“ನಿತ್ಯ ಪೂಜೆ, ಉಪಾಸನೆ ನಡೆಯಲಿ’
Team Udayavani, Aug 18, 2017, 7:40 AM IST
ಕುಂದಾಪುರ: ದೇವಸ್ಥಾನಗಳಲ್ಲಿ ನಿತ್ಯ ನಿರಂತರವಾಗಿ ದೇವರ ಪೂಜೆ, ಉಪಾಸನೆಗಳು ನಡೆದುಕೊಂಡು ಬಂದರೆ ದೇವಸ್ಥಾನದಲ್ಲಿ ದೇವರ ಸಾನ್ನಿಧ್ಯ ವೃದ್ಧಿಯಾಗುತ್ತದೆ. ದೇಗುಲಕ್ಕೆ ಆಗಮಿಸುವ ಭಕ್ತರ ಸಕಲ ಇಷ್ಟಾರ್ಥಗಳು ಈಡೇರಿ ದೇವಸ್ಥಾನ ಅಭಿವೃದ್ಧಿಯಾಗುತ್ತದೆ ಎಂದು ಅಕ್ಕಲಕೋಟ ಸ್ವಾಮಿ ಸಮರ್ಥ ಆಶ್ರಮದ ಮ.ನಿ.ಪ್ರ. ಚೆನ್ನಬಸವ ಸ್ವಾಮೀಜಿ ಹೇಳಿದರು.
ಅವರು ಶ್ರೀಮದ್ ವೀರಶೈವ ಶಿವಯೋಗ ಮಂದಿರ ಸಂಸ್ಥೆ ಹಾಗೂ ವೀರಶೈವ ಮಹಾಸಭೆ ಸಂಸ್ಥಾಪಕ ಶ್ರೀ ಮೆ.ಪ್ರ. ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ 150ನೇ ಜನ್ಮ ಮಹೋತ್ಸವದ ನಿಮಿತ್ತ ಗುಜ್ಜಾಡಿ ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಜರಗಿದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಸಮಾಜದಲ್ಲಿ ಹಿಂದೂಗಳಿಂದ ಪಂಗಡಗಳು ಸಮಾಜದ ಮುಖ್ಯ ವಾಹಿನಿಗೆ ಬರುವ ಪ್ರಯತ್ನಗಳು ನಿರಂತರ ವಾಗಿ ನಡೆಯಬೇಕು. ಗೋವುಗಳನ್ನು ರಕ್ಷಣೆ ಮಾಡುವ ಮತ್ತು ಗೋಹತ್ಯೆಯನ್ನು ತಡೆಯುವಲ್ಲಿ ಸಮಾಜದ ಪ್ರತಿಯೊಬ್ಬರು ಕಾರ್ಯ ತತ್ಪರರಾಗಬೇಕು ಎಂದರು.
ಹರಿದ್ವಾರದ ಋಷಿಕುಲ ಆಶ್ರಮದ ಮ.ನಿ.ಪ್ರ. ಮಲ್ಲಿಕಾರ್ಜುನ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ನರಸಿಂಹ ಕೆ. ಮತ್ತು ಪ್ರಧಾನ ಅರ್ಚಕ ಪಾಂಡುರಂಗ ಕೆ. ಉಭಯ ಶ್ರೀಗಳಿಗೆ ಫಲಪುಷ್ಪ ನೀಡಿ ಗೌರವಿಸಿದರು. ದೇವಸ್ಥಾನದ ಕಾರ್ಯದರ್ಶಿ ರಘುವೀರ ಕೆ., ಆಡಳಿತ ಮಂಡಳಿ ಸದಸ್ಯರು, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸದಸ್ಯರು, ಭಕ್ತಾದಿಗಳು ಮತ್ತಿತರರು ಉಪಸ್ಥಿತರಿದ್ದರು.ದೇವಸ್ಥಾನದ ಗೌರವಾಧ್ಯಕ್ಷ ನಾರಾಯಣ ಕೆ. ಸ್ವಾಗತಿಸಿ ನಿರೂಪಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.