ಎಲ್ಲ ಪೊಲೀಸ್ ಠಾಣೆಗಳಲ್ಲಿ “ತೆರೆದ ಮನೆ’ ಕಾರ್ಯಕ್ರಮ
ಪೊಲೀಸರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆ ತರಲಿದ್ದಾರೆ ಹುಷಾರ್!
Team Udayavani, Feb 19, 2020, 5:57 AM IST
ಉಡುಪಿ: ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗಳ ಎಲ್ಲ ಠಾಣೆಯಲ್ಲಿ “ತೆರೆದ ಮನೆ’ ಎಂಬ ನೂತನ ಕಾರ್ಯಕ್ರಮ ಶುರುವಾಗಿದ್ದು, ಪೊಲೀಸರೆಂದರೆ ಜನಸಾಮಾನ್ಯರಲ್ಲಿ ಇರುವ ಭಯವನ್ನು ಚಿವುಟಿ ಹಾಕುವ ಮಹತ್ವದ ಕಾರ್ಯಕ್ರಮ ಇದಾಗಿದೆ.
ಏನಿದು ಕಾರ್ಯಕ್ರಮ?
ಈ ಕಾರ್ಯಕ್ರಮ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಪರಿವರ್ತಿಸಲಾಗಿದೆ. ಮಕ್ಕಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಗುತ್ತದೆ. ಇನ್ನು ಕೆಲವಡೆ ಪೊಲೀಸರು ಶಾಲೆಗಳಿಗೆ ಭೇಟಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮವನ್ನು ನಗರ ಹಾಗೂ ಗ್ರಾಮಾಂತರ ಠಾಣೆಗಳಲ್ಲಿ ಯಶಸ್ವಿಯಾಗಿ ನಡೆಸಲು ಪೊಲೀಸ್ ಇಲಾಖೆ ಈಗಾಗಲೇ ಕ್ರಮ ಕೈಕೊಂಡಿದೆ.
ಯಾರಿಗೆ ಪ್ರಯೋಜನ?
ಜಿಲ್ಲೆಯ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆಯಲಿದ್ದಾರೆ. ತಿಂಗಳ ಪ್ರತಿ ಗುರುವಾರ ಎಲ್ಲ ಠಾಣೆಗಳು ಮಕ್ಕಳಿಗೆ ತೆರೆದ ಮನೆಯಂತಾಗಲಿದೆ. ಬಾಂಧವ್ಯ ವೃದ್ಧಿ ಹಾಗೂ ಶಾಲಾ ಹಂತದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬಹುದು ಎನ್ನುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ಮಕ್ಕಳಿಗೆ ತಿಳುವಳಿಕೆ?
ಪೊಲೀಸರ ಕರ್ತವ್ಯ ನಿರ್ವಹಣಾ ವಿಧಾನ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್ ವಿಭಾಗ, ಠಾಣಾ ಬರಹಗಾರರ ವಿಭಾಗ, ಠಾಣಾ ದಿನಚರಿ, ಅರ್ಜಿಗಳ ಬಗ್ಗೆಯೂ ಮನವರಿಕೆ ಮಾಡಿಕೊಡಲಾಗುವದು. ಅಂಗ ಶೋಧನಾ ಪುಸ್ತಕ, ಕೈದಿ ಬಂಧನ ಪುಸ್ತಕ, ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ, ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಸೇರಿದಂತೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ಮಕ್ಕಳಿಗೆ ತಿಳಿವಳಿಕೆ ನೀಡಲಾಗುತ್ತದೆ.
ಹೇಗಿರಲಿದೆ ಕಾರ್ಯಕ್ರಮ?
ಶಾಲೆಯ ವಿದ್ಯಾರ್ಥಿಗಳನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ಕರೆಸಿಕೊಳ್ಳಲಾಗುತ್ತದೆ ಅಥವಾ ಪೊಲೀಸರು ಶಾಲೆಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯ 24 ಪೊಲೀಸ್ ಠಾಣೆಯಲ್ಲಿ ವಾರದಲ್ಲಿ ಒಂದು ದಿನ ಪೊಲೀಸ್ ಠಾಣೆಯನ್ನು ಈ ಕಾರ್ಯಕ್ರಮಕ್ಕಾಗಿಯೇ ಮೀಸಲಿಟ್ಟಿದ್ದಾರೆ.
ಪೊಲೀಸ್ ಕಾರ್ಯವೈಖರಿ ಪರಿಚಯ
ತೆರೆದ ಮನೆ ಕಾರ್ಯಕ್ರಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿದೆ. ಪೊಲೀಸ್ ಬಗೆಗಿನ ಭಯ ಹೋಗಲಾಡಿಸುವುದರ ಜತೆಗೆ ಮಕ್ಕಳಿಗೆ ಪೊಲೀಸ್ ಕಾರ್ಯವೈಖರಿಯ ಪರಿಚಯ ಮಾಡಿಸಲಾಗುತ್ತದೆ. ಜಿಲ್ಲೆಯ ಎಲ್ಲ ಠಾಣೆಗಳಲ್ಲಿ ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಡೆಸಲಾಗಿದೆ. -ವಿಷ್ಣುವರ್ಧನ್, ಪೊಲೀಸ್ ವರಿಷ್ಠಾಧಿಕಾರಿ ಉಡುಪಿ
-ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.