“ಪೇಜಾವರ ಶ್ರೀಗಳಿಗೆ ಪದ್ಮವಿಭೂಷಣ ನಾಡಿಗೆ ಗೌರವ’
Team Udayavani, Jan 27, 2020, 5:20 AM IST
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಲಭಿಸಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಇಡೀ ನಾಡಿಗೆ ಸಂದ ಗೌರವ ಎಂದು ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.
ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿ,ಶ್ರೀಪಾದರು ಧರ್ಮ ಜಾಗೃತಿ ಮೂಡಿಸಿದ ಶಾಂತಿದೂತ. ಅವರು ಪ್ರತಿಪಾದಿಸಿದ ವಿಚಾರ, ಸಿದ್ಧಾಂತಗಳಿಗೆ ಗೌರವ ಕೊಟ್ಟು, ನಾವೂ ಆ ಹಾದಿಯಲ್ಲಿಯೇ ಮುನ್ನ ಡೆಯುವ ಮೂಲಕ ಪ್ರಶಸ್ತಿಯ ಮೌಲ್ಯ ವನ್ನು ಹೆಚ್ಚಿಸಬೇಕು ಎಂದರು.
ನ್ಯಾಯಸಮ್ಮತ ತನಿಖೆ
ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಯಾರೇ ತಪ್ಪಿತಸ್ಥರಿದ್ದರೂ ನ್ಯಾಯಸಮ್ಮತ ತನಿಖೆ ಮಾಡುತ್ತೇವೆ. ಇಲ್ಲಿ ಯಾವುದೇ ಸಂಘಟನೆ, ವ್ಯಕ್ತಿಯ ಬಗ್ಗೆ ಉÇÉೇಖ ಮಾಡಿಲ್ಲ. ಪೊಲೀಸರು ಮೊದಲನೇ ದಿನದಿಂದ ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ತೀವ್ರವಾದ ತನಿಖೆ ನಡೆಸಿದ ಪರಿಣಾಮ ಆರೋಪಿ ಶರಣಾಗಿ¨ªಾನೆ. ಪೊಲೀಸರು ನಿಷ್ಪಕ್ಷವಾಗಿ ಮತ್ತು ದಕ್ಷತೆಯಿಂದ ಕೆಲಸ ಮಾಡಿದ್ದರಿಂದ ಪ್ರಕರಣವನ್ನು ಶೀಘ್ರ ಭೇದಿಸಲು ಸಾಧ್ಯವಾಯಿತು. ಅಪರಾಧ ಅಪರಾಧವೇ, ಅಪರಾಧಿ ಅಪರಾಧಿಯೇ. ಬಗ್ಗೆ ಯಾರೂ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದರು.
ಸಂಪುಟ ವಿಸ್ತರಣೆ ವಿಚಾರ ಸಿಎಂ ಗಮನದಲ್ಲಿದೆ. ಸಂಪುಟ ವಿಸ್ತರಣೆಯ ಸಂಪೂರ್ಣ ಜವಾಬ್ದಾರಿ ಅವರಿಗಿದೆ. ಅವರು ಆದಷ್ಟು ಬೇಗ ಪಕ್ಷದ ವರಿಷ್ಠರ ಜತೆಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯ ಸರಕಾರ ಬೆಳೆ ಸಾಲ ಮತ್ತು ಮಹಿಳೆಯರ ಒಡವೆ ಸಾಲಕ್ಕೆ ನೀಡುವ ಸಬ್ಸಿಡಿ ವಿವರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆಗೆ ಮಾತನಾಡಲಾಗುತ್ತದೆ. ಕೋಳಿ ಮೊಟ್ಟೆ ವ್ಯಾಪಾರ ವಂಚನೆ ಸಂಬಂಧಿಸಿದಂತೆ ಶೀಘ್ರವಾಗಿ ತನಿಖೆ ಮಾಡಿ, ಆರೋಪಿಗಳನ್ನು ಬಂಧಿಸಲಾಗುತ್ತದೆ. ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲು ಆದೇಶ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.