Udupi ಪರೀಕ್ಷಾ ಸಮಯದಲ್ಲಿ ಬಂದ್ ಬೇಡ: ಕೋಟ ಶ್ರೀನಿವಾಸ ಪೂಜಾರಿ
Team Udayavani, Oct 2, 2023, 12:31 AM IST
ಉಡುಪಿ: ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಕರೆಯುವ ಆಶ್ವಾಸನೆ ನೀಡಿರುವುದರಿಂದ ಮತ್ತು ಶಾಲಾ ಮಕ್ಕಳ ಪರೀಕ್ಷೆ ನಡೆಯುತ್ತಿರುವುದರಿಂದ ಜಿಲ್ಲಾ ಬಂದ್ ಕರೆಯನ್ನು ಲಾರಿ ಟೆಂಪೋ ಮಾಲಕರು ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನ ಕಾರರಿಗೆ ಮನವಿ ಮಾಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಎಂ ಅವರೊಂದಿಗೆ ಚರ್ಚಿಸಿ ಅ. 5ರಂದು ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸರಕಾರದ ಜತೆ ಚರ್ಚಿಸಿ ಹೋರಾಟಗಾರರಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡಲಿದ್ದೇವೆ. ರವಿವಾರ ಮುಖ್ಯಮಂತ್ರಿಗಳನ್ನು ಖುದ್ದು ಭೇಟಿಯಾಗಿದ್ದು, ಅವರ ಸಮಕ್ಷಮ ಸಭೆ ಕರೆಯಲು ಕೋರಿದಾಗ ಶೀಘ್ರದಲ್ಲಿ ಜಿಲ್ಲಾ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.