ಮಣಿಪಾಲದಿಂದ ಬೆಂಗಳೂರು: ಅಂಗಾಂಗ ರವಾನೆ


Team Udayavani, Jun 27, 2018, 4:40 AM IST

organ-donation-26-6.jpg

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರ್ಕಳ ತೆಳ್ಳಾರಿನ ನಿರ್ಮಲಾ ಭಟ್‌ (51) ಅವರ ಹೃದಯದ ಕವಾಟಗಳನ್ನು (ಹಾರ್ಟ್‌ ವಾಲ್ವ್) ಮಂಗಳವಾರ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಮತ್ತು ಪಿತ್ತಜನಕಾಂಗವನ್ನು ಬಿಜಿಎಸ್‌ ಆಸ್ಪತ್ರೆಗೆ ಯಶಸ್ವಿಯಾಗಿ ರವಾನಿಸಲಾಯಿತು. ಮಧ್ಯಾಹ್ನದ ವೇಳೆಗೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ರವಾನಿಸುವುದೆಂದು ನಿರ್ಧರಿಸಲಾಗಿತ್ತಾದರೂ ಪ್ರತಿಕೂಲ ಹವಾಮಾನದ ಕಾರಣ ರಸ್ತೆ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೊಂಡೊಯ್ದು, ಅನಂತರ ವಿಮಾನದಲ್ಲಿ ಬೆಂಗಳೂರಿಗೆ ಸಾಗಿಸಲಾಯಿತು.

ಗ್ರೀನ್‌ ಕಾರಿಡಾರ್‌ 
ಅಪರಾಹ್ನ 3.30ಕ್ಕೆ ಮಣಿಪಾಲದಿಂದ ಆ್ಯಂಬುಲೆನ್ಸ್‌ನಲ್ಲಿ ಅಂಗಾಂಗಗಳನ್ನು ಕೊಂಡೊಯ್ಯಲಾಯಿತು. ಈ ಸಂದರ್ಭ ಪೊಲೀಸರು ರಸ್ತೆಯುದ್ದಕ್ಕೂ ಇತರ ವಾಹನಗಳ ಓಡಾಟವನ್ನು ನಿರ್ಬಂಧಿಸಿ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆಗೊಳಿಸಿದ್ದರು. ಬೆಂಗಳೂರಿಗೆ ಹೋಗಬೇಕಾದ ಹೃದಯದ ಕವಾಟಗಳನ್ನು ಒಂದು ಆ್ಯಂಬುಲೆನ್ಸ್‌ನಲ್ಲಿಯೂ ಮಂಗಳೂರು ಕೆಎಂಸಿಗೆ ಕೊಂಡೊಯ್ಯಬೇಕಾಗಿದ್ದ ಕಿಡ್ನಿಯನ್ನು ಇನ್ನೊಂದು ಆ್ಯಂಬುಲೆನ್ಸ್‌ನಲ್ಲಿಯೂ ಸಾಗಿಸಲಾಯಿತು.

ನಡೆದು ಹೋಗುತ್ತಿದ್ದಾಗ ದುರ್ಘ‌ಟನೆ
ನಿರ್ಮಲಾ ಭಟ್‌ ಅವರು ಜೂ. 22ರಂದು ರಾತ್ರಿ 7.30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ ಢಿಕ್ಕಿ ಹೊಡೆದು ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೆ ಜೂ.25ರಂದು ಮಧ್ಯಾಹ್ನ 12.30ಕ್ಕೆ ಅವರ ಮಿದುಳು ನಿಷ್ಕ್ರಿಯವಾಗಿರುವುದನ್ನು ವೈದ್ಯರ ತಂಡ ಘೋಷಿಸಿತು. ಅವರ ಪತಿ ವಾಸುದೇವ ಭಟ್‌ ಹಾಗೂ ಕುಟುಂಬದ ಸದಸ್ಯರು ಅಂಗಾಂಗ ದಾನಕ್ಕೆ ಇಚ್ಛೆ ವ್ಯಕ್ತಪಡಿಸಿದರು. ಅದರಂತೆ ಟ್ರಾನ್ಸ್‌ಪ್ಲಾಂಟ್‌ ಅಥಾರಿಟಿಯವರ ಉಪಸ್ಥಿತಿಯಲ್ಲಿ ಅಂಗಾಂಗ ದಾನಕ್ಕೆ ವ್ಯವಸ್ಥೆ ಮಾಡಲಾಯಿತು.

ನಮಿಸಿ ಬೀಳ್ಕೊಟ್ಟ ಮನೆಮಂದಿ

ಉಮ್ಮಳಿಸಿ ಬರುತ್ತಿದ್ದ ದುಃಖವನ್ನು ತಡೆದು ನಿಂತಿದ್ದ ಪತಿ ವಾಸುದೇವ ಭಟ್‌, ಪುತ್ರ ಅಶ್ವಿ‌ನ್‌ ಭಟ್‌ ಹಾಗೂ ಮನೆಮಂದಿ ಅಂಗಾಂಗಗಳನ್ನು ಆ್ಯಂಬುಲೆನ್ಸ್‌ನಲ್ಲಿ ಒಯ್ಯುವಾಗ ಆ್ಯಂಬುಲೆನ್ಸ್‌ ಸನಿಹಕ್ಕೆ ಬಂದು ನಮಿಸಿ ಬೀಳ್ಕೊಟ್ಟರು. ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು, ವೈದ್ಯರು ಸ್ಥಳದಲ್ಲಿದ್ದರು.

ಬಂದು ವಾಪಸಾದ ಹೆಲಿಕಾಪ್ಟರ್‌
ಹೃದಯದ ಕವಾಟಗಳನ್ನು ಸಾಗಿಸುವುದಕ್ಕಾಗಿ 3 ಗಂಟೆಯ ಸುಮಾರಿಗೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್‌ ಬಂದಿತ್ತು. ಆದರೆ ಮಳೆಯ ಕಾರಣ ಹೆಲಿಕಾಪ್ಟರ್‌ ಹಾರಾಟ ಅಸಾಧ್ಯ ಎಂಬ ಮಾಹಿತಿ ನೀಡಲಾಯಿತು. ಕೆಲವು ಸಮಯದ ಬಳಿಕ ಹೆಲಿಕಾಪ್ಟರ್‌ ವಾಪಸಾಯಿತು. 

ಏಳು ಮಂದಿಗೆ ಜೀವದಾನ 
ಅಂಗಾಂಗಗಳನ್ನು ನೀಡಿರುವುದರಿಂದ 7 ಮಂದಿಯ ಜೀವ ಉಳಿಸಿದಂತಾಗಿದೆ. ಕಳೆದ 15 ದಿನಗಳ ಹಿಂದೆ ಕೂಡ ಇದೇ ರೀತಿ ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಅಂಗಾಂಗ ರವಾನಿಸಲಾಗಿತ್ತು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಹೇಳಿದ್ದಾರೆ. 

ಅಮ್ಮ ದೇಹದಾನಕ್ಕೆ ಅಂದೇ ನಿರ್ಧರಿಸಿದ್ದಳು’
ಅಮ್ಮ ತನ್ನ ದೇಹದಾನಕ್ಕೆ ಅಂದೇ ನಿರ್ಧರಿಸಿದ್ದಳು. ಅದಕ್ಕೆ ಅರ್ಜಿಫಾರಂಗಳನ್ನು ಕೂಡ ಸಿದ್ಧಪಡಿಸಿದ್ದಳು. ಈ ಬಗ್ಗೆ ಒಮ್ಮೆ ನನ್ನ ಬಳಿ ಹೇಳಿದ್ದಳು ಕೂಡ. ಆದರೆ ಇಷ್ಟು ಬೇಗ ನಮ್ಮನ್ನು ಅಗಲುತ್ತಾಳೆ ಎಂದು ಗೊತ್ತಿರಲಿಲ್ಲ ಎನ್ನುತ್ತಿದ್ದಂತೆಯೇ ಪುತ್ರ ಅಶ್ವಿ‌ನ್‌ ಅವರ ದುಃಖದ ಕಟ್ಟೆಯೊಡೆಯಿತು. ವೈದ್ಯರು ತಾಯಿಯ ದೇಹದ ಅಂಗಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯುವ ಪ್ರಕ್ರಿಯೆಯಲ್ಲಿ ತೊಡಗಿದ್ದಾಗ ಹೊರಗಡೆ ದುಃಖವನ್ನು ತಡೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಅಶ್ವಿ‌ನ್‌ ‘ತಾಯಿಯಿಂದ ಹಲವರಿಗೆ ಜೀವ ಸಿಗುತ್ತಿದೆ…’ ಎಂದು ಮೌನವಾದರು. ಅಶ್ವಿ‌ನ್‌ ಭಟ್‌ ಇತ್ತೀಚೆಗಷ್ಟೇ ಉದ್ಯೋಗಕ್ಕೆ ಸೇರಿದ್ದಾರೆ. ತಂಗಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

– ಒಂದು ಹೃದಯದ ಕವಾಟ ಬೆಂಗಳೂರು ನಾರಾಯಣ ಹೃದಯಾಲಯದ ಮಗುವಿಗೆ, ಇನ್ನೊಂದು ಅದೇ ಆಸ್ಪತ್ರೆಯ ಬೇರೊಬ್ಬ ವ್ಯಕ್ತಿಗೆ.

– ಒಂದು ಕಿಡ್ನಿ ಮಂಗಳೂರು ಕೆಎಂಸಿ ರೋಗಿಗೆ, ಇನ್ನೊಂದು ಕಿಡ್ನಿ ಮಣಿಪಾಲ ಕೆಎಂಸಿ ರೋಗಿಗೆ.

– ಕಣ್ಣುಗುಡ್ಡೆಗಳು (ಕಾರ್ನಿಯಾ) ಮಣಿಪಾಲ ಕೆಎಂಸಿಯ ಇಬ್ಬರು ರೋಗಿಗಳಿಗೆ

– ಒಂದು ಲಿವರ್‌ ಬೆಂಗಳೂರು ಬಿಜಿಎಸ್‌ ಆಸ್ಪತ್ರೆ ರೋಗಿಗೆ.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.