ನಮ್ಮ ಶಾಲೆ ನಮ್ಮ ಹೆಮ್ಮೆ: ನೂರಾರು ಸಾಧಕರನ್ನು ನೀಡಿದ ಹೆಬ್ರಿ ಸರಕಾರಿ ಹಿ. ಪ್ರಾ. ಶಾಲೆ

137 ವರ್ಷಗಳ ಇತಿಹಾಸದ ಜ್ಞಾನ ದೇಗುಲ

Team Udayavani, Nov 3, 2019, 5:24 AM IST

nn-37

1882 ಶಾಲೆ ಸ್ಥಾಪನೆ
ಪ್ರಸ್ತುತ 305 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಹೆಬ್ರಿ: ಕಳೆದ 137 ವರ್ಷ ಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಹಿರಿಯ ವಿದ್ಯಾ ದೇಗುಲ ಹೆಬ್ರಿ ತಾಲೂಕಿನ ಹೃದಯಭಾಗದಲ್ಲಿರುವ ಹೆಬ್ರಿ ಸರಕಾರಿ ಹಿ.ಪ್ರಾ.ಶಾಲೆ ಶತಮಾನ ಕಂಡು ಮುನ್ನುಡೆಯುತ್ತಿದೆ.

1882 ರಲ್ಲಿ ಹುಲ್ಲಿನ ಮಾಡು, ಚಿಕ್ಕ ತರಗತಿ ಕೊಠಡಿ ಓರ್ವ ಶಿಕ್ಷಕರೊಂದಿಗೆ ಶಾಲೆ ಸ್ಥಾಪನೆಯಾಯಿತು. ಅನಂತರ ದಿ| ಭುಜಂಗ ಬಲ್ಲಾಳರ ಬಾಡಿಗೆೆ ಕಟ್ಟದಲ್ಲಿದ್ದ ಶಾಲೆ ಅಭಿವೃದ್ಧಿ ಹೊಂದುತ್ತಾ ದಾನಿಗಳ ಹಾಗೂ ಸರಕಾರದ ನೆರವಿನಿಂದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ಆರಂಭದಲ್ಲಿ ಶಿವರಾಮಯ್ಯ ನಂದಳಿಕೆ ಶಿಕ್ಷಕರೊಂದಿಗೆ ಆರಂಭವಾದ ಶಾಲೆ ಶತಮಾನೋತ್ಸವ ಸಂದರ್ಭಕ್ಕೆ ಸುಮಾರು 90 ಜನ ಶಿಕ್ಷಕರು ಸೇವೆ ಸಲ್ಲಿಸಿದ್ದು ಹಲವರು ಇಲ್ಲಿ ಕಲಿತು ಇಲ್ಲಿಯೇ ಶಿಕ್ಷಕರಾಗಿ ಸೇವೆ ಸಲ್ಲಿಸಿರುವುದು ವಿಶೇಷ.
2004ರಲ್ಲಿ ಸುಸಜ್ಜಿತ ತರಗತಿ ಕೋಣೆ ಮೂಲಭೂತ ಸೌಲಭ್ಯಗಳನ್ನು ಒಳಗೊಂಡು ಇದೀಗ 305 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ.

ಮೂಲ ಸೌಕರ್ಯ
ಸುಮಾರು 2.95 ಎಕ್ರೆ ಜಾಗದಲ್ಲಿ ವಿಶಾಲವಾದ ಆಟದ ಮೈದಾನ,ಸುಸಜ್ಜಿತ ತರಗತಿ ಕೋಣೆ, ಕಂಪ್ಯೂಟರ್‌ ಲ್ಯಾಬ್‌ , ವಿಜ್ಞಾನ ಪ್ರಯೋಗಾಲಯ , ಆಂಗ್ಲ ಮಾಧ್ಯಮ ಶಿಕ್ಷಣ , ಶೌಚಾಲಯ, ನಲಿಕಲಿ ಕೊಠಡಿ, ಸ್ಮಾರ್ಟ್‌ ಕ್ಲಾಸ್‌, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ , ಆವರಣ ಗೋಡೆ , ನೀರಿನ ಬಾವಿ , ಅಕ್ಷರ ದಾಸೋಹ ಮೊದಲಾದ ಮೂಲ ಸೌಕರ್ಯದೊಂದಿಗೆ ದಾನಿಗಳ ನೆರವಿನೊಂದಿಗೆ ಪುನರುಜ್ಜೀವನ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಇಲ್ಲಿ ಚಂಪಕಾ ಕೆ. ಅವರು ಮುಖ್ಯ ಶಿಕ್ಷಕಿಯ ಜತೆ 10 ಮಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಸಾಧಕ ಹಳೆ ವಿದ್ಯಾರ್ಥಿಗಳು
ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ರಘುರಾಮ್‌ ಸೋಮಯಾಜಿ, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ , ಕಾರ್ಕಳದ ಮಾಜಿ ಶಾಸಕ ದಿ| ಗೋಪಾಲ್‌ ಭಂಡಾರಿ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹರಿದಾಸ ಬಿ.ಸಿ.ರಾವ್‌ ಶಿವಪುರ , ಸೀತಾನದಿ ಗಣಪಯ್ಯ ಶೆಟ್ಟಿ , ಸಾಹಿತಿ ಡಾ| ಪ್ರದೀಪ್‌ ಕುಮಾರ್‌ ಹೆಬ್ರಿ , ಉದ್ಯಮ ಕ್ಷೇತ್ರದ ರಮಣ ನಾಯಕ್‌ ಸೇರಿದಂತೆ ನೂರಾರು ಸಾಧಕರನ್ನು ನಾಡಿಗೆ ನೀಡಿದ ಹೆಮ್ಮೆ ಈ ಶಾಲೆಗೆ ಇದೆ.

ಕಡಿಮೆಯಾಗದ ವಿದ್ಯಾರ್ಥಿ ಸಂಖ್ಯೆ
ಬಂಗಾರುಗುಡ್ಡೆ, ಇಂದಿರಾನಗರ, ಕನ್ಯಾನ, ಗಾಂಧಿ ನಗರ, ಕುಚ್ಚಾರು, ಮುದ್ರಾಡಿ, ಶಿವಪುರ, ವಂಡಾರಬೆಟ್ಟು ,  ಕೊಂಡೆಜೆಡ್ಡು, ಸೊಳ್ಳೆ ಕಟ್ಟೆ , ನಾಡ್ಪಾಲು ,ಮಂಡಾಡಿ ಜೆಡ್ಡು, ಸೀತಾನದಿ, ಸೋಮೇಶ್ವರ ಸುತ್ತಮುತ್ತಲಿನ ಗ್ರಾಮದ ಜನರು ಇದೇ ಶಾಲೆಗೆ ಬರುತ್ತಿದ್ದು ಹಿಂದೆ 800 ವಿದ್ಯಾರ್ಥಿಗಳನ್ನು ಹೊಂದಿ ಹಿರಿಯ ಶಾಲೆ ಎಂಬ ಹೆಗ್ಗಳಿಕೆ ಇತ್ತು. ಇಂದು ಈ ಶಾಲೆಯ ವ್ಯಾಪ್ತಿಯಲ್ಲಿ 16 ಸರಕಾರಿ 2 ಖಾಸಗಿ ಶಾಲೆಗಳಿದ್ದರೂ 305 ವಿದ್ಯಾರ್ಥಿಗಳನ್ನು ಹೊಂದಿದ್ದು ಇಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಉತ್ತಮ ಶಾಲೆ ಪ್ರಶಸ್ತಿಯೊಂದಿಗೆ 2011-12 ರಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಶಕುಂತಲಾ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಗಣ್ಯರ ಭೇಟಿ
ಕೋಟ ಶಿವರಾಮ ಕಾರಂತ, ಪೇಜಾವರ ಶ್ರೀ, ಅದಮಾರು ಶ್ರೀ, ಮಾಜಿ ಮಖ್ಯಮಂತ್ರಿ
ಡಾ| ಎಂ. ವೀರಪ್ಪ ಮೊಲಿ ಸೇರಿದಂತೆ ಹಲವು ಗಣ್ಯರು ಈ ಶಾಲೆಗೆ ಭೇಟಿ ನೀಡಿದ್ದರು.

137 ವರ್ಷಗಳ ಇತಿಹಾಸದಲ್ಲಿ ದಾಖಲೇ ವಿದ್ಯಾರ್ಥಿಗಳನ್ನು ಹೊಂದಿದ ನಮ್ಮ ಶಾಲೆ ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ದಾನಿಗಳ ನೆರವು ಹಾಗೂ ಗುಣಮಟ್ಟದ ಬೋಧಕ ವೃಂದದೊಂದಿಗೆ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಪ್ರತಿವರ್ಷ ಹೆಚ್ಚುತ್ತಿದೆ.

-ಚಂಪಕಾ ಕೆ. , ಶಾಲಾ ಮುಖ್ಯ ಶಿಕ್ಷಕಿ

1948ರಲ್ಲಿ ನಾನು ಈ ಶಾಲೆ ಹಳೆವಿದ್ಯಾರ್ಥಿ ಯಾಗಿರುವುದು ಅಷ್ಟೆ ಅಲ್ಲದೆ ಕಲಿತ ಶಾಲೆಯಲ್ಲಿಯೇ ಶಿಕ್ಷಕನಾಗಿ ವಿದ್ಯಾರ್ಥಿಗಳಿಗೆ ಕಲಿಸುವ ಯೋಗ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಈ ಶಾಲೆಯ ಶತಮಾನೋತ್ಸವದ ಸ್ಮರಣ ಸಂಚಿಕೆಯ ಸಂಪಾದಕನಾಗಿ ಸೇವೆ ಸಲ್ಲಿಸುವುದರ ಜತೆಗೆ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಾಲೆ ಅಡಿಪಾಯ ಹಾಕಿಕೊಟ್ಟಿದೆ.

-ಅಂಬಾತನಯ ಮುದ್ರಾಡಿ, ಹಿರಿಯ ಸಾಹಿತಿ ( ಹಳೆವಿದ್ಯಾರ್ಥಿ)

ಟಾಪ್ ನ್ಯೂಸ್

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.