ಜನಸಂಪರ್ಕದಿಂದ ಅಧಿಕಾರಿಗಳು ಜನರ ಬಳಿಗೆ
Team Udayavani, Jul 23, 2017, 9:00 AM IST
ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜರಗುತ್ತಿರುವ ದೇಶದಲ್ಲೇ ವಿನೂತನವೆನಿಸಿದ ಗ್ರಾಮ ಮಟ್ಟದ ಜನಸಂಪರ್ಕ ಸಭೆಗಳಿಂದ ಅಧಿಕಾರಿಗಳು ಜನರ ಬಳಿಗೆ ತಲುಪು ವಂತಾಗಿದೆ. ಸಾರ್ವಜನಿಕರು ಕಚೇರಿ ಗಳಿಗೆ ಅಲೆದಾಡುವುದು ತಪ್ಪಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶನಿವಾರ ಕೆಂಜೂರು ಸುರಕ್ಷಿತ ಸಭಾಭವನದಲ್ಲಿ ಕೆಂಜೂರು ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು.
ದಾಖಲೆ ಕಾರ್ಯಗಳು
ಉಡುಪಿ ಕ್ಷೇತ್ರದ ಗ್ರಾಮಾಂತರ ಭಾಗಕ್ಕೆ ಕೋಟ್ಯಂತರ ರೂ. ಅನುದಾನ, ಉಚಿತ ವಿದ್ಯುತ್ ಸಂಪರ್ಕ, ಬಿಪಿಎಲ್ ಕಾರ್ಡ್ ವಿತರಣೆ, ನರ್ಮ್ ಬಸ್ ಸಂಚಾರ ಮತ್ತಿತರ ಸೌಕರ್ಯಗಳನ್ನು ಕಲ್ಪಿಸ ಲಾಗಿದೆ ಎಂದು ಸಚಿವ ಪ್ರಮೋದ್ ಹೇಳಿದರು.
ಸಾಲ ಮನ್ನಾ
ರಾಜ್ಯ ಸರಕಾರವು ಘೋಷಿಸಿದ ಸಾಲ ಮನ್ನಾದಿಂದ ಕೊಕ್ಕರ್ಣೆ ಸಿಂಡಿಕೇಟ್ ರೈ.ಸೇ.ಸ.ಸಂಘ ಒಂದರಲ್ಲೇ 739 ಸದಸ್ಯರು 3.43 ಕೋಟಿ ರೂ. ಮೊತ್ತದ ಪ್ರಯೋಜನ ಪಡೆದಿದ್ದಾರೆ ಎಂದರು.
ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ವಿಶೇಷ ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ತಾ.ಪಂ. ಸದಸ್ಯೆ ಡಾ| ಸುನೀತಾ ಡಿ. ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷೆ ಲತಾ, ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಪಂ. ಸದಸ್ಯೆ ಗೌರಿ ಸ್ವಾಗತಿಸಿ, ತಾ.ಪಂ. ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಪ್ರಸ್ತಾವನೆಗೈದರು.
ಆ. 1ರಿಂದ ಮರಳು
ಹಸಿರು ಪೀಠದ ಆದೇಶದಿಂದ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಜನಸಾಮಾನ್ಯರಿಗೆ ತೊಂದರೆಯಾಗಿದೆ. ಆದರೆ ಬರುವ ಆಗಸ್ಟ್ 1ರಿಂದ ಮತ್ತೆ ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಗೊಂಡು ಧಾರಾಳವಾಗಿ ಮರಳು ದೊರೆಯ ಲಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.