‘ಓವರ್ ಬ್ರಿಡ್ಜ್, ಅಂಡರ್ ಪಾಸ್ ಯೋಜನೆಗೆ ಯತ್ನ’
ಜಿಲ್ಲಾಧಿಕಾರಿಯಿಂದ ರಾ.ಹೆ. 66ರ ಕಟಪಾಡಿ ಜಂಕ್ಷನ್ ಸಮಸ್ಯೆ ಪರಿಶೀಲನೆ
Team Udayavani, Sep 5, 2019, 5:00 AM IST
ಕಟಪಾಡಿ: ಕಾಪು ಕ್ಷೇತ್ರ ಶಾಸಕ ಲಾಲಾಜಿ ಆರ್. ಮೆಂಡನ್ ಕೋರಿಕೆಯ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ (ಎ.ಡಿ.ಸಿ.) ಸದಾಶಿವ ಪ್ರಭು ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಸಮಸ್ಯೆ ಪರಿಶೀಲಿಸಿದ್ದು, ಸ್ಥಳೀಯಾಡಳಿತದೊಂದಿಗೆ ಸಮಸ್ಯೆ ಆಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕಾಪು ಕ್ಷೇತ್ರದ ಪ್ರಮುಖ ಸಮಸ್ಯೆ ಬಗ್ಗೆ ಪರಿಶೀಲನೆಗಾಗಿ ಆಗಮಿಸಿದ್ದು, ಕಟಪಾಡಿ ಜಂಕ್ಷನ್ ಸಮಸ್ಯೆ ಸಹಿತ ರಾಷ್ಟ್ರೀಯ ಹೆದ್ದಾರಿ ಇತರ ಸಮಸ್ಯೆ ಪರಿಹರಿಸಲು ಎನ್‌ಎಚ್ಎಐ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಜೆಕ್ಟ್ ಡೈರೆಕ್ಟರ್ ಜತೆ ಸಭೆ ನಡೆಸಲಾಗುತ್ತದೆ. ಹೆಚ್ಚುವರಿ ಯೋಜನೆಯ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುತ್ತದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಆಡಳಿತಕ್ಕೆ ಚುರುಕು ಮುಟ್ಟಿಸುವ ಇರಾದೆಯೊಂದಿಗೆ ಪ್ರಮುಖ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಕಟಪಾಡಿ ಜಂಕ್ಷನ್‌ನಲ್ಲಿ ನಿತ್ಯ ಪೊಲೀಸರು ಹೆದ್ದಾರಿ ದಾಟಿಸುವ ಕೆಲಸ ಮಾಡಬೇಕಾದ ಪರಿಸ್ಥಿತಿ ಇನ್ನೂ ಇದೆ. ದೊಡ್ಡ ಸಮಸ್ಯೆಗೆ ಸುಖಾಂತ್ಯ ಕಾಣುವ ನಿಟ್ಟಿನಲ್ಲಿ ಓವರ್ ಬ್ರಿಡ್ಜ್ ಹಾಗೂ ಅಂಡರ್ ಪಾಸ್ ಬಗ್ಗೆ ಯೋಜನೆ ರೂಪಿಸುವ ಇಂಗಿತ ವ್ಯಕ್ತಪಡಿಸಿದ್ದು, ಕೇಂದ್ರ, ರಾಜ್ಯ ಸರಕಾರದ ಸಹಕಾರ ದೊಂದಿಗೆ ಸುಖಾಂತ್ಯ ಕಾಣಲು ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.