ದೇವರ ಹೆಸರಿನಲ್ಲಿ ಕೇರಳ ಉದ್ವಿಗ್ನ: ಪಂದಳ ರಾಜರ ಕಳವಳ


Team Udayavani, Nov 2, 2018, 9:45 AM IST

shabri.jpg

ಉಡುಪಿ: ಕೇರಳದಲ್ಲಿಇದೇ ಪ್ರಥಮ ಬಾರಿಗೆ ದೇವರ ಹೆಸರಿನಲ್ಲಿ ಉದ್ವಿಗ್ನತೆ ಕಂಡುಬಂದಿದೆ ಎಂದು ಶಬರಿಮಲೆ ಕ್ಷೇತ್ರದ ಆಡಳಿತದಾರರಾದ ಪಂದಳ ರಾಜ ಶಶಿಕುಮಾರ ವರ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜ ಉಡುಪಿ ಜಿಲ್ಲೆ, ಧರ್ಮ ಫೌಂಡೇಶನ್‌ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಗುರುವಾರ ನಡೆದ “ಧರ್ಮ’ ಮಹಾಸಹಸ್ರಾರ್ಚನ ಪೂಜೆ ಮತ್ತು ಧರ್ಮ ಜಾಗೃತಿ ಅಭಿಯಾನದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇವಾಲಯದ ಪದ್ಧತಿ ಆಡಳಿತಗಾರರಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದರ ಅರ್ಥ ಎಂದು ಪ್ರಶ್ನಿಸಿದರು.

ಭಕ್ತರ ತೀರ್ಮಾನವೇ ಅಂತಿಮ
ಧಾರ್ಮಿಕ ಕ್ಷೇತ್ರದಲ್ಲಿ ಬದಲಾವಣೆ ಭಕ್ತರು ಮಾಡಬೇಕೇ ವಿನಾ ನ್ಯಾಯಾಲಯವಲ್ಲ. ಧರ್ಮದ ವಿಷಯದಲ್ಲಿ ಅದು ಹಸ್ತಕ್ಷೇಪ ಮಾಡಬಾರದು ಎಂದು ಆಶೀರ್ವಚನ ನೀಡಿದ ಶ್ರೀ ಪೇಜಾವರ ಶ್ರೀಪಾದರು ಹೇಳಿದರು. ಶಬರಿಮಲೆ ವಿಷಯದಲ್ಲಿ ಸರಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಪ್ರಜೆಗಳ ಮೇಲೆ ಧರ್ಮದ ಹೆಸರಿನಲ್ಲಿ ಸರಕಾರ ಹಸ್ತಕ್ಷೇಪ ಮಾಡ ಬಾರದು. ಆದ್ದರಿಂದ ತೀರ್ಪನ್ನು ಮರು ಪರಿಶೀಲಿಸಬೇಕಾಗಿದೆ ಎಂದರು.
ಉತ್ತರಕಾಶಿ ಕಪಿಲಾಶ್ರಮದ ಶ್ರೀ ರಾಮಚಂದ್ರ ಸ್ವಾಮೀಜಿ ಭವ್ಯ ಸಂಸ್ಕೃತಿ ಹೊಂದಿದ ಧರ್ಮದ ವಿಷಯದಲ್ಲಿ ಮೂಗು ತೂರಿಸುವ ಹಕ್ಕು ನ್ಯಾಯಾಲಯಗಳಿಗೆ ಇಲ್ಲ ಎಂದರು.

ಅಯ್ಯಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಮ್ಯುನಿಸ್ಟರು ಈಗ ಅಯ್ಯಪ್ಪ ಭಕ್ತರಿಗೆ ವಿರುದ್ಧವಾಗಿದ್ದಾರೆ ಎಂದು ಕಾಸರಗೋಡಿನ ಕುಂಟಾರು ರವೀಶ ತಂತ್ರಿ ಹೇಳಿದರು. ಅಯ್ಯಪ್ಪ ಸೇವಾ ಸಮಾಜದ ರಾಜ್ಯಾಧ್ಯಕ್ಷ, ನಟ ಶಿವರಾಮ್‌ ಮಾತ ನಾಡಿ, ಭಕ್ತರ ಭಾವನೆಗೆ  ವಿರುದ್ಧವಾಗಿ ರುವ ತೀರ್ಪನ್ನು ಮರುಪರಿಶೀಲಿಸ ಬೇಕು ಎಂದರು.  ಹರಿಯಪ್ಪ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಗಿರೀಶ್‌ ಜಿ.ಎನ್‌. ಸ್ವಾಗತಿಸಿ, ಬೈಕಾಡಿ ಸುಪ್ರಸಾದ ಶೆಟ್ಟಿ ಪ್ರಸ್ತಾವನೆಗೈದರು. ಪಂದಳ ರಾಜರ ಪತ್ನಿ ಮೀರಾ ವರ್ಮ, ಬಾಲಕೃಷ್ಣ ಹೆಗ್ಡೆ, ರಂಜಿತ್‌ ಶೆಟ್ಟಿ, ಪ್ರಕಾಶ ಶೆಟ್ಟಿ, ವಿಜಯ ಕೊಡವೂರು, ರಾಧಾಕೃಷ್ಣ ಮೆಂಡನ್‌, ಕಿಶೋರ್‌ ಡಿ. ಸುವರ್ಣ, ಭೋಜರಾಜ ಕಿದಿಯೂರು, ಬಾಲಕೃಷ್ಣ ಅಮೀನ್‌ ಮಲ್ಪೆ, ಮಹಾಬಲ ಗುರುಸ್ವಾಮಿ, ಉದಯ ಶೆಟ್ಟಿ, ಗೋಪಾಲ ಪೂಜಾರಿ, ರಘುಚಂದ್ರ, ಬಾಬು ಶೆಟ್ಟಿ, ರಾಜು ಗುರುಸ್ವಾಮಿ ಉಪಸ್ಥಿತರಿದ್ದರು. ದಾಮೋದರ ಶರ್ಮ ನಿರ್ವಹಿಸಿದರು.

ಶಬರಿಮಲೆ ಜಗತ್ತಿನಾದ್ಯಂತ ಭಕ್ತರನ್ನು ಹೊಂದಿರುವ ಕ್ಷೇತ್ರ. ಕೇರಳದ ಮಹಿಳೆಯರೂ ಸೇರಿದಂತೆ ಅಸಂಖ್ಯಾಕ ಭಕ್ತರು ಪ್ರತಿಭಟನೆ, ಕಳವಳ ವ್ಯಕ್ತಪಡಿಸುತ್ತಿದ್ದಾರೆ. ದೇವಸ್ವಂ ಮಂಡಳಿ, ಸರಕಾರ ಏನು ಮಾಡುತ್ತದೋ ಗೊತ್ತಿಲ್ಲ. ಮಣಿಕಂಠ ನಮ್ಮ ಮನೆ ಮಗು. ಅನ್ಯಾಯವಾಗಲು ನಾವು ಬಿಡುವುದಿಲ್ಲ.
ಪಂದಳ ರಾಜ ಶಶಿಕುಮಾರ ವರ್ಮ

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.