ಪಂಚಾಯತ್‌ರಾಜ್ ವ್ಯವಸ್ಥೆ ಬಲಗೊಳ್ಳಬೇಕಿದೆ: ರಮೇಶ್
ಶಿರ್ವ: ಉದ್ಯೋಗ ಖಾತರಿ ಯೋಜನೆ ಗ್ರಾಮಸಭೆ
Team Udayavani, Jun 29, 2019, 5:08 AM IST
ಶಿರ್ವ: ಶಿರ್ವ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ನೋಡಲ್ ಅಧಿಕಾರಿ ರಮೇಶ್ ಎಸ್. ಎನ್. ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಶಿರ್ವ ಗ್ರಾ.ಪಂ. ಸಭಾ ಭವನದಲ್ಲಿ ನಡೆಯಿತು.
ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ರಾಜು ಮೂಲ್ಯ ಮಾತನಾಡಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಮುದಾಯ ಸಹಭಾಗಿತ್ವದಲ್ಲಿ ನೋಂದಣಿ ಮಾಡಿಕೊಂಡು ದುಡಿಯುವ ಕೈಗಳಿಗೆ ಕೆಲಸ ನೀಡುವಂತಾಗಿ ಪಂಚಾಯತ್‌ರಾಜ್ ವ್ಯವಸ್ಥೆ ಬಲಪಡಿಸಬೇಕು. ಗ್ರಾಮೀಣ ಪ್ರದೇಶದ ಅರ್ಹ ಕುಟುಂಬ 100 ದಿನ ಕೆಲಸ ಪಡೆದುಕೊಂಡು ಜೀವನೋಪಾಯ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ವಾರಿಜಾ ಪೂಜಾರ್ತಿ ಮತು ತಾ.ಪಂ. ಸದಸ್ಯೆ ಗೀತಾ ವಾಗ್ಲೆ ಮಾತನಾಡಿದರು. ಜಿ.ಪಂ. ಸದಸ್ಯ ವಿಲ್ಸನ್ ರೊಡ್ರಿಗಸ್, ಗ್ರಾ.ಪಂ. ಉಪಾಧ್ಯಕ್ಷ ದೇವದಾಸ ನಾಯಕ್, ವಿಮಲ ವೇದಿಕೆಯಲ್ಲಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತಪದ್ಮನಾಭ ನಾಯಕ್ ಯೋಜನೆಯ ಬಗ್ಗೆ ಅರಿವು ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿ ಉದ್ಯೋಗ ಖಾತರಿ ಯೋಜನೆಯು ಕಾಯಿದೆ ಕೂಡಾ ಆಗಿದ್ದು ಅದನ್ನು ಮೀರುವಂತಿಲ್ಲ,ಅಲ್ಲದೆ ಭೂ ಪರಿವರ್ತನೆಯಾದ ಜಾಗಕ್ಕೆ ಉದ್ಯೋಗ ಖಾತರಿ ಯೋಜನೆಯ ಸವಲತ್ತು ಸಿಗುವುದಿಲ್ಲ ಎಂದು ಹೇಳಿದರು. ಗ್ರಾಮ ಕರಣಿಕ ವಿಜಯ್ ಸಾಮಾಜಿಕ ಭದ್ರತೆಯ ಪಿಂಚಣಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾ.ಪಂ. ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಬಿ.ಎನ್.ವಿ.ಗಳು, ಕೂಲಿ ಕಾರ್ಮಿಕರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು, ಪಂಚಾಯತ್ ಸಿಬಂದಿ ಭಾಗವಹಿಸಿದ್ದರು.
ಗ್ರಾ.ಪಂ. ಕಾರ್ಯದರ್ಶಿ ಮಂಗಳಾ ಯೋಜನೆಯ ಖರ್ಚು ವೆಚ್ಚಗಳ ವರದಿ ಮಂಡಿಸಿದರು. ಪಿಡಿಒ ಅನಂತ ಪದ್ಮನಾಭ ನಾಯಕ್ ಸ್ವಾಗತಿಸಿ, ವಂದಿಸಿದರು.
ಉದ್ಯೋಗ ಚೀಟಿ ಮಾಡಿಸಿಕೊಳ್ಳಿ
ಯೋಜನೆಯ ಅನುಷ್ಠಾನದ ಹಂತದಲ್ಲಿ ಯಾವುದೇ ಗೊಂದಲವಿಲ್ಲದಂತೆ ಚೆಕ್‌ಲಿಸ್ಟ್ ನಡೆಸಿ ಕ್ರಮ ಬದ್ಧವಾಗಿ ನಡೆಸಬೇಕಾಗಿದೆ.ಯೋಜನೆಯಲ್ಲಿ ಗ್ರಾಮಸ್ಥರಿಗೆ ವೈಯಕ್ತಿಕ ಮತ್ತು ಸಮುದಾಯ ಕಾಮ ಗಾರಿ ನಡೆಸಲು ವಿಪುಲ ಅವಕಾಶವಿದ್ದು ಉದ್ಯೋಗ ಚೀಟಿ ಮಾಡಿಸದ ಗ್ರಾಮಸ್ಥರು ಹೆಚ್ಚು ಭಾಗವಹಿಸಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕು.
-ರಮೇಶ್ ಎಸ್. ಎನ್., ನೋಡಲ್ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.