![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 21, 2019, 5:26 AM IST
ಉಡುಪಿ: ಜಿಲ್ಲೆಯಲ್ಲಿ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಸಿಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರಿಂದಾಗಿ ದಿನನಿತ್ಯ ಓಡಾಡುವ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ.
ಮಣಿಪಾಲದಿಂದ ಅಲೆವೂರು ಸಂಪರ್ಕಿಸುವ ರಸ್ತೆ ಮತ್ತು ಎಂ.ಜೆ. ಸಿ.ಯಿಂದ ಬರುವ ರಸ್ತೆ ಮೂರು ಕಡೆಗಳಿಂದ ಕೂಡುತ್ತವೆ. ಈ ಭಾಗದಲ್ಲಿಯೇ ಬಿಎಸ್‌ಎನ್ ಎಲ್ ಕಚೇರಿ , ಸಿಂಡಿಕೇಟ್ ಬ್ಯಾಂಕಿನ ಮುಖ್ಯ ಕಚೇರಿ ಇವೆ. ಈ ರಸ್ತೆಯಲ್ಲಿ ಬಸ್, ಕಾರು, ದ್ವಿಚಕ್ರ ವಾಹನಗಳನ್ನು ರಸ್ತೆಗೆ ಹೊಂದಿಕೊಂಡೇ ನಿಲ್ಲಿಸುವುದರಿಂದ ವಾಹನಗಳ ಸರಾಗ ಓಡಾಟಕ್ಕೆ ಅಡಚಣೆಯಾಗುತ್ತಿದೆ.
ಈ ರಸ್ತೆಯಲ್ಲಿ ದಿನನಿತ್ಯ ನೂರಾರು ವಾಹನಗಳು ಓಡಾಡುತ್ತಿದ್ದು, ಮೂರು ಕಡೆಗಳಿಂದ ವಾಹನಗಳು ನುಗ್ಗಿ ಬರುವಾಗ ಗೊಂದಲದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಕಚೇರಿಯ ಇನ್ನೊಂದು ಬದಿಗೆ ತಿರುವು ಕೂಡ ಇದೆ. ತಿರುವಿನಿಂದ ಸಂಚರಿಸುವ ವಾಹನ ಸವಾರರಿಗೆ ಈ ರಸ್ತೆಯಲ್ಲಿ ಪಾರ್ಕ್ ಮಾಡಿದ ವಾಹನಗಳಿಂದ ತೊಂದರೆ ಉಂಟಾಗುತ್ತಿದೆ.
ಇದರೊಂದಿಗೆ ಅಪಘಾತ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚು. ಇದರ ಪಕ್ಕದಲ್ಲೆ ಶಾಲೆ ಇರುವುದರಿಂದ ಮಕ್ಕಳಿಗೂ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆಗೆ ಅನುಕೂಲ ಕಲ್ಪಿಸಬೇಕಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.