ರಸಗೊಬ್ಬರದ ಕೊರತೆ ಇಲ್ಲ: ಅನಂತ್‌

Team Udayavani, Jun 3, 2017, 2:57 PM IST

ananth.jpg

ಕೊಲ್ಲೂರು: ಕೇಂದ್ರ ಸರಕಾರ ಪ್ರತೀ 50 ಕೆ.ಜಿ. ರಾಸಾಯನಿಕ ಗೊಬ್ಬರ ಚೀಲವನ್ನು ಯುಪಿಎ ಸರಕಾರಕ್ಕಿಂತ ಕಡಿಮೆ ದರದಲ್ಲಿ ನೀಡುತ್ತಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿ ರೈತರಿಗೆ ಎಲ್ಲಿಯೂ ರಾಸಾಯನಿಕ ಗೊಬ್ಬರದ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೇಳಿದರು.

ಕೊಲ್ಲೂರು, ಶೃಂಗೇರಿ ಹಾಗೂ ಹೊರನಾಡು ಕ್ಷೇತ್ರ ಸಂದರ್ಶನ ಮಾಡಿ ರಾಜ್ಯ ಎದುರಿಸುತ್ತಿರುವ ತೀವ್ರ ಬರಗಾಲದಿಂದ ತತ್ತರಿಸಿರುವ ಜನರಿಗೆ ವರುಣನ ಕೃಪೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿ ಸಲು ಕೊಲ್ಲೂರಿಗೆ ಆಗಮಿಸಿದ ಸಂದರ್ಭ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. 

ರಾಜಕಾರಣಕ್ಕೆ ಅಲ್ಪಸಂಖ್ಯಾಕರನ್ನು ಓಲೈಸುವ ಕಾಂಗ್ರೆಸ್‌ ನಾಯಕರು ಅಂಬೇಡ್ಕರ್‌ ಅವರ ವಿಚಾರ ಅರ್ಥ ಮಾಡಿಕೊಂಡು ಹೇಳಿಕೆ ನೀಡಲಿ ಎಂದರು. ಕೇಂದ್ರ ಸರಕಾರದಿಂದ ಬರಗಾಲ ಹಾಗೂ ಅಭಿ ವೃದ್ಧಿ ಸಲುವಾಗಿ 4,500 ಕೋ. ರೂ. ಧನಸಹಾಯ ನೀಡಲಾಗಿದೆ. 550 ಕೋ. ರೂ. ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಬಳಕೆ ಮಾಡದಿರುವುದು ದುರದೃಷ್ಟಕರ ಎಂದು ಅವರು ಹೇಳಿದರು. 

ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌ ಆಡಳಿತಾವಧಿಯಲ್ಲಿ 2 ಬಾರಿ ಸಾಲ ಮನ್ನಾ ಮಾಡಲಾಗಿದೆ. ತೀವ್ರ ಬರಗಾಲವಿರುವ ಈ ಪರಿಸ್ಥಿತಿಯಲ್ಲಿ ಕೃಷಿ ಸಾಲ ಮನ್ನಾ ಮಾಡಲು ರಾಜ್ಯ ಸರಕಾರ ಹಿಂದೇಟು ಹಾಕುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದರು. 

ರಾಜ್ಯದ ಎಲ್ಲ ಬಿಜೆಪಿ ನಾಯಕರು ಒಂದಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ಜನಪರ ಕಾಳಜಿ, ಕೇಂದ್ರ ಸರಕಾರದ 3 ವರುಷದ ಸಾಧನೆ ರಾಷ್ಟ್ರಮಟ್ಟದಲ್ಲಿ ಎಲ್ಲ ವರ್ಗದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಸರಕಾರ ಮುಂದಿನ 2 ವರುಷ ಪೂರ್ಣಗೊಳಿಸುವುದರೊಳಗೆ ಇನ್ನಷ್ಟು ಜನಪರ ಕಾಳಜಿಯ ಕಾರ್ಯಕ್ರಮದೊಡನೆ ಜನ ಮೆಚ್ಚುಗೆ ಗಳಿಸಲಿದೆ ಎಂದರು.

ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ, ವಿಧಾನ ಪರಿಷತ್‌ ಮುಖ್ಯ ಸಚೇತಕ ಸುನಿಲ್‌ ಕುಮಾರ್‌, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಜಿ.ಪಂ. ಸದಸ್ಯ ಬಾಬು ಹೆಗ್ಡೆ, ಬೈಂದೂರು ಶಕ್ತಿ ಕೇಂದ್ರದ ಅಧ್ಯಕ್ಷ ಶಿವರಾಜ ಪೂಜಾರಿ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಶ್‌ ಕಾವೇರಿ, ವ್ಯವಸ್ಥಾಪನ ಸಮಿತಿ ಸದಸ್ಯ ರಮೇಶ್‌ ಗಾಣಿಗ, ಅರ್ಚಕ ಡಾ| ಕೆ.ಎನ್‌. ನರಸಿಂಹ ಅಡಿಗ, ಶ್ರೀಧರ ಅಡಿಗ, ನಾರಾಯಣ ನಾಯಕ್‌, ಜಿಲ್ಲಾ ಖಜಾಂಚಿ ರವಿ ಅಮೀನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ

ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.