ಪತ್ರಿಕೆಗಳು ಸಮಾಜದ ಕಣ್ಣುಗಳಿದ್ದಂತೆ: ದಿವಾಕರ ಮರಕಾಲ
Team Udayavani, Jul 4, 2017, 3:45 AM IST
ಹೆಬ್ರಿ: ಪತ್ರಿಕೆಗಳು ಸಮಾಜದ ಕಣ್ಣುಗಳಿದ್ದಂತೆ. ಪತ್ರಿಕೆಗಳು ಸಮಾಜದಲ್ಲಿ ನಡೆಯುತ್ತಿರುವ ಒಳಿತು ಕೆಡುಕುಗಳನ್ನು ತಿಳಿಸುವ ಕೆಲಸವನ್ನು ಮಾಡುತ್ತವೆ. ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳನ್ನು ಪ್ರಕಟಿಸುವ ಮೂಲಕ ಅದನ್ನು ಪ್ರತಿಭಟಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತವೆ. ಸಮಾಜದಲ್ಲಿ ಉತ್ತಮ ಕೆಲಸಗಳನ್ನು ಎಲ್ಲರಿಗೂ ತಿಳಿಸುವ ಮೂಲಕ ಒಳ್ಳೆಯ ಕೆಲಸಗಳನ್ನು ಮಾಡುವಲ್ಲಿ ಜನರನ್ನು ಪ್ರೇರೇಪಿಸುತ್ತವೆ.
ಸಮಾಜವು ಉತ್ತಮವಾಗಿ ರೂಪುಗೊಳ್ಳುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವವಾದದ್ದು. ಪತ್ರಿಕೆಗಳನ್ನು ಮನೆಬಾಗಿಲಿಗೆ ವಿತರಿಸುವ ಕಾಯಕದಲ್ಲಿರುವವರಿಗೆ ಅಭಿನಂದನೆ ಸಲ್ಲಿಸುವ ಜೇಸಿಐ ಕಾರ್ಯಕ್ರಮ ಶ್ಲಾಘನೀಯ ಎಂದು ಹೆಬ್ರಿ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ದಿವಾಕರ ಮರಕಾಲ ಹೇಳಿದರು.
ಅವರು ಹೆಬ್ರಿ ಜೇಸಿಐ ಆಶ್ರಯದಲ್ಲಿ ಜೂ.30ರಂದು ಹೆಬ್ರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ನಡೆದ ಪೇಪರ್‌ಗೊಂದಿಷ್ಟು ಕಲರ್ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಬ್ರಿ ವಲಯದ ಉದಯವಾಣಿ ವಿತರಕರಾದ ಪದ್ಮನಾಭ ನಾಯಕ್ ಹಾಗೂ ಸುಮತಿ ಎಸ್. ಬಡಿRಲಾಯ ಅವರನ್ನು ಸಮ್ಮಾನಿಸಿ ಮಾತನಾಡಿದರು.
ಅಂಕಣಕಾರ ಎಚ್ ಬಾಲಕೃಷ್ಣ ಮಲ್ಯ ಮಾತನಾಡಿ ಸ್ಪರ್ಧಾತ್ಮಕ ಪತ್ರಿಕೋದ್ಯಮ ಯುಗದಲ್ಲಿ ಇಂದು ಸವಾಲುಗಳು ಹಲವಾರು ಕ್ಷಣಾರ್ಧದಲ್ಲಿ ಸುದ್ದಿ ಬಿತ್ತರಿಸುವ ಜವಾಬ್ದಾರಿ ಪತ್ರಕರ್ತರಿಗೆ ಇದೆ. ತಮ್ಮನ್ನು ಕುಟುಂಬದೊಂದಿಗೆ ಕಳೆಯುವ ಸಂತೋಷವನ್ನು ಬದಿಗೊತ್ತಿ ದಿನದ 24ಗಂಟೆ ಸುದ್ಧಿ ಸಂಗ್ರಹಿಸುವ ಮತ್ತು ಕ್ಷಣಾರ್ಧದಲ್ಲಿ ಬಿತ್ತರಿಸುವ ಸವಾಲಿನ ಕಾಯಕದಲ್ಲಿ ತಮ್ಮ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಪತ್ರಕರ್ತರು ಅಭಿನಂದನಾರ್ಹರು ಎಂದರು. ಈ ಸಂದರ್ಭದಲ್ಲಿ ಹೆಬ್ರಿ ವಲಯದ ಪತ್ರಕರ್ತರನ್ನು ಗೌರವಿಸಲಾಯಿತು. ನ್ಯಾಯವಾದಿ ಕೃಷ್ಣ ಶೆಟ್ಟಿ, ಹೆಬ್ರಿ ಠಾಣಾ ಹೆಡ್ ಕಾನ್‌ಸ್ಟೆàಬಲ್ ಸುರೇಶ್ ಕುಮಾರ್ ಮಾತನಾಡಿದರು.
ಸಮಾರಂಭದಲ್ಲಿ ಜೇಸಿಐ ಕ್ರೀಡಾ ವಿಭಾಗಾಧಿಕಾರಿ ಪುಟ್ಟಣ್ಣ ಭಟ್, ಜೇಸಿರೇಟ್ ಅಧ್ಯಕ್ಷೆ ರಂಜಿತಾ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
ಹೆಬ್ರಿ ಜೇಸಿಐ ಅಧ್ಯಕ್ಷ ಪ್ರಶಾಂತ ಪೈ ಸ್ವಾಗತಿಸಿ, ಶಿಕ್ಷಕ ಪ್ರಕಾಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಜೇಸಿಐ ಕಾರ್ಯದರ್ಶಿ ನಾಗೇಂದ್ರ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.