ಹೆಮ್ಮಾಡಿ ಸಮೀಪ ಟೈರ್ ಸ್ಫೋಟಗೊಂಡು ಕಾರು ಪಲ್ಟಿ : ಮಹಿಳೆ ಸ್ಥಳದಲ್ಲೇ ಸಾವು
Team Udayavani, Mar 29, 2021, 9:42 PM IST
ಕುಂದಾಪುರ: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು,ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಸಂಜೆ 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಹೆಮ್ಮಾಡಿಯ ಹೇಮಾಪುರ ಮಠದ ಸಮೀಪ ಸಂಭವಿಸಿದೆ.
ಉಡುಪಿಯ ಕೆಮ್ಮಣ್ಣು ಗ್ರಾಮದ ಹೂಡೆ ತೋನ್ಸೆಯ ನಿವಾಸಿ ಸಿಬ್ಗಾತುಲ್ಲಾ (38) ಅವರ ಪತ್ನಿ ಸುಹಾನ (30) ಮೃತ ದುರ್ದೈವಿ. ಕಾರಿನಲ್ಲಿದ್ದ ಸಿಬ್ಗಾತುಲ್ಲಾ ಹಾಗೂ 3 ತಿಂಗಳ ಚಿಕ್ಕ ಮಗು ಸಹಿತ ನಾಲ್ವರು ಮಕ್ಕಳು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಭಟ್ಕಳದಿಂದ ಉಡುಪಿಗೆ ಕಡೆಗೆ ಬರುತ್ತಿದ್ದಾಗ ಹೆಮ್ಮಾಡಿ ಸಮೀಪ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ, ಈ ಅವಘಡ ಸಂಭವಿಸಿದೆ. ಸುಹಾನ ಅವರ ತಾಯಿ ಮನೆ ಭಟ್ಕಳವಾಗಿದ್ದು, ಅಲ್ಲಿಗೆ ಹೋಗಿ ವಾಪಾಸ್ ಉಡುಪಿಗೆ ಬರುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸುವಲ್ಲಿ ಹೈವೇ ಪ್ಯಾಟ್ರೋಲ್ ಪೊಲೀಸರು ನೆರವಾದರು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.