ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ
Team Udayavani, Oct 24, 2021, 6:03 AM IST
ಉಡುಪಿ: ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತತ್‌ಕ್ಷಣ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್ ಗೆ ರೂ.1,940 ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 1,960 ರೂ. ನಿಗದಿಪಡಿಸಿದ್ದು, ಜಿಲ್ಲೆಯ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭತ್ತ ಖರೀದಿ ಕೇಂದ್ರಗಳಿಗೆ ಗ್ರೇಡರ್‌ಗಳನ್ನು ನೇಮಿಸುವಂತೆ ಮತ್ತು ಗೋದಾಮುಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ 20 ಅಕ್ಕಿ ಮಿಲ್ಲುಗಳ ಮಾಲಕರು ಭತ್ತವನ್ನು ಹಲ್ಲಿಂಗ್ ಮಾಡಿಕೊಡಲು ಒಪ್ಪಿದ್ದು, ರೈತರು ಬೆಳೆದ ಎಫ್ಎಕ್ಯೂ ಮಾದರಿಯ ಎಂಒ 04, ಜಯ, ಕಜೆ ಜಯ, ಜ್ಯೋತಿ ಭತ್ತದ ತಳಿಗಳನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ, ತೋಟಗಾರಿಕೆ, ಸಹಕಾರ ಇಲಾಖೆ ಮತ್ತು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.