2019ರಲ್ಲಿ  ಬಯಲು ಶೌಚ ಮುಕ್ತ ಭಾರತ: ಸಚಿವ ರಮೇಶ ಜಿಗಜಿಣಗಿ


Team Udayavani, Mar 9, 2017, 1:14 PM IST

09-REPORTER-8.jpg

ಉಡುಪಿ: ಸ್ವತ್ಛ ಭಾರತ ಆಂದೋಲನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಮಹಿಳೆಯರ ಕೊಡುಗೆ ಮಹತ್ವದ್ದಾಗಿದೆ. 2019ರ ಅಕ್ಟೋಬರ್‌ 2ರಂದು ಗಾಂಧೀಜಿಯವರ 150ನೇ ಜನ್ಮದಿನದ ಪ್ರಯುಕ್ತ ಭಾರತವನ್ನು ಬಯಲು ಶೌಚ ಮುಕ್ತ ದೇಶವನ್ನಾಗಿ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದು, ಅವರಿಗೆ ಎಲ್ಲರ ಸಹಕಾರ ಅಗತ್ಯ ಎಂದು ಕೇಂದ್ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ಸಚಿವ ರಮೇಶ ಜಿಗಜಿಣಗಿ ಹೇಳಿದರು.

ಅವರು ಬುಧವಾರ ಪುರಭವನದಲ್ಲಿ ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಹಾಗೂ ಪರ್ಕಳ ಲಯನ್ಸ್‌ ಕ್ಲಬ್‌ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ವತ್ಛ ಶಕ್ತಿ ಸಪ್ತಾಹ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

3.50 ಕೋಟಿ ಶೌಚಾಲಯ
ಸ್ವತ್ಛ ಭಾರತ ಯೋಜನೆಯಡಿ ಇದುವರೆಗೆ ದೇಶಾದ್ಯಂತ ಒಟ್ಟು 3.50 ಕೋಟಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಶೇ. 61.27 ಮಂದಿ ಶೌಚಾಲಯಗಳನ್ನು ಹೊಂದಿದ್ದಾರೆ. ರಾಜ್ಯದಲ್ಲಿ ಶೇ. 64 ಮಂದಿಗೆ ಶೌಚಾಲಯ ಸೌಲಭ್ಯ ಕಲ್ಪಿಸಲಾಗಿದೆ. ಇದುವರೆಗೆ 5,45,987 ವೈಯಕ್ತಿಕ ಹಾಗೂ 53 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ. 10,500 ಕೋ.ರೂ. ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ರಾಜ್ಯ ಸರಕಾರಗಳಿಗೆ 8,853 ಕೋ.ರೂ. ಖರ್ಚು ಮಾಡಿವೆ. ಈ ಆರ್ಥಿಕ ವರ್ಷದಲ್ಲಿ ರಾಜ್ಯ ಸರಕಾರಗಳಿಗೆ ಸುಮಾರು 14 ಸಾವಿರ ಕೋ. ರೂ. ಅನುದಾನ ನೀಡಲು ಯೋಜನೆ ಸಿದ್ಧವಾಗಿದೆ ಎಂದರು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮಾತನಾಡಿದರು. 

ಚೇತನಾ ಗಂಗಾ, ಸರಳಾ ಕಾಂಚನ್‌, ಧನಲಕ್ಷ್ಮೀ, ವಸಂತಿ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಗ್ರೇಸಿ ಗೋನ್ಸಾಲ್ವಿಸ್‌, ರಾಧಾಕೃಷ್ಣ ಮೆಂಡನ್‌ ಉಪಸ್ಥಿತರಿದ್ದರು. ಜಿ.ಪಂ. ಯೋಜನಾಧಿಕಾರಿ ಶ್ರೀನಿವಾಸ್‌ ರಾವ್‌ ಸ್ವಾಗತಿಸಿದರು. ಯುವಜನಾ-ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ನಿರ್ವಹಿಸಿದರು.

ಬಯಲು ಶೌಚ ಮುಕ್ತ: ಉಡುಪಿ ಮುಂಚೂಣಿ
ಬಯಲು ಶೌಚ ಮುಕ್ತ ಆಂದೋಲನದಲ್ಲಿ ರಾಜ್ಯ ಉತ್ತಮವಾಗಿ ಪ್ರಗತಿ ಸಾಧಿಸಿದ್ದು, 6,829 (ಶೇ. 24.92) ಗ್ರಾಮಗಳನ್ನು ಬಯಲು ಶೌಚ ಮುಕ್ತ ಗ್ರಾಮಗಳನ್ನಾಗಿ ಘೋಷಿಸಲಾಗಿದೆ. 5 ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬೆಂಗಳೂರು ಗ್ರಾ., ಬೆಂಗಳೂರು ಹಾಗೂ 28 ತಾಲೂಕುಗಳನ್ನು ಬಯಲು ಶೌಚ ಮುಕ್ತವೆಂದು ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ 253.43 ಕೋ. ರೂ. ಅನುದಾನ ಹಂಚಲಾಗಿದ್ದು, ಅನಂತರ ಸಿಎಂ ಕೋರಿಕೆ ಮೇರೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಲಾಗಿದೆ. ಕರ್ನಾಟಕವನ್ನು ಶೀಘ್ರ ಬಯಲು ಶೌಚ ಮುಕ್ತ ರಾಜ್ಯವನ್ನಾಗಿ ಘೋಷಿಸಲು ಕೇಂದ್ರ ಅಗತ್ಯ ನೆರವು ಒದಗಿಸಿದೆ ಎಂದು ಸಚಿವ ಜಿಗಜಿಣಗಿ ಹೇಳಿದರು.

ಮಹಿಳೆಯರ ಪಾತ್ರ ಅಪಾರ
ನೈರ್ಮಲ್ಯದಲ್ಲಿ ಮಹಿಳೆಯರ ಪಾತ್ರ ಅಪಾರವಾದದ್ದು. ಸ್ವತ್ಛತಾ ಪ್ರೇರಕರಾದ ನೀವು ಪ್ರತಿಯೊಬ್ಬರಿಗೂ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸಬೇಕು. ಶೌಚಾಲಯಗಳ ನಿರ್ಮಾಣ ಮಾತ್ರವಲ್ಲದೆ ಅವುಗಳನ್ನು ಸಮರ್ಪಕ ಬಳಕೆ ಮಾಡುವಂತೆ ಮನವೊಲಿಸುವಲ್ಲಿಯೂ ಶ್ರಮಿಸಬೇಕು ಎಂದು ಮಹಿಳೆಯರಿಗೆ ಅವರು ಕರೆ ನೀಡಿದರು.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.