ಕೋವಿಡ್ ನಿಯಂತ್ರಣ: ಜನವರಿ 2ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೊಸ ನಿಯಮ ಜಾರಿ
Team Udayavani, Dec 31, 2022, 11:53 AM IST
ಉಡುಪಿ: ಪ್ರಸ್ತುತ ಕೋವಿಡ್ 19 ಸೋಂಕು ಭೀತಿ ಮತ್ತೆ ಆರಂಭವಾಗಿದ್ದು, ಜನರು ಗುಂಪಾಗಿ ಸೇರುವ ಹೊಸ ವರ್ಷಾಚರಣೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್-19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೆಲವು ನಿಬಂಧನೆಗಳನ್ನು ವಿಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಪಾಲಿಸಬೇಕಾದ ಮಾರ್ಗಸೂಚಿಗಳು
1 ಹೊಸ ವರ್ಷಕ್ಕೆ ಸಂಬಂಧಿಸಿದಂತೆ ದಿನಾಂಕ: 31-12-2022, 01-01-2023 ಮತ್ತು 02.01.2023 ರಂದು ಆಚರಿಸಲಾಗುವ ಎಲ್ಲಾ ಸಮಾರಂಭಗಳನ್ನು ಮಧ್ಯರಾತ್ರಿ ಒಂದು ಗಂಟೆಯ ಒಳಗಾಗಿ ಕಡ್ಡಾಯವಾಗಿ ಮುಕ್ತಾಯಗೊಳಿಸತಕ್ಕದ್ದು.
2 ದೊಡ್ಡ ಪ್ರಮಾಣದಲ್ಲಿ ನಡೆಸುವ ಸಮಾರಂಭಗಳನ್ನು ಕಡ್ಡಾಯವಾಗಿ ಹೊರಾಂಗಣದಲ್ಲಿ ಬೆಳಗಿನ ಹೊತ್ತಿನಲ್ಲಿ ನಡೆಸತಕ್ಕದ್ದು. ಸಾಧ್ಯವಾದಷ್ಟು ಮುಂಜಾನೆ ಹಾಗೂ ತಡರಾತ್ರಿಯ ಸಮಯದಲ್ಲಿ ಆಚರಣೆ ಮಾಡುವುದನ್ನು ತಪ್ಪಿಸುವುದು.
3 ಸಾರ್ವಜನಿಕರು ಸೇರುವ ಪ್ರದೇಶ/ಸ್ಥಳಗಳಲ್ಲಿ ಆಸನ ಸಾಮರ್ಥ್ಯ ಮೀರದಂತೆ ಮುಖ್ಯವಾಗಿ ಒಳಾಂಗಣ ಪ್ರದೇಶ /ಸ್ಥಳಗಳಾದ ಹೋಟೆಲ್ಸ್/ಬಾರ್ ಅಂಡ್ ರೆಸ್ಟೋರೆಂಟ್ಸ್/ ರೆಸಾಟ್ಸ್/ ಪಬ್ ಕ್ಲಬ್ ಇತ್ಯಾದಿಗಳಲ್ಲಿನ ಆಸನ ಸಾಮರ್ಥ್ಯ ಮೀರದಂತೆ ಸಂಬಂಧಪಟ್ಟ ಮಾಲೀಕರು/ವ್ಯವಸ್ಥಾಪಕರುಗಳು ಕ್ರಮಕೈಗೊಳ್ಳತಕ್ಕದ್ದು.
4 ಎಲ್ಲಾ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಛೇರಿಗಳು, ಬಸ್ ನಿಲ್ದಾಣಗಳು, ಪ್ರಾರ್ಥನಾ ಮಂದಿರ/ಪೂಜಾ ಮಂದಿರ/ದೇವಸ್ಥಾನಗಳು, ಅಂಗಡಿ ಮುಂಗಟ್ಟುಗಳು, ಕೈಗಾರಿಕೆ ಹಾಗೂ ಇತರೆ ಕಾರ್ಖಾನೆಗಳು ಇತ್ಯಾದಿ ಪ್ರದೇಶಗಳಲ್ಲಿ ಮುಖಗವಸವನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯವಾಗಿರುತ್ತದೆ.
5 ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಹಾಗೂ ಇತ್ಯಾದಿ ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತರಾಗಿ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಯನ್ನು ಪಡೆದುಕೊಳ್ಳುವುದು.
6. 60 ವರ್ಷ ಮೇಲ್ಪಟ್ಟ ವಯಸ್ಕರರು, ಅನಾರೋಗ್ಯದಿಂದ ಬಳಲುತ್ತಿರುವವರು, ಗರ್ಭಿಣಿಯರು ಮತ್ತು ಬಾಣಂತಿಯರು ಇಂತಹ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವುದರಿಂದ ದೂರವಿರುವುದು.
7 ಸಮಾರಂಭಗಳು, ಹೋಟೆಲ್ಸ್/ ಬಾರ್ ಅಂಡ್ ರೆಸ್ಟೋರೆಂಟ್ಸ್/ ರೆಸಾಟ್ಸ್/ ಪಬ್/ ಕ್ಲಬ್ ಮತ್ತು ಇತ್ಯಾದಿಗಳ ಆಯೋಜಕರು/ ವ್ಯವಸ್ಥಾಪಕರು ಹಾಗೂ ಸೇವಾ ಸಿಬ್ಬಂದಿಗಳು ಆದ್ಯತೆ ಮೇರೆಗೆ ಬೂಸ್ಟರ್ ಡೋಸ್ ಅನ್ನು ಪಡೆಯುವುದು. ಕನಿಷ್ಠ ಎರಡು ಡೋಸ್ ಲಸಿಕೆಗಳನ್ನು ಪಡೆಯುವುದನ್ನು ನಿರೀಕ್ಷಿಸಲಾಗಿದೆ.
ಪ್ರವೇಶ ದ್ವಾರದಲ್ಲಿ ಪಾಲಿಸ ಬೇಕಾದ ಮಾರ್ಗಸೂಚಿಗಳು
1 ಮೇಲ್ಕಂಡ ಪ್ರದೇಶ/ಸ್ಥಳಗಳ ಪುವೇಶ ದ್ವಾರದಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ಸೇರುವುದನ್ನು ತಪ್ಪಿಸಲು ಒಂದಕ್ಕಿಂತ ಹೆಚ್ಚಿನ ಪುವೇಶ ದ್ವಾರಗಳನ್ನು ನಿರ್ಮಿಸುವುದು.
2 ಒಳಾಂಗಣ ಪ್ರದೇಶಗಳಲ್ಲಿ ಸಮಾರಂಭಗಳು ನಡೆಯುವ ಎಲ್ಲಾ ಸಂದರ್ಭಗಳಲ್ಲೂ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು ಮತ್ತು ಸಾಮಾಜಿಕ ಅಂತರವನ್ನುಕಾಪಾಡಿಕೊಳ್ಳುವುದು.
3 ಪ್ರವೇಶ ದ್ವಾರದಲ್ಲಿ “ಮಾಸ್ಕ್ ಇಲ್ಲದೆ ಪ್ರವೇಶ ಇಲ್ಲ” ಎಂಬ ಫಲಕವನ್ನುಪ್ರದರ್ಶಿಸುವುದು.
4 ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಟೀನಿಂಗ್ ವ್ಯವಸ್ಥೆ ಮಾಡಿಕೊಳ್ಳತಕದ್ದು.
5 ಒಳಾಂಗಣ ಸಮಾರಂಭಗಳಲ್ಲಿ ಪ್ರತಿಯೊಬ್ಬರು ಹ್ಯಾಂಡ್ ಸ್ಯಾನಿಟೈಸರ್ ಬಳಸಲು ಅರಿವು ಮೂಡಿಸುವುದು.
6 ಬಹುದೊಡ್ಡ ಸಮಾರಂಭಗಳನ್ನು ನಡೆಸಲು ಉದ್ದೇಶಿಸುವ ಆಯೋಜಕರು ಸಮಾರಂಭಗಳಲ್ಲಿ ಭಾಗವಹಿಸುವಂತಹ ವ್ಯಕ್ತಿಯು ಅಸ್ವಸ್ಥಗೊಂಡಲ್ಲಿ ಅಂತಹವರುಗಳನ್ನು ಹತ್ತಿರದ ವಿಶೇಷ ಸೌಲಭ್ಯವುಳ್ಳ, ಆಸ್ಪತ್ರೆಗೆ ಆಂಬ್ಯುಲೆನ್ಸ್ ಸೇವೆಯ ಮೂಲಕ ದಾಖಲಿಸಲು ಮುಂಚಿತವಾಗಿ ವ್ಯವಸ್ಥೆ ಮಾಡಿಕೊಳ್ಳತಕ್ಕದು.
7 ಸಿನಿಮಾ ಮಂದಿರಗಳಿಗೆ ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವ ಪ್ರತಿಯೊಬ್ಬ ಪ್ರೇಕ್ಷಕರು N-95 ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. ಈ ಬಗ್ಗೆ ಪವೇಶ ದ್ವಾರದಲ್ಲಿರುವ ಸಿಬ್ಬಂದಿಗಳು ಪ್ರೇಕ್ಷಕರಿಗೆ ತಿಳಿ ಹೇಳುವುದು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.