ಪಾದೂರು – ಕೂರಾಲು: ಚಿರತೆ ಸೆರೆ
Team Udayavani, Aug 5, 2019, 5:03 AM IST
ಕಾಪು: ಮಜೂರು ಗ್ರಾ.ಪಂ. ವ್ಯಾಪ್ತಿಯ ಪಾದೂರು ಗ್ರಾಮದ ಕುರಾಲು ಪ್ರದೇಶದಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಚಿರತೆ ಶನಿವಾರ ರಾತ್ರಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದರಿಂದಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ರಾತ್ರಿ ಸಮಯದಲ್ಲಿ ಜನವಸತಿ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಚಿರತೆ ಯಿಂದಾಗಿ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದ ಚಿರತೆಯಿಂದಾಗಿ ಜನ ಭಯಭೀತರಾಗಿದ್ದರು.
ಈ ಬಗ್ಗೆ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು ನೀಡಿದ ದೂರಿನ ಮೇರೆಗೆ ಕಾಪು ಉಪ ವಲಯ ಅರಣ್ಯ ಅಧಿಕಾರಿ ನಾಗೇಶ್ ಬಿಲ್ಲವ ಅವರು ಸಿಬಂದಿಗಳ ಜತೆಗೂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಾತ್ರವಲ್ಲದೇ ಜು. 11ರಂದು ಚಿರತೆಗಾಗಿ ಬೋನನ್ನು ಇರಿಸಿದ್ದರು.
ಶನಿವಾರ ರಾತ್ರಿ ಬೇಟೆ ಅರಸಿಕೊಂಡು ಬಂದ ಬೋನಿನ ಬಳಿ ಬಂದಿದ್ದು ಬೋನಿನಲ್ಲಿ ಕಟ್ಟಿ ಹಾಕಿದ್ದ ಆಹಾರವನ್ನು ತಿನ್ನಲೆಂದು ಪ್ರಯತ್ನಿಸಿದಾಗ ಬೋನಿನ ಒಳಗೆ ಸಿಲುಕಿಕೊಂಡಿದೆ. ಸುದ್ದಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿ ನಾಗೇಶ್ ಬಿಲ್ಲವ ಮತ್ತು ಸಿಬಂದಿ ಸ್ಥಳಕ್ಕೆ ತೆರಳಿ ಚಿರತೆಯನ್ನು ಉಡುಪಿಗೆ ಸ್ಥಳಾಂತರಿಸಿ ಕಾಡಿಗೆ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.