![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 4, 2020, 8:06 PM IST
ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮದ್ಯದಂಗಡಿಗಳು ಹೊರತುಪಡಿಸಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ನಾಳೆಯಿಂದ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತವೆ.
ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೋಮವಾರ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದಾರೆ. ಈ ಹಿಂದೆ ಚಾಲ್ತಿಯಲ್ಲಿದ್ದ ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗಿನ ಆದೇಶವನ್ನು ಪರಿಷ್ಕರಿಸಲಾಗಿದ್ದು, ಸಂಜೆ 7 ರವರೆಗೂ ಅಗತ್ಯ ವಸ್ತುಗಳೂ ಸೇರಿದಂತೆ ಎಲ್ಲ ತೆರನಾದ ಅಂಗಡಿ ಮುಂಗಟ್ಟುಗಳು ಕಾರ್ಯ ನಿರ್ವಹಿಸಬಹುದು. ಆದರೆ ಮದ್ಯದಂಗಡಿಗಳು ಬೆಳಗ್ಗೆ 9 ರಿಂದ ಸಂಜೆ 7 ರವರೆಗೆ ಕಾರ್ಯನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗಿನ ಬೆಳವಣಿಗೆಗಳನ್ನು ಗಮನಿಸಿದ್ದು, ಎಲ್ಲ ಅಂಗಡಿಗಳಲ್ಲಿ ಜನದಟ್ಟಣೆ ಹೆಚ್ಚಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೂ ಕಷ್ಟವೆನಿಸಿದ್ದು, ಹಾಗಾಗಿ ಜನದಟ್ಟಣೆ ಕಡಿಮೆ ಮಾಡುವ ಸಲುವಾಗಿ ಹಾಗೂ ಸುರಕ್ಷಾ ಕ್ರಮಗಳನ್ನು ಪಾಲಿಸುವ ಸಲುವಾಗಿ ಅಂಗಡಿ ಮುಂಗಟ್ಟುಗಳ ಕಾರ್ಯ ನಿರ್ವಹಣಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.
ರಾತ್ರಿ 7ರಿಂದ ಸಂಜೆ 7 ರವರೆಗೆ ಸಾರ್ವಜನಿಕ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಜತೆಗೆ ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲ ಸಿಬಂದಿ ಮತ್ತು ಗ್ರಾಹಕರು ಮುಖಗವಸು ಘಮಾಸ್ಕ್] ನ್ನು ಕಡ್ಡಾಯವಾಗಿ ಧರಿಸಿರಬೇಕು. ಸಾಮಾಜಿಕ ಅಂತರವನ್ನು ಕಾಪಾಡಲು 6 ಅಡಿಗಳ ಅಂತರದಲ್ಲಿ ಗುರುತು ಹಾಕಿರಬೇಕು. ಜತೆಗೆ ಕೋವಿಡ್ 19 ಬಗ್ಗೆ ಸರಕಾರ ಹೊರಡಿಸಿದ ಎಲ್ಲ ಆದೇಶಗಳಲ್ಲಿನ ನಿರ್ದೇಶನಗಳನ್ನು ಚಾಚೂತಪ್ಪದೇ ಪಾಲಿಸಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.