ಪಡುಬೆಳ್ಳೆ: ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ
Team Udayavani, Jul 15, 2017, 9:03 AM IST
ಶಿರ್ವ: ಪಡುಬೆಳ್ಳೆ- ಪಾಂಬೂರು ಬಳಿ ಗುರುವಾರ ಮುಂಜಾನೆ ಒಂದೇ ಕುಟುಂಬದ ನಾಲ್ವರು ವಿಷ ಪದಾರ್ಥ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ತಾಯಿ ಮತ್ತು ಸಹೋದರರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಶಂಕರ ಆಚಾರ್ಯ ಅವರು ಸುಮಾರು ವರ್ಷಗಳಿಂದ ಪಡುಬೆಳ್ಳೆ ಯಲ್ಲಿ ಜುವೆಲರಿ ಅಂಗಡಿ ನಡೆಸುತ್ತಿದ್ದು ಉಡುಪಿ, ಶಿರ್ವ ಮತ್ತಿತರ ಕಡೆಗಳಿಂದ ಆಭರಣಗಳನ್ನು ತಂದು ತಯಾರಿಸಿ ಕೊಡುತ್ತಿದ್ದರು. ಸಾಲಬಾಧೆಯ ಬಗ್ಗೆ ಪರಿಚಿತರು, ಮಿತ್ರರು, ಸಂಬಂಧಿಕರು ನೆಂಟರಿಷ್ಟರಲ್ಲಿ ಹೇಳಿಕೊಳ್ಳಿರಲಿಲ್ಲ. ಆದರೂ ದೊಡ್ಡ ಮೊತ್ತದ ಸಾಲ ಬಾಧೆಯಿಂದ ಬಳಲುತ್ತಿದ್ದು ಸಾಲಬಾಧೆ ತಾಳಲಾಗದೆ ಅಥವಾ ಅವಮಾನ ತಪ್ಪಿಸಲು ಕುಟುಂಬ ಸಮೇತ ಆತ್ಮಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಕಾರಣ ಮಾತ್ರ ನಿಗೂಢವಾಗಿದೆ.
ಆತ್ಮಹತ್ಯೆಗೂ ಮುನ್ನ ಕರೆ: ಶಂಕರ ಆಚಾರ್ಯ ಅವರ ಹಿರಿಯ ಪುತ್ರಿ ಮುಂಜಾನೆ ಆತ್ಮಹತ್ಯೆಗೂ ಮುನ್ನ ತಾನು ಮದುವೆಯಾಗುವ ಹುಡುಗನೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಅಪ್ಪನ ಸುಮಾರು 10 ಲ.ರೂ. ಮೌಲ್ಯದ ಆಭರಣ ಕಳೆದುಹೋಗಿ ಆರ್ಥಿಕ ಸಂಕಷ್ಟದಲ್ಲಿದ್ದು ಧನ ಸಹಾಯ ಮಾಡಲು ವಿನಂತಿಸಿದ್ದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕಾಪು ವೃತ್ತ ನಿರೀಕ್ಷಕ ಹಾಲ ಮೂರ್ತಿ ರಾವ್ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್