ಅ. 2: ಉಡುಪಿ ಜಿಲ್ಲೆ ಒಡಿಎಫ್ ಪ್ಲಸ್ -1 ಘೋಷಣೆ
Team Udayavani, Aug 19, 2021, 6:53 AM IST
ಉಡುಪಿ: ಜಿಲ್ಲೆಯು ಈಗಾಗಲೇ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣದಲ್ಲಿ ಬಯಲು ಶೌಚ ಮುಕ್ತ ಜಿಲ್ಲೆಯಾಗಿದ್ದು, ಸಂಪೂರ್ಣ ಜಿಲ್ಲೆಯನ್ನು ಒಡಿಎಫ್ ಪ್ಲಸ್ -1 ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯನ್ನು ಸಂಪೂರ್ಣ ಒಡಿಎಫ್ ಪ್ಲಸ್ -1 ಎಂದು ಘೋಷಣೆ ಮಾಡಲು, ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಶೌಚಾಲಯ ಗಳ ನಿರ್ಮಾಣ, ಬಳಕೆ ಹಾಗೂ ನಿರ್ವಹಣೆ, ಘನತ್ಯಾಜ್ಯ ನಿರ್ವಹಣೆ, ಅಗತ್ಯ ವಿರುವ ಕಡೆ ಸಮುದಾಯ ಶೌಚಾಲಯ ನಿರ್ಮಾಣ ಮತ್ತು ಬಳಕೆ ಈ ಎಲ್ಲ ಅಂಶಗಳು ಅನುಷ್ಠಾನವಾಗಿರುವುದನ್ನು ಪರಿಶೀಲಿಸಲಾಗುತ್ತದೆ.
ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಒಟ್ಟು 1,369 ವೈಯಕ್ತಿಕ ಗೃಹ ಶೌಚಾಲಯಗಳ ಗುರಿ ಹೊಂದಿದ್ದು, ಈಗಾಗಲೇ ಈ ಎಲ್ಲ ಶೌಚಾಲಯಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆಯ 131 ಗ್ರಾ.ಪಂ.ಗಳಲ್ಲಿ ಘನ ತ್ಯಾಜ್ಯವನ್ನು ಕುಟುಂಬದ ಹಂತದಲ್ಲಿಯೇ ಬೇರ್ಪಡಿಸಿ ಸ್ವಸಹಾಯ ಸಂಘಗಳ ಮೂಲಕ ಸಂಗ್ರಹಿಸಿ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಒಣ ತ್ಯಾಜ್ಯ ಸಂಗ್ರಹಣೆ ಸಂಗ್ರಹಣೆ ಹಾಗೂ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಹಸಿ ತ್ಯಾಜ್ಯ ವನ್ನು ಮನೆ ಹಂತದಲ್ಲಿಯೇ ನಿರ್ವಹಣೆ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಒಣ ತ್ಯಾಜ್ಯ ಸಂಗ್ರ ಹಣೆಗೆ ಮನೆ ಮನೆಗೆ ನೀಲಿ ಬಣ್ಣದ ಬ್ಯಾಗ್ ನೀಡಲಾಗುತ್ತಿದ್ದು, ಈಗಾಗಲೇ ಜಿಲ್ಲೆಯ 92 ಗ್ರಾ.ಪಂ.ಗಳಿಗೆ ಒಣ ತ್ಯಾಜ್ಯ ಸಂಗ್ರಹಣೆ ಮಾಡಲು ಸ್ವಚ್ಛ ವಾಹಿನಿ ವಾಹನವನ್ನು ವಿತರಿಸಲಾಗಿದೆ.
ಎಂಆರ್ಎಫ್ ಘಟಕ :
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ 2.50 ಕೋಟಿ ರೂ ಮೊತ್ತದಲ್ಲಿ, ರಾಜ್ಯದ ಗ್ರಾಮೀಣ ಪ್ರದೇಶದ ಮೊದಲ ಎಂಆರ್‌ಎಫ್ ಘಟಕವು (ಮೆಟೀರಿಯಲ್ ರಿಕವರಿ ಫೆಸಿಲಿಟಿ- ಕೇಂದ್ರೀಕೃತ ಘನ ತ್ಯಾಜ್ಯ ಸಂಸ್ಕರಣ ಘಟಕ) ಕಾರ್ಯಾರಂಭ ಮಾಡುವ ಹಂತದಲ್ಲಿದೆ. ಸುಮಾರು 73 ಸಾವಿರ ಮನೆ ಹಾಗೂ 7,000 ವಾಣಿಜ್ಯ ಘಟಕಗಳ ಘನ ತ್ಯಾಜ್ಯ ಸಂಸ್ಕರಣೆಯನ್ನು ಇಲ್ಲಿ ಮಾಡಲು ಯೋಜನೆ ಸಿದ್ಧಗೊಂಡಿದೆ. ಘಟಕವು ಪ್ರತಿ ನಿತ್ಯ 10 ಟನ್ ತ್ಯಾಜ್ಯ ವಿಲೇವಾರಿಯ ಸಾಮರ್ಥ್ಯವನ್ನು ಹೊಂದಿದೆ.
ಎಫ್ಎಸ್ಎಂ ಪ್ಲಾಂಟ್ :
ಪ್ರಾಯೋಗಿಕವಾಗಿ ಉಡುಪಿ ಜಿಲ್ಲೆಯಲ್ಲಿ 80 ಬಡಗಬೆಟ್ಟು ಹಾಗೂ ಕಾರ್ಕಳ ತಾ|ನ ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಲ ತ್ಯಾಜ್ಯ ನಿರ್ವಹಣೆ ಘಟಕ ಆರಂಭ ವಾಗುತ್ತಿದೆ. ಇದರಿಂದಾಗಿ ಸುತ್ತಮುತ್ತಲಿನ ಗ್ರಾ.ಪಂ.ಗಳ ಕುಟುಂಬಗಳಿಗೆ ಅನುಕೂಲವಾಗಲಿದೆ.
ಜಿಲ್ಲೆಯಲ್ಲಿ ಈಗಾಗಲೇ 132ಕ್ಕೂ ಹೆಚ್ಚು ಗ್ರಾ.ಪಂ.ಗಳು ಒಡಿಎಫ್ ಪ್ಲಸ್-1 ಎಂದು ಘೋಷಣೆಯಾಗಿದ್ದು, ಎಲ್ಲ 155 ಗ್ರಾ.ಪಂ.ಗಳನ್ನು ಅ.2ರ ಗಾಂಧೀ ಜಯಂತಿಯಂದು ಒಡಿಎಫ್ ಪ್ಲಸ್ -1 ಎಂದು ಘೋಷಣೆ ಮಾಡುವ ಗುರಿ ಹೊಂದಲಾಗಿದೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಎಲ್ಲ ಗ್ರಾ.ಪಂ.ಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅವಧಿಯೊಳಗೆ ಗುರಿ ಸಾಧಿಸುವಂತೆ ಸೂಚನೆ ನೀಡಲಾಗಿದೆ.– ಡಾ| ನವೀನ್ ಭಟ್, ಜಿ.ಪಂ. ಸಿಇಒ, ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.