ಕೊಡಗಿಗೆ ಪೇಜಾವರ ಮಠದಿಂದ 10 ಲ.ರೂ.
Team Udayavani, Aug 23, 2018, 2:35 AM IST
ಉಡುಪಿ: ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಕೊಡಗು ಜಿಲ್ಲೆ ಮತ್ತು ಸುಳ್ಯ ಭಾಗಕ್ಕೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 10 ಲ.ರೂ. ದೇಣಿಗೆ ನೀಡಿದ್ದು ಮುಂದೆ ಮತ್ತಷ್ಟು ಸಹಾಯ ನೀಡುವುದಾಗಿ ತಿಳಿಸಿದ್ದಾರೆ. ಇಲ್ಲಿ ಭೀಕರ ಪ್ರವಾಹದಿಂದಾದ ಅಗಾಧ ಸಂಕಷ್ಟ, ಸಂತಾಪಗಳನ್ನು ತಿಳಿದು ನಾಡಿನ ಜನರು ಅತ್ಯಂತ ಉದ್ವಿಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ಸ್ಪಂದಿಸುವುದು, ಅವರಿಗೆ ಅವಶ್ಯವಿರುವ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಮಠದ ಟ್ರಸ್ಟ್‌ನಿಂದ ಸದ್ಯಕ್ಕೆ 10 ಲ.ರೂ. ಬಿಡುಗಡೆ ಮಾಡುತ್ತಿದ್ದೇವೆ.
ಚಾತುರ್ಮಾಸ್ಯವಾದುದರಿಂದ ನಮಗೆ ಪ್ರತ್ಯಕ್ಷವಾಗಿ ಅಲ್ಲಿಗೆ ಹೋಗಲು ಸಾಧ್ಯವಾಗುವುದಿಲ್ಲ. ಚಾತುರ್ಮಾಸ್ಯವಾದ ಕೂಡಲೇ ಅಲ್ಲಿಗೆ ಹೋಗಿ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಹಾರದ ಕಾರ್ಯಸ್ವರೂಪವನ್ನು ನಿರ್ಧರಿಸಿ ಜನತೆಯ ವಿಶೇಷ ಸಹಾಯದ ಜತೆಗೆ ಮಠದ ಟ್ರಸ್ಟ್‌ನಿಂದ ಇನ್ನೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತೇವೆ. ದೀನ ದುಃಖೀತರ ಸೇವೆಯು ಭಗವಂತನ ಪರಮಾರಾಧನೆಯೆಂಬ ಭಾಗವತದ ಮಾತಿನಂತೆ ಮಹಾ ಜನತೆ ಈ ಪವಿತ್ರ ಕಾರ್ಯದಲ್ಲಿ ತಮ್ಮಿಂದ ಸಾಧ್ಯವಾದ ಸಹಾಯವನ್ನು ಮಾಡಬೇಕಾಗಿ ಅಪೇಕ್ಷಿಸುವುದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ.
ಕೊಡಗು ಪ್ರಕೃತಿ ವಿಕೋಪ : ಪರಿಶೀಲನೆಗೆ ಧರ್ಮಸ್ಥಳದಿಂದ ಸಮಿತಿ
ಬೆಳ್ತಂಗಡಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ, ಆಸ್ತಿ ನಷ್ಟ, ಜೀವಹಾನಿ ಕುರಿತಂತೆ ವೇದನೆ ವ್ಯಕ್ತಪಡಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸಂತ್ರಸ್ತರ ನೆಮ್ಮದಿಗಾಗಿ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿರುವ ಜತೆಗೆ, ಸಮಸ್ಯೆಗಳ ಪ್ರತ್ಯಕ್ಷ ಪರಿಶೀಲನೆಗಾಗಿ ತಜ್ಞರ ತಂಡವೊಂದನ್ನು ಕಳುಹಿಸಿ ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಮಾರು 400ಕ್ಕೂ ಮಿಕ್ಕಿದ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಪರಿಸ್ಥಿತಿಯ ವಿವರಣೆಗಳನ್ನು ಹೆಗ್ಗಡೆಯವರು ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ದೀರ್ಘಾವಧಿ ಪುನರ್ ನಿರ್ಮಾಣ ಕಾಮಗಾರಿಯ ಕುರಿತು ಮಾಹಿತಿ ಪಡೆದುಕೊಂಡ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಬೇಕಾದ ನೆರವು ಮತ್ತು ಗಾತ್ರದ ಕುರಿತು ತೀರ್ಮಾನ ಕೈಗೊಳ್ಳಲಾಗುವುದಾಗಿ ಡಾ| ಹೆಗ್ಗಡೆಯವರು ತಿಳಿಸಿರುತ್ತಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.