“ಮೌಲ್ಯಯುತ ಶಿಕ್ಷಣದತ್ತ ತೆರೆದುಕೊಳ್ಳಬೇಕು’
Team Udayavani, Jan 26, 2019, 1:15 AM IST
ಕುಂದಾಪುರ: ಸಮಾಜ ಪರ ಹಿತಾಸಕ್ತಿಯನ್ನು ಹುಟ್ಟು ಹಾಕುವ ಮೌಲ್ಯಯುತ ಶಿಕ್ಷಣಕ್ಕೆ ಮಕ್ಕಳು ತೆರೆದುಕೊಂಡಾಗ ಆರೋಗ್ಯಕರ ಬದಲಾವಣೆ ಸಾಧ್ಯ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು.
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂತಾರಾಷ್ಟ್ರೀಯ ಖ್ಯಾತಿಯ ಜಾದುಗಾರ ಓಂ ಗಣೇಶ್ ಕಾಮತ್ ಉದ್ಘಾಟಿಸಿ, ತಾಂತ್ರಿಕತೆಯ ಮೇಲಾಟವಿರುವ ಆಧುನಿಕ ಜಗತ್ತಿನಲ್ಲಿ ಪುಸ್ತಕದ ಜ್ಞಾನಕ್ಕಿಂತ ಮಿಗಿಲಾಗಿ ಸಮಾಜದ ಆಗು-ಹೋಗುಗಳಿಗೆ ಸೂಕ್ಷ¾ವಾಗಿ ಸ್ಪಂದಿಸುವ ಪರಿಜ್ಞಾನದ ಅಗತ್ಯವಿದೆ. ವ್ಯಕ್ತಿಯೋರ್ವನ ಸಾಧನೆ ಅವನೊಳಗಿನ ಪರಿಜ್ಞಾನ, ಪ್ರಾಮಾಣಿಕತೆ ಹಾಗೂ ಪರಿಶ್ರಮವನ್ನು ಆಧರಿಸಿದೆ ಎಂದರು.
ಕಾಲೇಜಿನ ನಿರ್ದೇಶಕ ಪೊ ದೋಮ ಚಂದ್ರಶೇಖರ್, ವಾಣಿಜ್ಯ ಉಪನ್ಯಾಸಕಿ ವೀಣಾ ಭಟ್ ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ಮುಖ್ಯಸ್ಥ ಸುಧಾಕರ್ ಪಾರಂಪಳ್ಳಿ ಸ್ವಾಗತಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಾಣಿಜ್ಯ ಉಪನ್ಯಾಸಕಿ ಅವಿತಾ ಕೋರಿಯಾ ಪರಿಚಯಿಸಿದರು. ಅರ್ಚನಾ ಗದ್ದೆ ನಿರೂಪಿಸಿದರು. ವಾಣಿಜ್ಯ ಉಪನ್ಯಾಸಕಿ ನಿಶಾ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.