ಪರ್ತಗಾಳಿ ಶ್ರೀ ವಿದ್ಯಾಧಿರಾಜತೀರ್ಥ ಸ್ವಾಮಿಗಳು ಅಸ್ತಂಗತ
Team Udayavani, Jul 19, 2021, 3:36 PM IST
ಉಡುಪಿ : ಪರ್ತಗಾಳಿ ಶ್ರೀ ವಿದ್ಯಾಧಿರಾಜತೀರ್ಥ ವಡೇರ ಸ್ವಾಮಿಗಳು ಇಂದು(ಸೋಮವಾರ, ಜುಲೈ 19) ಇಹಲೋಕ ತ್ಯಜಿಸಿ ವಿಷ್ಣು ಪಾದ ಸೇರಿದ್ದಾರೆ.
ಇದನ್ನೂ ಓದಿ : ಕಟೀಲ್ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ:ಅಶ್ವತ್ಥ್ ನಾರಾಯಣ್
ಸನ್ಯಾಸ ಸ್ವೀಕರಿಸಿ 54 ವರ್ಷ ಸುಧೀರ್ಘವಾಗಿ ಮಠವನ್ನು, ಮಠದ ಆಡಳಿತದಲ್ಲಿರುವ ದೇವಾಲಯಗಳನ್ನು, ಮಠದ ಲಕ್ಷಾಂತರ ಶಿಷ್ಯರನ್ನು ಧಾರ್ಮಿಕವಾಗಿ ಮುನ್ನಡೆಸಿ ಅಪಾರ ಪ್ರಗತಿಗೆ ಕಾರಣರಾಗಿದ್ದ ಶ್ರೀಗಳು ಹೃದಯಾಘಾತದಿಂದ ತಮ್ಮ 76ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಗಂಗೊಳ್ಳಿಯಲ್ಲಿ 3-8-1945ರಲ್ಲಿ ಜನಿಸಿದ ರಾಘವೇಂದ್ರ ಆಚಾರ್ಯ ಫೇ.26, 1967 ರಲ್ಲಿ ಸನ್ಯಾಸ ಸ್ವಿಕರಿಸಿದ್ದರು. ಅಸೇತು ಹಿಮಾಚಲ ತೀರ್ಥ ಯಾತ್ರೆ ಮಾಡಿದ ಶ್ರೀಗಳು ತಮ್ಮ ಶಿಷ್ಯರ ಸರ್ವತೋಮುಖ ಅಭಿವೃದ್ಧಿಯ ಹೊರತಾಗಿ ಇನ್ನಾವುದನ್ನು ಆಲೋಚಿಸಲೇ ಇಲ್ಲ. ಶಿಸ್ತು, ಸಮಯ ಪಾಲನೆಗೆ ಹೆಸರಾಗಿದ್ದ ಶ್ರೀಗಳು ಶಿಷ್ಯರನ್ನು ಸ್ವಿಕರಿಸಿ ಅವರಿಗೆ ಮಾರ್ಗದರ್ಶನ ಮಾಡಿದ ಶ್ರೀಗಳು ಕರ್ತವ್ಯ ಮುಗಿಯಿತು ಎಂಬಂತೆ ಹೊರಟು ಹೋಗಿದ್ದು ಶಿಷ್ಯರಿಗೆ ಮತ್ತು ಅವರ ಬಂಧುಗಳಿಗೆ ಅಪಾರ ದುಃಖ ಉಂಟುಮಾಡಿದೆ.
ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ ದೇವಾಲಯದ ಅರ್ಚಕ ಮನೆತನದವರು. ಶ್ರೀ ಲಕ್ಷ್ಮೀನಾರಾಯಣ ಆಚಾರ್ಯ ಮತ್ತ ಶ್ರೀಮತಿ ದಂಪತಿಯ ದ್ವಿತೀಯ ಪುತ್ರರಾಗಿ ಜನಿಸಿದರು.
ಅವರ ಪೂರ್ವಾಶ್ರಮದ ಹೆಸರು ರಾಘವೇಂದ್ರ. ಗಂಗೊಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮ ಶಿಕ್ಷಣ ಪಡೆದು ಕುಂದಾಪುರದ ಭಂಡಾರಕರ ಕಾಲೇಜಿನಲ್ಲಿ ಓದುವಾಗ ಶ್ರೀ ದ್ವಾರಕಾನಾಥ ಶ್ರೀಗಳ ಶಿಷ್ಯತ್ವ ಹೊಂದುವ ಅವಕಾಶ ಬಂತು. ಗುರುವರ್ಯರ ಆದೇಶ ಕೇಳಿ ಖುಷಿಯಿಂದ ಸನ್ಯಾಸಾಶ್ರಮ ಸ್ವೀಕಾರಕ್ಕೆ ಒಪ್ಪಿದರು. ಮುಂಬಯಿ ವಡಾಲಾದ ದ್ವಾರಕಾನಾಥ ಭವನದಲ್ಲಿ ಅವರು ಶ್ರೀ ದ್ವಾರಕಾನಾಥ ಸ್ವಾಮಿಗಳಿಂದ ಫೇ.26, 1967 ರಲ್ಲಿ ಸನ್ಯಾಸ ದೀಕ್ಷೆ ಪಡೆದು ಶ್ರೀ ಮದ್ ವಿದ್ಯಾಧಿರಾಜ ತೀರ್ಥ ಸ್ವಾಮಿಗಳಾಗಿ ನಾಮಕರಣಗೊಂಡರು.
ಸುಮಾರು ಐದು ದಶಕಗಳ ಸನ್ಯಾಸಾಶ್ರಮದಲ್ಲಿದ್ದ ಅವರು ಶ್ರೀಗಳು 1971 ರಲ್ಲಿ ಗೋಕರ್ಣ ಪರ್ಥಗಾಳಿ ಮಠದ ಪೀಠಾಧಿಪತಿಗಳಾಗಿದ್ದರು. ಮೂಲತಃ ಉಡಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯವರಾದ ಶ್ರೀಗಳು ಇದೇ ಜುಲೈ 28 ರಂದು ಪರ್ತಗಾಳಿ ಮಠದಲ್ಲಿ ಚಾತುರ್ಮಾಸ್ಯ ವ್ರತ ಸ್ವೀಕಾರ ಮಾಡುವವರಿದ್ದರು.
ಶ್ರೀಗಳು ತಮ್ಮ ಅವಧಿಯಲ್ಲಿ ಪರ್ತಗಾಳಿ ಮೂಲಮಠದ ಜೊತೆಗೆ ಶಾಖಾ ಮಠಗಳ ಅಭಿವೃದ್ಧಿ ಮಾಡಿದ್ದರು. ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು. ಅವರ ನಿಧನ ಅಪಾರ ಭಕ್ತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಇದನ್ನೂ ಓದಿ : ಕಟೀಲ್ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ:ಅಶ್ವತ್ಥ್ ನಾರಾಯಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.