“ಹೆತ್ತವರು ಮಕ್ಕಳಿಗೆ ಗೆಳೆಯರಂತೆ ತಿದ್ದಿ-ಬುದ್ಧಿ ಹೇಳಬೇಕು’
ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಪ್ತ ಸಲಹೆ ಕಾರ್ಯಕ್ರಮ
Team Udayavani, Mar 6, 2020, 10:12 PM IST
ಕೋಟ: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಿಗೆ ಸರಿ ತಪ್ಪುಗಳ ನಿರ್ಧಾರದ ಪ್ರೌಢಿಮೆ ಇರುವುದಿಲ್ಲ. ಹೀಗಾಗಿ ಅವರನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಮಾಡಲು ಹೆತ್ತವರು ಉತ್ತಮ ಗೆಳೆಯರಂತೆ ಅವರಿಗೆ ಮಾರ್ಗದರ್ಶಿಸಬೇಕು ಎಂದು ಡಾ| ಎ.ವಿ. ಬಾಳಿಗ ಆಸ್ಪತ್ರೆಯ ಖ್ಯಾತ ಮನೋರೋಗ ತಜ್ಞ ಡಾ| ವಿರೂಪಾಕ್ಷ ದೇವರಮನೆ ತಿಳಿಸಿದರು.
ಅವರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆಯಲ್ಲಿ ಐಕ್ಯೂಎಸಿ ಹಾಗೂ ಆಪ್ತ ಸಮಾಲೋಚನೆ ಸಮಿತಿ ಮತ್ತು ರಕ್ಷಕ – ಶಿಕ್ಷಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರಿಗಾಗಿ ಆಪ್ತ ಸಲಹೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಕಾಲೇಜು ಪ್ರಾಂಶು ಪಾಲ ನಿತ್ಯಾನಂದ ವಿ. ಗಾಂವ್ಕರ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ನಡತೆ ಮತ್ತು ಭವಿಷ್ಯ ರೂಪಿಸುವಲ್ಲಿ ಆಪ್ತ ಸಲಹೆಯ ಆವಶ್ಯಕತೆಯಿದ್ದು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಐಕ್ಯೂಎಸಿ ಸಂಚಾಲಕ ರವಿಪ್ರಸಾದ ಕೆ.ಜಿ., ಆಪ್ತ ಸಲಹಾ ಸಮಿತಿ ಸಂಚಾಲಕ ಕೃಷ್ಣಮೂರ್ತಿ ವೈಆರ್., ರಾಜಣ್ಣ ಎಂ., ರಕ್ಷಕ – ಶಿಕ್ಷಕ ಸಂಘದ ಸಂಚಾಲಕ ಮಂಜುನಾಥ ಆಚಾರಿ ಎಳ್ಳಂಪಳ್ಳಿ, ಸಂಘದ ಅಧ್ಯಕ್ಷ ಜನಾರ್ಧನ ಆಚಾರ್, ವಿದ್ಯಾರ್ಥಿ ಕ್ಷೇಮಪಾಲನಾ ಧಿಕಾರಿ ನಾಗರಾಜ ವೈದ್ಯ ಎಂ. ಉಪಸ್ಥಿತರಿದ್ದರು. ಉಪನ್ಯಾಸಕ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು.
ತಂತ್ರಜ್ಞಾನದ ದುರ್ಬಳಕೆ ಕಳವಳಕಾರಿ
ಇಂದಿನ ಯುವಜನಾಂಗ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವ ವೇಗ ಹಾಗೂ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ. ನೆಗೆಟಿವ್ ಚಿಂತನೆಗಳು, ಅವಕಾಶಗಳ ಅಸಮರ್ಪಕ ಬಳಕೆ ಹಾಗೂ ಮಕ್ಕಳು ಮಾದಕ ವ್ಯಸನಿಗಳಾಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಕಳವಳಕಾರಿ ಅಂಶವಾಗಿದೆ ಎಂದು ಡಾ| ವಿರೂಪಾಕ್ಷ ದೇವರುಮನೆ ಕಳವಳ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.