ರಜೆ ಇಲ್ಲ, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ: ಕೂರ್ಮಾ ರಾವ್
Team Udayavani, Jul 12, 2022, 7:15 AM IST
ಉಡುಪಿ: ಜಿಲ್ಲೆಯಲ್ಲಿ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಸೋಮವಾರದಿಂದ ಕಾಲೇಜುಗಳು ಮತ್ತೆ ಆರಂಭವಾಗಿದ್ದು, ಮಂಗಳವಾರದಿಂದ ಶಾಲೆಗಳೂ ತೆರೆಯಲಿವೆ. ಆದರೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಪರಿಸ್ಥಿತಿ ಆಧರಿಸಿ ಸ್ಥಳೀಯವಾಗಿ ರಜೆ ಘೋಷಣೆಗೆ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರರು ನೀಡಿರುವ ವರದಿ ಪರಿಗಣಿಸಿ ಶಾಲೆಗೆ ರಜೆ ಘೋಷಣೆ ಮಾಡಿಲ್ಲ. ಬದಲಾಗಿ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ತೋಡು, ಹಳ್ಳ ಮೊದಲಾದ ಕಠಿನ ದಾರಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಸುರಕ್ಷಿತವಾಗಿರಲು ಸೂಚಿಸುವುದು, ಶಿಥಿಲ, ದುರ್ಬಲ ಕಟ್ಟಡದಲ್ಲಿ ಪಾಠ ಮಾಡುವಂತಿಲ್ಲ. ಪರಿಸ್ಥಿತಿ ಅವಲೋಕಿಸಿ, ಸ್ಥಳೀಯರವಾಗಿ ರಜೆ ಘೋಷಣೆ ಮಾಡಬಹುದು. ಈಗಾಗಲೇ ರಜೆ ನೀಡಿ ವ್ಯತ್ಯಯವಾಗಿರುವ ಕಲಿಕಾ ತರಗತಿಯನ್ನು ಶನಿವಾರ, ರವಿವಾರ ತರಗತಿ ನಡೆಸಿ ಸರಿದೂಗಿಸುವುದು.
ವಿದ್ಯಾರ್ಥಿಗಳು ತಗ್ಗು ಪ್ರದೇಶ, ನೆರೆಪೀಡಿತ ಪ್ರದೇಶ, ಕೆರೆ, ನದಿ, ಸಮುದ್ರಕ್ಕೆ ಹೋಗದಂತೆ ಶಿಕ್ಷಕರು, ಪಾಲಕ, ಪೋಷಕರು ಎಚ್ಚರಿಕೆ ವಹಿಸುವುದು. ವಿದ್ಯಾರ್ಥಿಗಳಿಗೆ ಪ್ರಾಕೃತಿಕ ವಿಕೋಪದ ಬಗ್ಗೆ ಮಾಹಿತಿ ನೀಡುವುದು, ಶಾಲಾವರಣದಲ್ಲಿ ಅಪಾಯಕಾರಿ ಮರಗಳಿದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ತೆರವುಗೊಳಿಸಲು ಕ್ರಮವಹಿಸಲು ಶಾಲಾಡಳಿತ ಮಂಡಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.