ತ್ಯ ನೀಡಲಾಯಿತು. ಬಿಪಿಎಲ್‌ನಿಂದ ಕೇವಲ ಪಡಿತರ ಮಾತ್ರವಲ್ಲದೆ ವಾಜಪೇಯಿ ಆರೋಗ್ಯಶ್ರೀ, ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ, ಉಚಿತ ವಿದ್ಯುತ್ ಸಂಪರ್ಕ ಸೇರಿದಂತೆ ಹತ್ತು ಹಲವು ಸೌಲಭ್ಯ ದೊರೆಯುತ್ತಿದೆ ಎಂದು ಪ್ರಮೋದ್ ಹೇಳಿದರು.
ಹಕ್ಕುಪತ್ರ: ಹಕ್ಕುಪತ್ರ ಇಲ್ಲದವರಿಗೆ ಹಕ್ಕುಪತ್ರ, ಆರ್‌ಟಿಸಿ ನೀಡಲಾಗುತ್ತಿದೆ. ಇದರಿಂದ ಹೊಸ ಮನೆ ನಿರ್ಮಾಣಕ್ಕೆ ಅನುದಾನ, ಉದ್ಯೋಗ ಖಾತ್ರಿ ಯೋಜನೆಯಡಿ ಬಾವಿ, ಹಟ್ಟಿ ರಚನೆಗೆ ಅನುದಾನ, ಕುಕ್ಕುಟೋದ್ಯಮಕ್ಕೆ ಸಹಕಾರ, ಅಡಿಕೆ, ತೆಂಗಿನ ತೋಟ ನಿರ್ವಹಣೆಗೆ ಸಹಾಯ ಧನ ದೊರೆಯುತ್ತಿದೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.
ಮಾದರಿ ಕ್ಷೇತ್ರ: ಉಡುಪಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ದಾಖಲೆಯ 1,873 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ. ತಾಂತ್ರಿಕ ಅಡಚಣೆ ಹೊರತುಪಡಿಸಿ ದಿನದ 24 ಗಂಟೆ ವಿದ್ಯುತ್ ದೊರೆಯುವ ಏಕೈಕ ಕ್ಷೇತ್ರವಿದ್ದರೆ ಅದು ಉಡುಪಿಯಾಗಿದೆ ಎಂದು ಸಚಿವ ಪ್ರಮೋದ್ ಹೇಳಿದರು.
ನರ್ಮ್ ಬಸ್: ಖಾಸಗಿ ಬಸ್ ಲಾಬಿ ಮೆಟ್ಟಿನಿಂತು ಯಾವುದೇ ಒತ್ತಡಕ್ಕೆ ಮಣಿಯದೆ ಸಾರ್ವಜನಿಕರ ಉಪಯೋಗಕ್ಕಾಗಿ
ಉಡುಪಿ ಕ್ಷೇತ್ರದಲ್ಲಿ ನರ್ಮ್ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು.
ಉಪ್ಪೂರಿಗೆ ದಾಖಲೆ ಅನುದಾನ: ಉಪ್ಪೂರಿನಿಂದ ಮಣಿಪಾಲಕ್ಕೆ ಕೇವಲ 5 ನಿಮಿಷದಲ್ಲಿ ಸಂಪರ್ಕಕ್ಕೆ ಶೀಂಬ್ರ ಪರಾರಿ ಸೇತುವೆ ಅಂದಾಜು 10 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳು ತ್ತಿದೆ. ಜತೆಗೆ 43 ಕೋಟಿ ರೂ. ಅನುದಾನದಲ್ಲಿ ತಾಂತ್ರಿಕ ಶಿಕ್ಷಣದ ಕಾಲೇಜು ನಿರ್ಮಾಣ ಹಂತದಲ್ಲಿದೆ ಎಂದು ಸಚಿವ ಪ್ರಮೋದ್ ಹೇಳಿದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಲ್ಲಾ ಎಸ್‌ಪಿ ಡಾ| ಸಂಜೀವ ಎಂ. ಪಾಟೀಲ್, ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ, ವಿಶೇಷ ತಹಶೀಲ್ದಾರ್ ಪ್ರದೀಪ್ ಕುಡೇಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್‌ರಾಜ್, ಚರ್ಚ್ ಧರ್ಮ ಗುರುಗಳಾದ ವಂ| ಜೋಸೆಫ್ ರೋಡ್ರಿಗಸ್, ತಾ.ಪಂ. ಮಾಜಿ ಸದಸ್ಯ ಸಂಜೀವ ಪೂಜಾರಿ, ಪಂಚಾಯತ್ ಅಧ್ಯಕ್ಷೆ ಆರತಿ ಪೂಜಾರಿ ಉಪಸ್ಥಿತರಿದ್ದರು. ತಾ.ಪಂ. ಸದಸ್ಯ ದಿನಕರ ಹೇರೂರು ಸ್ವಾಗತಿಸಿ, ಪಿಡಿಒ ರಾಜೇಂದ್ರ ವಂದಿಸಿದರು. ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕರ್ಕೇರ ಪ್ರಸ್ತಾವನೆ ಗೈದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರ್ವಹಿಸಿದರು.
66 ಜನಸಂಪರ್ಕ ಸಭೆ ಪೂರ್ಣ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಸಭೆಯ ಎಲ್ಲ ವಾರ್ಡ್ ಹಾಗೂ ಎಲ್ಲ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ಜರಗಿದೆ. ಇಲಾಖಾ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಯಿಸಿ ಪ್ರತಿಯೊಬ್ಬರ ಅಹವಾಲನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹರಿಸುವ ಕಾರ್ಯಕ್ರಮ ಇದಾಗಿದೆ. ಉಪ್ಪೂರಿನಲ್ಲಿ ಕೊನೆಯದಾಗಿ 66ನೇ ಜನಸಂಪರ್ಕ ಸಭೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.