ಕೃಷಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿ: ಶಶಿಕಾಂತ್ ಪಡುಬಿದ್ರಿ
Team Udayavani, Sep 26, 2019, 5:13 AM IST
ಪಡುಬಿದ್ರಿ: ನೂತನ ತಂತ್ರಜ್ಞಾನ ಅಳವಡಿಸಿಕೊಂಡು ರೈತರು ಕೃಷಿಯಲ್ಲಿ ಮುಂದುವರಿಯಬೇಕು. ಇತರ ಎಲ್ಲ ಕೃಷಿಯಂತ್ರಗಳಿಗೆ ಇಲಾಖೆ ಮೂಲಕ ಸಹಾಯಧನ ಲಭಿಸುತ್ತಿದ್ದು, ತೆಂಗಿನ ಮರ ಹತ್ತುವ ಯಂತ್ರ ಒದಗಿಸಲು ಕಡಿಮೆ ದರದಲ್ಲಿ ಸಹಕಾರಿ ಸಂಘಗಳು ಮುಂದಾಗಬೇಕು ಎಂದು ಜಿ. ಪಂ. ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ ಹೇಳಿದರು.
ಉಡುಪಿ ಜಿ.ಪಂ. ಕೃಷಿ ಇಲಾಖೆ, ಆತ್ಮ ಅನುಷ್ಠಾನ ಸಮಿತಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘ, ಹೆಜಮಾಡಿ ಹಾಲು ಉತ್ಪಾದಕರ ಸಹಕಾರಿ
ಸಂಘಗಳ ಸಹಯೋಗದಲ್ಲಿ ಹೆಜಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನದಲ್ಲಿ ಸೆ. 25ರಂದು ಆಯೋಜಿ ಸಿದ್ದ ಕೃಷಿ, ಹೈನುಗಾರಿಕೆ, ತೋಟಗಾರಿಕೆ ಬಗ್ಗೆ ತಾಂತ್ರಿಕ ಮಾಹಿತಿ, ಯಂತ್ರದ ಮೂಲಕ ತೆಂಗಿನ ಮರ ಹತ್ತುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಮತ್ತೆ ಕೃಷಿ ಯಲ್ಲೇ ತೊಡಗುವ ಸಮಯ ಬಂದಿದೆ. ಶೇ.
10 ಮಳೆ ಬರುವ ಇಸ್ರೇಲ್ ದೇಶವು
ತಂತ್ರಜ್ಞಾನ ಬಳಸಿ ಕೃಷಿಯಲ್ಲಿ ಯಶಸ್ವಿ ಯಾದಂತೆ ಇಲ್ಲಿನ ರೈತರು ತಂತ್ರಜ್ಞಾನ ಅಳವಡಿಸಿಕೊಂಡು ಲಾಭ ಗಳಿಸಬೇಕು. ತೆಂಗಿನ ಮರ ಹತ್ತುವ ಯಂತ್ರವನ್ನು ರಿಯಾಯಿತಿ ದರದಲ್ಲಿ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ವೈ. ಸುಧೀರ್‌ಕುಮಾರ್ ತಿಳಿಸಿದರು.
ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ನವೀನ್ ಎನ್.ಇ. ಕರಾವಳಿಯಲ್ಲಿ ಭತ್ತದ ಕೃಷಿ ಕಡಿಮೆ ಯಾಗುತ್ತಿರುವ ಪರಿಣಾಮ ಜಲಕ್ಷಾಮದ ಭೀತಿ ಎದುರಾಗುತ್ತಿದೆ. ವೈಜ್ಞಾನಿಕ ಪದ್ಧತಿಯಲ್ಲಿ ಭತ್ತದ ಕೃಷಿ ಮಾಡಿ ಮೂಲ ಸಂಪನ್ಮೂಲವಾದ ನೀರಿನ ಸಂಗ್ರಹಕ್ಕೆ ಕೈಜೋಡಿಸಬೇಕು ಎಂದರು.
ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತೋಟಗಾರಿಕೆ ಬೆಳೆಗಳ ಬಗ್ಗೆ ತಿಳಿಸಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟದ ಮಣಿಪಾಲ ಡೈರಿ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು.
ಹೆಜಮಾಡಿ ಗ್ರಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್, ಸದಸ್ಯೆ ರೇಣುಕಾ ಪುತ್ರನ್, ಹೆಜಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ, ಗ್ರಾ.ಪಂ. ಸದಸ್ಯ ಪ್ರಾಣೇಶ್ ಹೆಜಮಾಡಿ, ಪಡುಬಿದ್ರಿ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಗುರುರಾಜ ಪೂಜಾರಿ, ನಿರ್ದೇಶಕ ಗಿರೀಶ್ ಪಲಿಮಾರ್ ಉಪಸ್ಥಿತರಿದ್ದರು.
ಸಹಾಯಕ ಕೃಷಿ ಅಧಿಕಾರಿ ವಾದಿರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುಷ್ಪಲತಾ ಸ್ವಾಗತಿಸಿದರು. ಆತ್ಮ ಅನುಷ್ಠಾನ ಸಮಿತಿಯ ಸಂಜನಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.