ಎನ್ನೆಸ್ಸೆಸ್ ಶಿಬಿರದಲ್ಲಿ ಶೌಚಾಲಯ ನಿರ್ಮಿಸಿದ ವಿದ್ಯಾರ್ಥಿಗಳು!
Team Udayavani, Dec 29, 2018, 12:30 AM IST
ಕಾರ್ಕಳ: ತಾಲೂಕಿನ ನಿಟ್ಟೆ ಡಾ| ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನ ಎನ್‌ನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವತಃ ತಾವೇ ಶೌಚಾಲಯ ನಿರ್ಮಾಣ ಮಾಡುವ ಮೂಲಕ ಸ್ವತ್ಛಭಾರತ ಕಲ್ಪನೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದ್ದು, ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರವು ಬೋಳಕೋಡಿ ಡಾ| ಶಂಕರ್ ಅಡ್ಯಂತಾಯ ಸ್ಮಾರಕ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು. ಅಲ್ಲಿ ಶೌಚಾಲಯ ನಿರ್ಮಾಣ ಅಗತ್ಯವಿದ್ದರಿಂದ ವಿದ್ಯಾರ್ಥಿಗಳು ಆ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಹಗಲು-ರಾತ್ರಿಯೂ ಕೆಲಸ !
ಕಟ್ಟಡಕ್ಕೆ ನಿರ್ಮಾಣಕ್ಕೆ ಸ್ಥಳೀಯ ವ್ಯಕ್ತಿ ಯೋರ್ವರ ನಿರ್ದೇಶನದಂತೆ ವಿದ್ಯಾರ್ಥಿಗಳು ಕೆಲಸ ನಿರ್ವಹಿಸಿದ್ದಾರೆ. ಪಂಚಾಂಗ, ಗೋಡೆ ಮತ್ತು ಮಹಡಿ ಹೀಗೆ ಪ್ರತಿಯೊಂದು ಕೆಲಸವನ್ನು ವಿದ್ಯಾರ್ಥಿಗಳೇ 7 ದಿನದಲ್ಲಿ ಮಾಡಿದ್ದಾರೆ. ನಿರ್ಮಾಣ ಪರಿಕರಗಳನ್ನು ದಾನಿಗಳಿಂದ ಸಂಗ್ರಹಿಸಲಾಗಿತ್ತು. ಶೌಚಾಲಯದ ಕಟ್ಟಡ ಸುಮಾರು 150 ಚದರ ಅಡಿಯಲ್ಲಿ ನಿರ್ಮಾಣಗೊಂಡಿದ್ದು, ಬಾಲಕರಿಗೆ 3 ಮತ್ತು ಬಾಲಕಿಯರಿಗೆ 3 ಶೌಚಾಲಯ ರಚನೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.