ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಎಸ್ಸಿ ಮೋರ್ಚಾ ಸಮಾವೇಶ
Team Udayavani, Apr 20, 2024, 1:31 AM IST
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮನೆಯ ದುಡ್ಡಿನಲ್ಲಿ ರಾಜ್ಯದ ಜನತೆಗೆ ಗ್ಯಾರಂಟಿ ನೀಡುತ್ತಿರುವಂತೆ ವರ್ತಿಸುತ್ತಿದ್ದು, ತೆರಿಗೆ ಹೆಚ್ಚಿಸಿ ಜನರ ಸುಲಿಗೆ ನಿರತರಾಗಿದ್ದಾರೆ.
ಹೀಗಾಗಿ ಕಾಂಗ್ರೆಸ್‌ಗೆ ಈ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಹೇಳಿದ್ದಾರೆ.
ಕುಂಜಿಬೆಟ್ಟಿನ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಎಸ್ಸಿ ಮೋರ್ಚಾದ ವತಿಯಿಂದ ಹಮ್ಮಿ ಕೊಂಡಿದ್ದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಡಾ| ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ದಲಿತರ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅನಂತರ ದಲಿತರನ್ನು ವಂಚಿಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಆದರೆ, ಕೇಂದ್ರ ಸರಕಾರ ಪಂಚತೀರ್ಥ ಅಭಿವೃದ್ಧಿ ಮೂಲಕ ಅಂಬೇಡ್ಕರ್‌ಗೆ ವಿಶೇಷ ಗೌರವ ನೀಡಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಒಂದು ಕೋಮಿನ ಮತ ಪಡೆಯಲು ಓಲೈಕೆ ರಾಜಕಾರಣವನ್ನು ಬಹಳ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ ಮತ್ತು ಈಗಲೂ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದೆ. ಓಟಿಗಾಗಿ ಒಂದು ಕೋಮಿನ ಜನರನ್ನು ಓಲೈಸುವ ಮೂಲಕ ಕಾಂಗ್ರೆಸ್ ಸಮಾಜ ದಲ್ಲಿನ ಶಾಂತಿ, ನೆಮ್ಮದಿ ಕೆಡಿಸುವ ಪ್ರಯತ್ನ ಮಾಡುತ್ತಿದೆ. ಕರ್ನಾಟಕ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಬಿಜೆಪಿ ಈ ಬಾರಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ. ಶ್ರೀನಿವಾಸ ಪೂಜಾರಿಯವರು ಸಚಿವರಾಗಿ ಅನೇಕ ಕಾರ್ಯಗಳನ್ನು ಮಾಡಿದ್ದಾರೆ. ಅವರು ಗರಿಷ್ಠ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂದರು.
ಕಾಂಗ್ರೆಸಿಗೆ ಚುನಾವಣೆ ಗೆಲ್ಲಲು ಗ್ಯಾರಂಟಿಗಳೇ ಆಧಾರವಾದರೆ ಬಿಜೆಪಿ ಅಭಿವೃದ್ಧಿ, ದೇಶದ ಹಿತದೃಷ್ಟಿ, ವಿಶ್ವ ಗುರುವಾಗುವತ್ತ ದೃಷ್ಟಿ ನೆಟ್ಟಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೆರಚಿದೆ ಎಂದು ಹೇಳಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಯಂತೆ ಕೈಗಾರೀಕರಣ ಮತ್ತು ನಗರೀಕರಣದ ಮೂಲಕ ಸೊÌàದ್ಯೋಗ ಸೃಷ್ಟಿಸಿ ಆತ್ಮನಿರ್ಭರ ಭಾರತಕ್ಕಾಗಿ ಶ್ರಮಿಸುತ್ತಿದ್ದಾರೆ. ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು, ಅನು ದಾನವನ್ನು ನೀಡಿದ್ದರು. ನಾವೆಲ್ಲರೂ ಒಟ್ಟಾಗಿ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದರು.
ಕೋಟ ಶ್ರೀನಿವಾಸ ಪೂಜಾರಿಯವರು ಭಾಗವಹಿಸಿ, ಇದು ದೇಶದ ಅಧಿಕಾರ ಹಿಡಿಯುವ ಚುನಾವಣೆ. 10 ವರ್ಷದಲ್ಲಿ ದೇಶದಲ್ಲಿ ಆಗಿರುವ ಅಭಿವೃದ್ಧಿ, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಗಮನಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ಎಸ್. ನಾರಾಯಣ್, ಗೋಪಾಲ ಕಳಂಜ, ಕೃಷ್ಣಮೂರ್ತಿ, ಸದಾನಂದ ಬ್ರಹ್ಮಾವರ, ಅಜಿತ್ ಕಪ್ಪೆಟ್ಟು, ಸಂಜೀವ ಕಾರ್ಕಳ, ಮಂಜು ಉಪಸ್ಥಿತರಿದ್ದರು.
ಎಸ್ಸಿ ಮೋರ್ಚಾ ರಾಜ್ಯ ಪ್ರ. ಕಾರ್ಯದರ್ಶಿ ದಿನಕರ ಬಾಬು ಪ್ರಸ್ತಾವನೆಗೈದರು. ಸಂತೋಷ್ ನಿರೂಪಿಸಿದರು. ಜಿಲ್ಲಾಧ್ಯಕ್ಷ ಚಂದ್ರ ಪಂಚವಟಿ ಸ್ವಾಗತಿಸಿದರು.
ಓಟ್‌ಬ್ಯಾಂಕ್‌ಗಾಗಿ ಕಾಂಗ್ರೆಸ್ ಓಲೈಕೆ
ದಲಿತರು, ಹಿಂದುಳಿದವರನ್ನು ಓಟ್ ಬ್ಯಾಂಕ್‌ಗಾಗಿ ಬಳಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನಂತರದಲ್ಲಿ ಆ ಸಮುದಾಯವನ್ನು ನಿರ್ಲಕ್ಷಿಸಿ, ಒಂದು ಕೋಮಿನ ಓಲೈಕೆ ಮಾಡುತ್ತಿದೆ. ಗ್ಯಾರಂಟಿಗಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿದ್ದ 11,144 ಕೋಟಿ ರೂ. ಮೊತ್ತವನ್ನು ವರ್ಗಾಯಿಸಿ ಅನ್ಯಾಯವೆಸಗಿದೆ. ಇದಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.