ತಂಬಾಕು ಕಂಪೆನಿಗಳೊಂದಿಗೆ ಸಹಭಾಗಿತ್ವ ಸಲ್ಲ: ಜಿಲ್ಲಾಧಿಕಾರಿ
Team Udayavani, Jul 10, 2019, 5:00 AM IST
ಉಡುಪಿ: ಸರಕಾರಿ ಇಲಾಖೆಗಳು ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪೆನಿಗಳೊಂದಿಗೆ ಯಾವುದೇ ಸಮಾರಂಭ ನಡೆಸಕೂಡದು. ಅವರ ಸಹಭಾಗಿತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಅನುದಾನ, ಪರಿಕರಗಳನ್ನು ಪಡೆಯಬಾರದು. ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್ಸಿಟಿಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಉದ್ದೇಶದಿಂದ ಸರಕಾರಿ ಸಂಸ್ಥೆಗಳೊಂದಿಗೆ ಸೇರಿ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯಿದ್ದು, ಇದರಿಂದ ತಂಬಾಕು ಉತ್ಪನ್ನಗಳ ಬಳಕೆಗೆ ನಾವೇ ಸಹಕಾರ ನೀಡಿದಂತಾಗುತ್ತದೆ.
ವಿಶ್ವ ಆರೋಗ್ಯ ಸಂಸ್ಥೆಯ ಎಫ್ಸಿಟಿಸಿ ನಿಯಮಗಳ ಕುರಿತಂತೆ ಎಲ್ಲ ಕಚೇರಿಗಳಲ್ಲಿ ಫಲಕಗಳನ್ನು ಅಳವಡಿಸಬೇಕು. ಈ ಫಲಕಗಳನ್ನು ಆರೋಗ್ಯ ಇಲಾಖೆ ಮೂಲಕ ಪಡೆಯಿರಿ ಎಂದು ತಿಳಿಸಿದರು.
ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಮುಖ್ಯ ಕೇಂದ್ರವಾಗಿರಿಸಿಕೊಂಡು ಪ್ರತಿವರ್ಷ ಜಾಗೃತಿ ಮೂಡಿಸುವ ಕೆಲಸ ಮಾಡುವುದರೊಂದಿಗೆ ತಂಬಾಕು ನಿಷೇಧ ಸಮಿತಿ ರಚಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ ತಿಳಿಸಿದರು.
426 ಪ್ರಕರಣ- 45,550 ರೂ. ದಂಡ
ಕಾಪು ಮತ್ತು ಮಲ್ಪೆ ಸಮುದ್ರ ತೀರದಲ್ಲಿ ಧೂಮಪಾನ ಮುಕ್ತ ಸಮುದ್ರ ತೀರ ಎಂಬ ನಾಮಫಲಕಗಳನ್ನು ಅಳವಡಿಸಲಾಗಿದೆ, ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೋಟ್ಪಾ ನಿಯಂತ್ರಣ ತನಿಖಾ ದಳವು 2019ರ ಎಪ್ರಿಲ್ನಿಂದ ಜೂನ್ ವರೆಗೆ ಒಟ್ಟು 426 ಪ್ರಕರಣಗಳನ್ನು ದಾಖಲಿಸಿ 45,550 ರೂ. ದಂಡ ವಸೂಲಿ ಮಾಡಿದೆ ಎಂದು ಡಾ| ವಾಸುದೇವ ಹೇಳಿದರು.
ಎಎಸ್‌ಪಿ ಕುಮಾರ ಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಜಿ. ರಾಮ, ಜಿಲ್ಲಾ ಸರ್ಜನ್ ಡಾ| ಮಧುಸೂದನ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲುಷಿತ ಐಸ್‌ಕ್ಯಾಂಡಿ: ಕ್ರಮಕ್ಕೆ ಸೂಚನೆ
ಉಡುಪಿ: ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್‌ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲುಷಿತ ನೀರಿನ ಐಸ್‌ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು ಈ ಕುರಿತಂತೆ ಐಸ್‌ಕ್ಯಾಂಡಿ ತಯಾರಕರ ವಿರುದ್ಧ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಈ ಕುರಿತಂತೆ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ. ಇದರಿಂದ ಕಲುಷಿತ ಆಹಾರ ಉತ್ಪನ್ನ ತಯಾರಕರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ ತಯಾರಿಕಾ ಘಟಕಗಳಿಗೆ ಸುರಕ್ಷತಾ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಆಹಾರ ತಯಾರಿಕೆಯ ಸುರಕ್ಷಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಬೀಚ್‌ಗಳಲ್ಲಿನ ಗೂಡಂಗಡಿಗಳಲ್ಲಿ ತಯಾರಿಸುವ ಆಹಾರದ ಗುಣಮಟ್ಟ ಪರಿಶೀಲಿಸಬೇಕು ಮತ್ತು ಐಸ್ ಕ್ರೀಂ ಇತ್ಯಾದಿ ಸೇವಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವ ಕುರಿತು ಪರಿಶೀಲಿಸಿ ವರದಿ ನೀಡಬೇಕು ಎಂದರು.
ಜಿಲ್ಲೆಯ ಮೀನುಗಳಲ್ಲಿ ಫಾರ್ಮಾಲಿನ್ ಸಿಂಪಡಣೆ ಕುರಿತಂತೆ ಪರಿಶೀಲಿಸಲಾಗಿ ನೆಗೆಟಿವ್ ವರದಿ ಬಂದಿದೆ. 68 ಮೀನು ಸಾಗಾಟ ವಾಹನಗಳಿಗೆ ಆಹಾರ ಸುರಕ್ಷತಾ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ 15 ಕುಡಿಯುವ ನೀರು ಘಟಕಗಳಿದ್ದು ಅನಧಿಕೃತ ಘಟಕಗಳು ಇಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ್ ಮಾಹಿತಿ ನೀಡಿದರು.
ಎಎಸ್ಪಿ ಕುಮಾರ ಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಜಿ. ರಾಮ, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ಉಪಸ್ಥಿತರಿದ್ದರು.
ಕಳವಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.